#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Saif Ali Khan : ಕೊನೆಗೂ ಬಲೆಗೆ ಬಿದ್ದ ಅಸಲಿ ಆರೋಪಿ ; ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ನಡೆಸಿದ್ದ ಕಿಡಿಗೇಡಿ ಬಂಧನ

ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಮಾರಣಾಂತಕವಾಗಿ ಚಾಕುವಿನಿಂದ ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆರೋಪಿ ಬಾಂದ್ರಾದ ಹೋಟೆಲ್‌ ಒಂದರಲ್ಲಿ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ಹಾಗೂ ಹಲವಾರು ಹೆಸರುಗಳನ್ನು ಹೊಂದಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ್ದ ಅಸಲಿ ಆರೋಪಿ ಅರೆಸ್ಟ್‌; ಹೊಟೆಲ್‌ನಲ್ಲಿ ಕೆಲಸಮಾಡುತ್ತಿದ್ದವ ಸಿಕ್ಕಿ ಬಿದ್ದಿದ್ದಾದರೂ ಹೇಗೆ?

Saif Ali Khan Stabbing

Profile Vishakha Bhat Jan 19, 2025 9:07 AM

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ (Saif Ali Khan) ಖಾನ್​ಗೆ ಚಾಕು ಇರಿತ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿಜಯ್ ದಾಸ್ (Vijay Das) ಎಂದು ಗುರುತಿಸಲಾಗಿದ್ದು, ಈತ ಹೊಟೆಲ್‌ ಒಂದರಲ್ಲಿ ವೇಯಿಟರ್ ಆಗಿ ಕೆಲಸ ಮಾಡುತ್ತಿದ್ದ ಎಂದೂ ತಿಳಿದು ಬಂದಿದೆ. ಮಹಾರಾಷ್ಟ್ರದ ಥಾಣೆ ಪಶ್ಚಿಮ ಪ್ರದೇಶದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ವಲಯ-6 ನವನಾಥ ಧವಳೆ ತಂಡ ಮತ್ತು ಕಾಸರವಾಡವಲಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ಮಧ್ಯಾಹ್ನ ಆತನನ್ನು ನ್ಯಾಯಲಯದ ಎದುರು ಹಾಜರು ಪಡಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಸೈಫ್ ಅಲಿ ಖಾನ್​ ಮನೆಯಿಂದ 35 ಕಿ.ಮೀ ದೂರದಲ್ಲಿರುವ ಕಾಸರ್ವಾದಲಿಯ ಹೀರಾನಂದಾನಿ ಎಸ್ಟೇಟ್ ಬಳಿಯಲ್ಲಿ ಭಾನುವಾರ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಈತ ತನ್ನ ಹಲವು ಹೆಸರನ್ನು ಬದಲಾಯಿಸಿಕೊಂಡಿದ್ದು, ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರನ್ನು ಹೊಂದಿದ್ದಾನೆ. ಈತ ಮುಂಬೈನಿಂದ ಪರಾರಿಯಾಗುವ ಯತ್ನದಲ್ಲಿದ್ದ ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಘಡದ ರೈಲ್ವೆ ನಿಲ್ದಾಣದಲ್ಲಿ ಆಕಾಶ ಕೈಲಾಶ್ ಕನ್ನೋಜಿಯಾ ಹೆಸರಿನ ಆರೋಪಿಯನ್ನು ಸಹ ಬಂಧಿಸಲಾಗಿದೆ. ಈಗ ಮುಂಬೈನಲ್ಲಿ ಒಬ್ಬಾತನ ಬಂಧನ ಆಗಿದೆ.

ಈ ಸುದ್ದಿಯನ್ನೂ ಓದಿ : Saif Ali Khan: 2-3 ದಿನಗಳಲ್ಲಿ ಸೈಫ್‌ ಅಲಿ ಖಾನ್‌ ಡಿಸ್‌ಚಾರ್ಜ್‌? ಲೀಲಾವತಿ ಆಸ್ಪತ್ರೆಯ ವೈದ್ಯರು ಹೇಳಿದ್ದೇನು?

ಬುಧವಾರ ತಡರಾತ್ರಿ ಮುಂಬೈ ಬಾಂದ್ರಾದಲ್ಲಿನ ಸೈಫ್ ಅಲಿ ಖಾನ್​ರ ನಿವಾಸಕ್ಕೆ ನುಗ್ಗಿದ್ದ ಆರೋಪಿ ಸೈಫ್‌ ಅಲಿ ಖಾನ್‌ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ನಂತರ ಅಲ್ಲಿಂದ ಪರಾರಿಯಾಗಿದ್ದ. ಆತ ಸೈಫ್‌ ನಿವಾಸದಿಂದ ಹೊರಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಇದೀಗ ಬಂಧಿಸಿದ್ದಾರೆ. ಸದ್ಯ ಸೈಫ್‌ ಅಲಿ ಖಾನ್‌ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಲೀಲಾವತಿ ಆಸ್ಪತ್ರೆಯ ವೈದ್ಯರು ಖಾನ್‌ ಅವರು ಆರೋಗ್ಯವಾಗಿದ್ದಾರೆ. ಇನ್ನು ಎರಡು ಮೂರು ದಿನಗಳಲ್ಲಿ ಅವರನ್ನು ಡಿಸ್ಟಾರ್ಜ್‌ ಮಾಡಲಾಗುವುದು ಎಂದು ತಿಳಿಸಿದ್ದರು. ಸದ್ಯ ಪೊಲೀಸರು ಘಟನೆಯ ಬಗ್ಗೆ ಮನೆಕೆಲಸದವರಿಂದ ಹಾಗೂ ಸೈಫ್‌ ಪತ್ನಿ ಕರೀನಾ ಕಪೂರ್‌ ಅವರಿಂದ ಹೇಳಿಕೆಯನ್ನು ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.