ರಣಜಿ ಆಡುವ ಮೂಲಕ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್!
ಭಾರತ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ಯಶಸ್ವಿ ಜೈಸ್ವಾಲ್ ( Yashasvi Jaiswal) ಅವರು ಗುರುವಾರ ಮುಂಬೈ ಪರ ರಣಜಿ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದರು. ಆ ಮೂಲಕ ರಣಜಿ ಟ್ರೋಫಿಯಲ್ಲಿಯೂ ಒಂದೇ ತಂಡದ ಪರ ಇನಿಂಗ್ಸ್ ಆರಂಭಿಸಿದ ಭಾರತ ಟೆಸ್ಟ್ ತಂಡದ ಮೊದಲ ಸಕ್ರಿಯ ಆರಂಭಿಕರು ಎಂಬ ದಾಖಲೆಯನ್ನು ರೋಹಿತ್-ಜೈಸ್ವಾಲ್ ಬರೆದಿದ್ದಾರೆ.
ನವದೆಹಲಿ: ಭಾರತ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಅವರು ಗುರುವಾರ 2024-25ರ ಸಾಲಿನ ರಣಜಿ ಟ್ರೋಫಿ ಟೂರ್ನಿಯ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಇನಿಂಗ್ಸ್ ಆರಂಭಿಸಿದರು. ಆ ಮೂಲಕ ರಣಜಿ ಟ್ರೋಫಿ ಒಂದೇ ತಂಡದ ಪರ ಇನಿಂಗ್ಸ್ ಆರಂಭಿಸಿದ ಭಾರತ ಟೆಸ್ಟ್ ತಂಡದ ಮೊದಲ ಸಕ್ರಿಯ ಆರಂಭಿಕರು ಎಂಬ ದಾಖಲೆಯನ್ನು ಈ ಇಬ್ಬರೂ ಬರೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಸ್ಟಾರ್ ಆಟಗಾರರು ವೈಫಲ್ಯ ಅನುಭವಿಸಿದ್ದರು. ಇದರ ಪರಿಣಾಮ ಭಾರತ ತಂಡ ಟೆಸ್ಟ್ ಸರಣಿಯನ್ನು 1-3 ಅಂತರದಲ್ಲಿ ಕಳೆದುಕೊಂಡಿತ್ತು. ಇದಾದ ಬಳಿಕ ಬಿಸಿಸಿಐ ಆಟಗಾರರುಗೆ 10 ಅಂಶಗಳ ಶಿಸ್ತಿನ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಅದರಂತೆ ಅಂತಾರಾಷ್ಟ್ರೀಯ ಆಟಗಾರರು ಕೂಡ ಬಿಡುವಿನ ವೇಳೆಯಲ್ಲಿ ರಣಜಿ ಸೇರಿದಂತೆ ದೇಶಿ ಕ್ರಿಕೆಟ್‌ನಲ್ಲಿ ಆಡಬೇಕೆಂದು ಸೂಚಿಸಿತ್ತು. ಅದರಂತೆ ಮುಂಬೈ ಪರ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಆಡುತ್ತಿದ್ದಾರೆ.
Ranji Trophy: ರಣಜಿಯಲ್ಲೂ ರೋಹಿತ್, ಜೈಸ್ವಾಲ್, ಗಿಲ್ ವಿಫಲ
ವಿಶೇಷ ದಾಖಲೆ ಬರೆದ ಜೈಸ್ವಾಲ್-ರೋಹಿತ್
ಜಮ್ಮು-ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಪರ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದರು. ಇದರೊಂದಿಗೆ ರಣಜಿ ಟ್ರೋಫಿ ಟೂರ್ನಿಯ ಒಂದೇ ತಂಡದ ಪರ ಇನಿಂಗ್ಸ್ ಆರಂಭಿಸಿದ ಭಾರತ ಟೆಸ್ಟ್ ತಂಡದ ಮೊದಲ ಸಕ್ರಿಯ ಆರಂಭಿಕ ಬ್ಯಾಟ್ಸ್‌ಮನ್‌ಗಳು ಎಂಬ ವಿಶೇಷ ದಾಖಲೆಯನ್ನು ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಬರೆದಿದ್ದಾರೆ.
ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳ ಬಗ್ಗೆ ರಣಜಿ ಪಂದ್ಯದಲ್ಲಿ ಸಾಕಷ್ಟು ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ, ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಅವರು ಎರಡಂಕಿ ವೈಯಕ್ತಿಕ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾದರು. ಜೈಸ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ರೋಹಿತ್ ಶರ್ಮಾ 18 ಎಸೆತಗಳಲ್ಲಿ ಕೇವಲ 3 ರನ್ ಗಳಿಸಿ ಔಟ್ ಆದರು.
Ranji Trophy: ಡೆಲ್ಲಿ ವಿರುದ್ಧ 5 ವಿಕೆಟ್ ಕಿತ್ತ ರವೀಂದ್ರ ಜಡೇಜಾ
17 ವರ್ಷಗಳ ಬಳಿಕ ವಿಶೇಷ ದಾಖಲೆ ಬರೆದ ಹಿಟ್‌ಮ್ಯಾನ್
17 ವರ್ಷಗಳ ಬಳಿಕ ರಣಜಿ ಟ್ರೋಫಿ ಪಂದ್ಯವಾಡಿದ ಭಾರತದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ. 2008ರಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಪರ ರಣಜಿ ಪಂದ್ಯವಾಡಿದ್ದ ಕೊನೆಯ ಭಾರತ ತಂಡದ ನಾಯಕ ಅನಿಲ್ ಕುಂಬ್ಳೆ. 7 ವರ್ಷಗಳ ಬಳಿಕ ಇದೇ ಮೊದಲ ಬಾರಿ ರೋಹಿತ್ ಶರ್ಮಾ ದೇಶಿ ಕ್ರಿಕೆಟ್‌ಗೆ ಮರಳಿದ್ದಾರೆ.
ಮುಂಬೈ ತಂಡದ ಪ್ಲೇಯಿಂಗ್ XI
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ (ನಾಯಕ), ಶ್ರೇಯಸ್ ಅಯ್ಯರ್, ಹಾರ್ದಿಕ್ ತೋಮರ್ (ವಿ.ಕೀ), ಶಿವಂ ದುವೆ, ಶಾರ್ದುಲ್ ಠಾಕೂರ್, ಶಾಮ್ಸ್ ಮುಲಾನಿ, ತನುಷ್ ಕೋಟಿಯನ್, ಮೋಹಿತ್ ಅವಾಸ್ತಿ, ಕರ್ಷ್ ಕೊಠಾರಿ