Saif Ali Khan : ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ್ದ ಆರೋಪಿ ಅರೆಸ್ಟ್ ; ವಿಚಾರಣೆ ನಡೆಸುತ್ತಿರುವ ಮುಂಬೈ ಪೊಲೀಸರು
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಜ. 17, 2025 : ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಮನೆಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿ, ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿ ಚಾಕು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಘಟನೆಯಾದ ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಯ ಫೋಟೋವನ್ನು ಬಹಿರಂಗಗೊಳಿಸಿದ್ದರು.
ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಹಿರಂಗ ಪಡಿಸಲಾಗಿದ್ದ ವಿಡಿಯೋದಲ್ಲಿ ಗುರುವಾರ ಬೆಳಗಿನ ಜಾವ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಖಾನ್ ಅವರ ಮನೆಗೆ ನುಗ್ಗಿದ್ದ . ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದ. ಸೈಫ್ ಮನೆಯ ಮೆಟ್ಟಿಲು ಇಳಿಯುವಾಗ ಆತ ಸಿಸಿಟಿವಿಯಲ್ಲಿ ಸೆರೆಯಾಗಿದ್ದ. ಸದ್ಯ ಆರೋಪಿಯನ್ನೂ ಬಂಧಿಸಲಾಗಿದೆ.
Agent Vinod and Phantom - 2 in 1#SaifAliKhanAttacked pic.twitter.com/iwqoNBLKxJ
— Kashmiri Hindu (@BattaKashmiri) January 16, 2025
ಈ ಸುದ್ದಿಯನ್ನೂ ಓದಿ : Saif Ali Khan: ಐಸಿಯುನಲ್ಲಿರುವ ಸೈಫ್ ಆಲಿಖಾನ್ ಚೇತರಿಕೆ; ಏನಂದ್ರು ಕರೀನಾ ಕಪೂರ್?
ಗುರುವಾರ ಬೆಳಗಿನ ಜಾವ ಮನೆಗೆ ನುಗ್ಗಿದ ಆರೋಪಿ ದರೋಡೆ ಮಾಡಲು ಪ್ರಯತ್ನಪಟ್ಟಿದ್ದ. ನಂತರ ಇದನ್ನು ಗಮನಿಸಿದ ಸೈಫ್ ಅಲಿ ಖಾನ್ ಆತನ್ನನು ಎದುರಿಸಿದ್ದಾರೆ. ದುಡ್ಡು ಕೊಡಲು ನಿರಾಕರಿಸಿದ ಕಾರಣ ಆತ ಖಾನ್‌ಗೆ ಚಾಕುವಿನಿಂದ ಇರಿದಿದ್ದಾನೆ. ತಕ್ಷಣವೇ ಸೈಫ್ ಪುತ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಐಸಿಯುಗೆ ಚಿಕಿತ್ಸೆ ನೀಡಲಾಗಿದೆ. ಬೆನ್ನುಹುರಿಯಲ್ಲಿ ಸಿಲುಕಿಕೊಂಡಿದ್ದ 2.5 ಇಂಚಿನ ಚಾಕುವನ್ನು ತೆಗೆದುಹಾಕಲು ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅವರು ಈಗ ಐಸಿಯುನಲ್ಲಿ ನಿಗಾದಲ್ಲಿದ್ದಾರೆ ಮತ್ತು ಅವರನ್ನು ಯಾವಾಗ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಬಹುದು ಎಂಬುದನ್ನು ನಿರ್ಧರಿಸಲು ವೈದ್ಯರು ಅವರ ಕುಟುಂಬದೊಂದಿಗೆ ಚರ್ಚಿಸುತ್ತಿದ್ದಾರೆ.