#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ಭವಿಷ್ಯ ನಿರ್ಧಾರ? ಹೊಸ ನಾಯಕನ ಹುಡುಕಾಟದಲ್ಲಿ ಬಿಸಿಸಿಐ!

Rohit Sharma's Future: ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್‌ ಶರ್ಮಾ ಮುನ್ನಡೆಸಲಿದ್ದಾರೆ. ಈ ಟೂರ್ನಿಯಲ್ಲಿನ ಪ್ರದರ್ಶನದ ಆಧಾರದ ಮೇಲೆ ರೋಹಿತ್‌ ಶರ್ಮಾ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದು ವರದಿಯಾಗಿದೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಬಳಿಕ ರೋಹಿತ್‌ ಶರ್ಮಾ ಭವಿಷ್ಯ ನಿರ್ಧಾರ!

Rohit Sharma

Profile Ramesh Kote Feb 5, 2025 5:20 PM

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma's Future) ಅವರ ಭವಿಷ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅದರಂತೆ ಇತೀಚಿಗೆ ವರದಿಯೊಂದು ಹೊರ ಬಿದ್ದದೆ. ಮುಂಬರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಳಿಕ ರೋಹಿತ್‌ ಶರ್ಮಾ ಅವರ ಭವಿಷ್ಯ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಹಿಟ್‌ಮ್ಯಾನ್‌ ಭವಿಷ್ಯ ಈ ಟೂರ್ನಿಯಲ್ಲಿನ ಪ್ರದರ್ಶನವನ್ನು ಅವಲಂಬಿಸಿದೆ.

ರೋಹಿತ್‌ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ತಂಡ ಕಳೆದ ವರ್ಷ 2024ರ ಐಸಿಸಿ ಟಿ20 ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತ್ತು. ಆ ಮೂಲಕ 10 ವರ್ಷಗಳ ಬಳಿಕ ಭಾರತ, ಐಸಿಸಿ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಈ ವೇಳೆ ರೋಹಿತ್‌ ಶರ್ಮಾ ಅವರ ನಾಯಕತ್ವವನ್ನು ಸಾಕಷ್ಟು ಗುಣಗಾಣ ಮಾಡಲಾಗಿತ್ತು. ಆದರೆ, ಆಸ್ಟ್ರೇಲಿಯಾ ಪ್ರವಾಸದಲ್ಲಿನ ವೈಫಲ್ಯದ ಬಳಿಕ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಇದೀಗ ಎಲ್ಲಾ ಪ್ರಶ್ನೆಗಳಿಗೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಉತ್ತರ ಸಿಗಲಿದೆ.

IND vs ENG: ʻಭಾರತ ಚಾಂಪಿಯನ್ಸ್‌ ಟ್ರೋಫಿ ಗೆಲ್ಲಲು ಈ ಇಬ್ಬರ ಫಾರ್ಮ್‌ ಮುಖ್ಯʼ-ಸುರೇಶ್‌ ರೈನಾ!

2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಬಳಿಕ ತಮ್ಮ ಭವಿಷ್ಯದ ಯೋಜನೆಗಳು ಏನೆಂದು ರೋಹಿತ್‌ ಶರ್ಮಾಗೆ ಬಿಸಿಸಿಐ ಕೇಳಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ. ಏಕೆಂದರೆ 2027ರಲ್ಲಿ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಹಾಗೂ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಎರಡೂ ಸ್ವರೂಪಕ್ಕೆ ಹೊಸ ನಾಯಕನನ್ನು ನೇಮಿಸಲು ಬಿಸಿಸಿಐ ಎದುರು ನೋಡುತ್ತಿದೆ. ಏಕೆಂದರೆ 2027ಕ್ಕೆ ರೋಹಿತ್‌ ಶರ್ಮಾ ಅವರ ವಯಸ್ಸು 40 ಆಗಲಿದೆ. ಆದ್ದರಿಂದ ಬಿಸಿಸಿಐ ಭಾರತಕ್ಕೆ ಸಂಯೋಜಿತ ನಾಯಕನನ್ನು ಆರಿಸಲು ಬಯಸುತ್ತಿದೆ.

"ಬಿಸಿಸಿಐ ಆಯ್ಕೆದಾರರು ಹಾಗೂ ಮಂಡಳಿಯ ಸದಸ್ಯರು ತಂಡದ ಅಂತಿಮ ಆಯ್ಕೆಯ ಸಭೆಯಲ್ಲಿ ರೋಹಿತ್‌ ಶರ್ಮಾ ಅವರ ಬಗ್ಗೆ ಚರ್ಚೆಯನ್ನು ನಡೆಸಿದೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಳಿಕ ತಮ್ಮ ಯೋಜನೆಗಳ ಬಗ್ಗೆ ನಿರ್ಧಾರ ಮಾಡಬೇಕೆಂದು ರೋಹಿತ್‌ ಶರ್ಮಾ ಅವರೇ ಸಭೆಯಲ್ಲಿ ತಿಳಿಸಿದ್ದಾರೆ. ಏಕೆಂದರೆ ಮುಂಬರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಆವೃತ್ತಿ ಹಾಗೂ ಏಕದಿನ ವಿಶ್ವಕಪ್‌ ಟೂರ್ನಿಯ ನಿಮಿತ್ತ ಟೀಮ್‌ ಮ್ಯಾನೇಜ್‌ಮೆಂಟ್‌ ತನ್ನದೇ ಆದ ಯೋಜನೆಗಳನ್ನು ಹೊಂದಿದೆ. ನಿವೃತ್ತಿಯ ಹಂಚಿನಲ್ಲಿರುವ ಆಟಗಾರರ ಸ್ಥಾನಕ್ಕೆ ಹೊಸ ಆಟಗಾರರನ್ನು ತರಬೇಕೆಂಬುದು ಟೀಮ್‌ ಮ್ಯಾನೇಜ್‌ಮೆಂಟ್‌ ಬಯಸುತ್ತಿದೆ," ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದನ್ನು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

IND vs ENG: ಸಚಿನ್‌ ತೆಂಡೂಲ್ಕರ್‌ ದಾಖಲೆ ಮೇಲೆ ರೋಹಿತ್‌ ಶರ್ಮಾ ಕಣ್ಣು!

ವಿರಾಟ್‌ ಕೊಹ್ಲಿಯ ಟೆಸ್ಟ್‌ ಭವಿಷ್ಯ

ರೋಹಿತ್‌ ಶರ್ಮಾ ಮಾತ್ರವಲ್ಲ, ವಿರಾಟ್‌ ಕೊಹ್ಲಿ ಟೆಸ್ಟ್‌ ಭವಿಷ್ಯದ ಬಗ್ಗೆ ಕೂಡ ಬಿಸಿಸಿಐ ವ್ಯಾಪ್ತಿಯಲ್ಲಿ ಚರ್ಚೆ ನಡೆಯುತ್ತಿದೆ. ಮುಂದಿನ ಸರಣಿಗಳಲ್ಲಿನ ಪ್ರದರ್ಶನದಿಂದ ಅವರ ಟೆಸ್ಟ್‌ ಭವಿಷ್ಯ ನಿರ್ಧಾರವಾಗಲಿದೆ. ಆದರೆ, ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿಯ ಸಾಮರ್ಥ್ಯದ ಬಗ್ಗೆ ಯಾವುದೇ ಅನುಮಾನವಿಲ್ಲ. ಅವರು 2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೂ ಆಡುವುದು ಬಹುತೇಕ ಖಚಿತವಾಗಿದೆ.

ಟೆಸ್ಟ್‌, ಒಡಿಐ ನಾಯಕನಾಗಿ ರೋಹಿತ್‌ ಸ್ಥಾನ ತುಂಬುವವರು ಯಾರು?

ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಪರ್ತ್‌ ಟೆಸ್ಟ್‌ನಲ್ಲಿ ಗೆದ್ದಿದ್ದ ಬುಮ್ರಾ, ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಸೋಲು ಅನುಭವಿಸಿದ್ದರು. ರೋಹಿತ್‌ ಶರ್ಮಾ ಬಳಿಕ ಭಾರತ ಟೆಸ್ಟ್‌ ತಂಡಕ್ಕೆ ಬುಮ್ರಾ ನಾಯಕನಾಗಬಹುದು ಎಂದು ಹೇಳಲಾಗುತ್ತಿದೆ. ಇನ್ನು ಏಕದಿನ ತಂಡದಲ್ಲಿ ಉಪ ನಾಯಕನಾಗಿರುವ ಶುಭಮನ್‌ ಗಿಲ್‌ ಅವರನ್ನೇ ನಾಯಕನ್ನಾಗಿ ನೇಮಿಸಿದರೂ ಅಚ್ಚರಿ ಇಲ್ಲ.