ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

S Jaishankar: ಟ್ರಂಪ್ ಪದಗ್ರಹಣ ಕಾರ್ಯಕ್ರಮದಲ್ಲಿ ಎಸ್‌. ಜೈಶಂಕರ್‌ಗೆ ವಿಶೇಷ ಗೌರವ ; ಮೊದಲ ಸಾಲಿನಲ್ಲೇ ಆಸನ ವ್ಯವಸ್ಥೆ

ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಭಾರತ ಹಾಗೂ ಅಮೆರಿಕದ ನಡುವಿನ ಸಂಬಂಧ ಹೇಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪದಗ್ರಹಣ ಸಮಾರಂಭದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌. ಜೈ ಶಂಕರ್‌ ಅವರಿಗೆ ಮೊದಲ ಸಾಲಿನಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ಟ್ರಂಪ್‌ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾರತಕ್ಕೆ ವಿಶೇಷ ಸ್ಥಾನ; ಮೊದಲ ಸಾಲಿನಲ್ಲೇ ಜೈಶಂಕರ್‌ಗೆ ಸ್ಥಾನ

S. Jaishankar

Profile Vishakha Bhat Jan 21, 2025 1:05 PM

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ವಿವಿಧ ದೇಶಗಳ ಗಣ್ಯರು ಉಪಸ್ಥಿತರಿದ್ದರು. ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತದಿಂದ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಭಾಗವಹಿಸಿದ್ದರು. ಈ ವೇಳೆ ಜೈಶಂಕರ್ ಅವರು ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೊವಾ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಇದು ಭಾರತ- ಅಮೆರಿಕ ಇದು ಸಂಬಂಧವನ್ನು ಹೇಳುತ್ತದೆ. ಎರಡು ಸಾಲುಗಳ ಹಿಂದೆ ಜಪಾನ್ ವಿದೇಶಾಂಗ ಸಚಿವ ತಕೇಶಿ ಇವಾಯಾ ಹಾಗೂ ಆಸ್ಟ್ರೇಲಿಯಾ ಪ್ರತಿನಿಧಿ ಕುಳಿತುಕೊಂಡಿರುವುದು ಕಂಡು ಬಂದಿದೆ.



ಟ್ರಂಪ್ ಪ್ರಮಾಣಚನದ ಬಳಿಕ ಮಾತನಾಡಿರುವ ಜೈಶಂಕರ್, ಭಾರತವನ್ನು ಪ್ರತಿನಿಧಿಸುತ್ತಿರುವುದು ದೊಡ್ಡ ಗೌರವ ಎಂದಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಪ್ರಧಾನಿ ಮೋದಿ ಬರೆದ ಪತ್ರದೊಂದಿಗೆ ನಾನು ಆಗಮಿಸಿದ್ದೇನೆ. ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ ಎಂದು ಜೈಶಂಕರ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.



ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಡೊನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಮೋದಿ ಎರಡೂ ದೇಶಗಳಿಗೆ ಅನುಕೂಲ ಮತ್ತು ಜಗತ್ತಿಗೆ ಉತ್ತಮ ಭವಿಷ್ಯ ಸೃಷ್ಟಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.



ಈ ಸುದ್ದಿಯನ್ನೂ ಓದಿ : Elon Musk: ಟ್ರಂಪ್‌ ಪದಗ್ರಹಣದಲ್ಲಿ ಎಲಾನ್‌ ಮಸ್ಕ್‌ ಭಾಷಣ; ಕೈ ಸನ್ನೆ ನೋಡಿ ಹಿಟ್ಲರ್‌ಗೆ ಹೋಲಿಸಿದ ನೆಟ್ಟಿಗರು!

ಟ್ರಂಪ್‌ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಹಲವು ಗಣ್ಯರು ಆಗಮಿಸಿದ್ದು, ಭಾರತದಿಂದ ಉದ್ಯಮಿ ಮುಖೇಶ್‌ ಅಂಬಾನಿ ಹಾಗೂ ಅವರ ಪತ್ನಿ ನೀತಾ ಅಂಬಾನಿ ಕೂಡ ಉಪಸ್ಥಿತರಿದ್ದರು.