SA vs NZ: 15ನೇ ಶತಕ ಸಿಡಿಸಿ ಎಬಿಡಿ ದಾಖಲೆ ಮುರಿದ ಕೇನ್ ವಿಲಿಯಮ್ಸನ್!
Kane Williamson scored 15th ODI Century: ದಕ್ಷಿಣ ಆಫ್ರಿಕಾ ವಿರುದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ 15ನೇ ಶತಕವನ್ನು ಸಿಡಿಸಿದ್ದಾರೆ. ಆ ಮೂಲಕ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎ ಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಎಬಿ ಡಿ ವಿಲಿಯರ್ಸ್ ದಾಖಲೆ ಮುರಿದ ಕೇನ್ ವಿಲಿಯಮ್ಸನ್

ಲಾಹೋರ್: ದಕ್ಷಿಣ ಆಫ್ರಿಕಾ ವಿರುದ್ಧ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ತಮ್ಮ ಒಡಿಐ ವೃತ್ತಿ ಜೀವನದ 15ನೇ ಶತಕವನ್ನು ಸಿಡಿಸಿದರು. ಆ ಮೂಲಕ ದಕ್ಷಿಣ ಆಫ್ರಿಕಾ ದಿಗ್ಗಜ ಹಾಗೂ 360 ಡಿಗ್ರಿ ಖ್ಯಾತಿಯ ಎಬಿ ಡಿ ವಿಲಿಯರ್ಸ್ ದಾಖಲೆಯನ್ನು ಮುರಿದಿದ್ದಾರೆ. ಹರಿಣ ಪಡೆಯ ವಿರುದ್ಧ ಕೇನ್ ವಿಲಿಯಮ್ಸನ್ ಸಿಡಿಸಿದ ಸತತ ಮೂರನೇ ಶತಕ ಇದಾಗಿದೆ. ಅಂದ ಹಾಗೆ ಈ ಪಂದ್ಯದಲ್ಲಿ ಕಿವೀಸ್ 50 ರನ್‌ಗಳ ಭರ್ಜರಿ ಗೆಲುವು ಪಡೆದು ಫೈನಲ್‌ಗೆ ಪ್ರವೇಶ ಮಾಡಿತು. ಮಾರ್ಚ್ 9 ರಂದು ನಡೆಯುವ ಫೈನಲ್‌ನಲ್ಲಿ ಭಾರತದ ಎದುರು ಮಿಚೆಲ್ ಸ್ಯಾಂಟ್ನರ್ ಪಡೆ ಕಾದಾಟ ನಡೆಸಲಿದೆ.
ಬುಧವಾರ ಇಲ್ಲಿನ ಗಡಾಫಿ ಕ್ರೀಡಾಂಗಣದ ನಡೆದಿದ್ದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಕೇನ್ ವಿಲಿಯಮ್ಸನ್, 94 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 10 ಬೌಂಡರಿಗಳೊಂದಿಗೆ 102 ರನ್‌ಗಳನ್ನು ಸಿಡಿಸಿದರು. ಆ ಮೂಲಕ ತಮ್ಮ ಏಕದಿನ ಕ್ರಿಕೆಟ್ ವೃತ್ತಿ ಜೀವನದಲ್ಲಿ 15ನೇ ಶತಕವನ್ನು ಸಿಡಿಸಿದರು. ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ವಿಲಿಯಮ್ಸನ್‌ಗೆ ಇದು ಸತತ ಮೂರನೇ ಶತಕವಾಗಿದೆ. 2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಒಂದು ಮತ್ತು ಇತ್ತೀಚೆಗೆ ಪಾಕಿಸ್ತಾನದಲ್ಲಿ ಮುಗಿದಿದ್ದ ತ್ರಿಕೋನ ಏಕದಿನ ಸರಣಿಯ ಪಂದ್ಯದಲ್ಲಿ ಮತ್ತೊಂದು ಶತಕವನ್ನು ಅವರು ಸಿಡಿಸಿದ್ದರು.
Champions Trophy: 19000 ರನ್ ಪೂರ್ಣಗೊಳಿಸಿ ವಿಶೇಷ ದಾಖಲೆ ಬರೆದ ಕೇನ್ ವಿಲಿಯಮ್ಸನ್!
ಎಬಿಡಿ ದಾಖಲೆ ಮುರಿದ ವಿಲಿಯಮ್ಸನ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇನ್ ವಿಲಿಯಮ್ಸನ್‌ಗೆ ಇದು 48ನೇ ಶತಕವಾಗಿದೆ. ಆ ಮೂಲಕ 47 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಅವರನ್ನು ಕೇನ್ ವಿಲಿಯಮ್ಸನ್ ಹಿಂದಿಕ್ಕಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಹಾಗೂ ಸ್ಟೀವನ್ ಸ್ಮಿತ್ ಅವರ ದಾಖಲೆಯನ್ನು ಸರಿದೂಗಿಸಿದ್ದಾರೆ. ಐಸಿಸಿ ಏಕದಿನ ಟೂರ್ನಿಗಳಲ್ಲಿ ಕೇನ್ ವಿಲಿಯಮ್ಸನ್ ದಾಖಲಿಸಿದ ನಾಲ್ಕನೇ ಶತಕ ಇದಾಗಿದೆ. ಐಸಿಸಿ ಒಡಿಐ ಟೂರ್ನಿಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಎರಡನೇ ಕಿವೀಸ್ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ವಿಲಿಯಮ್ಸನ್ ಭಾಜನರಾಗಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಕ್ರೈನ್ಸ್ ಅಗ್ರ ಸ್ಥಾನದಲ್ಲಿದ್ದಾರೆ.
All class 👌
— ICC (@ICC) March 5, 2025
Kane Williamson steps up with a 💯 as New Zealand keep adding the runs in Lahore 💥#ChampionsTrophy #SAvNZ ✍️: https://t.co/dGzPWxoavO pic.twitter.com/hGywiN5XSb
ರಚಿನ್ ರವೀಂದ್ರ ಜೊತೆ 164 ರನ್ ಜೊತೆಯಾಟವಾಡಿದ ವಿಲಿಯಮ್ಸನ್
ತಾವು ಶತಕ ಸಿಡಿಸಿದ ಹೊರತಾಗಿಯೂ ಕೇನ್ ವಿಲಿಯಮ್ಸನ್ ಅವರು ಮುರಿಯದ ಎರಡನೇ ವಿಕೆಟ್‌ಗೆ ರಚಿನ್ ರವೀಂದ್ರ ಜತೆ ಸೇರಿ 154 ಎಸೆತಗಳಲ್ಲಿ 164 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ನ್ಯೂಜಿಲೆಂಡ್ ತಂಡ 200ರ ಗಡಿ ದಾಟಲು ನೆರವು ನೀಡಿದ್ದರು. ಎಂಟನೇ ಓವರ್‌ನಲ್ಲಿ ಕ್ರೀಸ್‌ಗೆ ಹೋಗಿದ್ದ ಬಲಗೈ ಬ್ಯಾಟ್ಸ್‌ಮನ್ ಅತ್ಯುತ್ತಮ ಪ್ರದರ್ಶನವನ್ನು ತೋರಿದರು. ಆ ಮೂಲಕ ನ್ಯೂಜಿಲೆಂಡ್ ತಂಡ 362 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು. ಬಳಿಕ ಗುರಿ ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡ 302 ರನ್‌ಗಳಿಗೆ ಸೀಮಿತವಾಗಿತ್ತು. ಆ ಮೂಲಕ 50 ರನ್‌ಗಳಿಂದ ನ್ಯೂಜಿಲೆಂಡ್ ಗೆಲುವು ಪಡೆಯಿತು ಹಾಗೂ ಫೈನಲ್‌ಗೆ ಪ್ರವೇಶ ಮಾಡಿದೆ. ಮಾರ್ಚ್ 9 ರಂದು ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಭಾರತ ತಂಡವನ್ನು ಕಿವೀಸ್ ಎದುರಿಸಲಿದೆ.
NZ vs SA: ದಕ್ಷಿಣ ಆಫ್ರಿಕಾವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿದ ನ್ಯೂಜಿಲೆಂಡ್!
19000 ರನ್‌ಗಳನ್ನು ಪೂರ್ಣಗೊಳಿಸಿದ ವಿಲಿಯಮ್ಸನ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇನ್ ವಿಲಿಯಮ್ಸನ್ 19000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಈ ಸಾಧನೆ ಮಾಡಿದ ನ್ಯೂಜಿಲೆಂಡ್ ತಂಡದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಅಲ್ಲದೆ ವೇಗವಾಗಿ 19000 ರನ್‌ಗಳನ್ನು ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ಕಿರ್ತಿಗೂ ಮಾಜಿ ನಾಯಕ ಭಾಜನರಾಗಿದ್ದಾರೆ.