Road Accident: ಅಕ್ರಮ ಮರಳು ಲಾರಿಯಡಿಗೆ ಸಿಲುಕಿ ಇಬ್ಬರು ಯುವಕರ ಸಾವು
ಸಾವನ್ನಪ್ಪಿರುವ ಇಬ್ಬರು ಯುವಕರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.

ಬೈಕ್ ಸವಾರರ ಜೀವ ತೆಗೆದ ಲಾರಿ

ಕೊಪ್ಪಳ: ಅಕ್ರಮವಾಗಿ ಮರಳು (sand mafia) ಸಾಗಿಸುತ್ತಿದ್ದ ಟಿಪ್ಪರ್ ಹರಿದು (Road Accident News) ಬೈಕ್ ಸವಾರರಿಬ್ಬರು (bike riders) ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppala News) ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ಬಳಿ ನಡೆದಿದೆ. ರಮೇಶ ಜವಳಗೇರಿ (27), ಸಿದ್ದಪ್ಪ ಪ್ಯಾಟ್ಯಾಳ್ (34) ಮೃತ ಯುವಕರು. ಸಾವನ್ನಪ್ಪಿರುವ ಇಬ್ಬರು ಯುವಕರು ಕನಕಗಿರಿ ತಾಲೂಕಿನ ಗುಡೂರಿನ ನಿವಾಸಿಗಳಾಗಿದ್ದು, ಇಂದು ಬೈಕ್ ಮೇಲೆ ಹೋಗುತ್ತಿದ್ದ ವೇಳೆ ಮರಳು ತುಂಬಿದ ಟಿಪ್ಪರ್ ಹರಿದಿದೆ. ಪರಿಣಾಮ ಟಿಪ್ಪರ್ ಕೆಳಗೆ ಸಿಲುಕಿ ಯುವಕರ ದೇಹ ಛಿದ್ರವಾಗಿದೆ.
ನವಲಿ ಕಡೆಯಿಂದ ಗುಡೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರ ಪೈಕಿ ಒಬ್ಬನ ಮೃತದೇಹ ಛಿದ್ರ ಛಿದ್ರವಾಗಿದೆ. ರಸ್ತೆ ತುಂಬ ದೇಹದ ಮಾಂಸ ಚೆಲ್ಲಾಪಿಲ್ಲಿಯಾಗಿದೆ. ಮತ್ತೋರ್ವ ಯುವಕನ ತಲೆ ಛದ್ರಗೊಂಡಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಗಲು ರಾತ್ರಿ ಎನ್ನದೇ ಇಲ್ಲಿ ಮರಳು ತುಂಬಿದ ಟಿಪ್ಪರ್ ಗಳು ಓಡಾಡುತ್ತಿದ್ದು, ಅಕ್ರಮ ಮರಳು ದಂಧೆಗೆ ಯುವಕರು ಬಲಿಯಾಗಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ. ಈ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಗೆಳೆಯನನ್ನೇ ಕೊಂದರು!
ಕಲಬುರಗಿ: ಜೊತೆಗಿದ್ದ ಸ್ನೇಹಿತರೇ ತಮ್ಮ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ (Murder Case) ಮಾಡಿದ ಘಟನೆ ಕಲಬುರಗಿ (kalaburagi news) ನಗರದಲ್ಲಿ ನಡೆದಿದೆ. ಒಂದಲ್ಲ, ಎರಡಲ್ಲ ಬರೋಬ್ಬರಿ 12 ಬಾರಿ ʼಗೆಳೆಯರುʼ ತಲೆ ಮೇಲೆ ಕಲ್ಲು (Stone) ಎತ್ತಿ ಹಾಕಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ನಗರದ ರಾಜಾಪುರ ಬಡಾವಣೆಯ ನಿವಾಸಿಯಾದ ರೇವಣಸಿದ್ದ ಎಂಬ ಯುವಕನೇ ಸ್ನೇಹಿತರಿಂದ ಹೀಗೆ ಕೊಲೆಯಾದ ಯುವಕ. ಸಿಸಿಟಿವಿ ಕ್ಯಾಮೆರದಲ್ಲಿ ಈ ಕೊಲೆ ದಾಖಲಾಗಿದ್ದು, ಕೊಲೆಯ ಬರ್ಬರತೆಗೆ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಕೊಲೆಯಾದ ರೇವಣಸಿದ್ದ ಫೈನಾನ್ಸ್ ನಡೆಸುತ್ತಿದ್ದ. ಸಂಜೆ ಆರು ಗಂಟೆ ಸುಮಾರಿಗೆ ಎಂದಿನಂತೆ ಮನೆಯಿಂದ ಆಚೆ ಹೋಗಿದ್ದಾನೆ. ಪ್ರತಿನಿತ್ಯ ಹತ್ತು, ಹನ್ನೊಂದು ಗಂಟೆ ಸುಮಾರಿಗೆ ಮನೆಗೆ ವಾಪಸ್ ಬರ್ತಿದ್ದ. ಆದರೆ ನಿನ್ನೆ ರಾತ್ರಿ ಹನ್ನೆರೆಡು ಗಂಟೆ ಕಳೆದರೂ ಕೂಡ ವಾಪಸ್ ಬಂದಿರಲಿಲ್ಲ. ಹಾಗಾಗಿ ರಾತ್ರಿ ರೇವಣಸಿದ್ದ ತಂದೆ ರಾಮಪ್ಪ ಮಗನಿಗೆ ಕರೆ ಮಾಡಿ ಎಲ್ಲಿದ್ದಿಯಾ, ಯಾವಾಗ ಬರ್ತಿಯಾ ಎಂದು ವಿಚಾರಿಸಿದ್ದಾರೆ. ಬರ್ತೇನೆ, ಇಲ್ಲೇ ಸ್ನೇಹಿತರ ಜೊತೆಗಿದ್ದೇನೆ ಎಂದು ರೇವಣಸಿದ್ಧ ಹೇಳಿದ್ದಾನೆ.
ಆದರೆ ತಡರಾತ್ರಿಯಾದರೂ ಮಗ ಮನೆಗೆ ವಾಪಸ್ ಬಂದಿರಲಿಲ್ಲ. ದಾರಿ ಕಾಯುತ್ತಿದ್ದ ಹೆತ್ತವರು ಬಳಿಕ ನಿದ್ದೆಗೆ ಜಾರಿದ್ದಾರೆ. ಬೆಳಗಾಗುವಷ್ಟರಲ್ಲಿ ಮನೆಯಿಂದ ಐವತ್ತು ಅಡಿ ದೂರದಲ್ಲೆ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಸುದ್ದಿ ಗೊತ್ತಾಗಿದೆ. ಆತನ ಬೈಕ್ ಅನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಯ ಬಳಿ ಬಿಟ್ಟಿದ್ದಾನೆ. ಉಳಿದ ಸ್ನೇಹಿತರು ಬೈಕ್ ಮೇಲೆ ಕರೆದುಕೊಂಡು ಬಂದಿದ್ದು, ಮನೆ ಹತ್ತಿರ ಕೊಲೆ ಮಾಡಿದ್ದಾರೆ. ಬೆಳಗ್ಗೆ ವಾಕಿಂಗ್ ಬಂದವರು ಕೊಲೆಯಾದ ದೃಶ್ಯವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೇವಣಸಿದ್ದ ಕುಟುಂಬಸ್ಥರಿಗೆ ಕೊಲೆಯಾದ ವಿಚಾರ ಮುಟ್ಟಿಸಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯ ಹಿಂದಿನ ಅಸಲಿ ಕಾರಣ ಹೊರಬರಬೇಕಾಗಿದೆ. ಬರ್ಬರ ಹತ್ಯೆಯ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: Children Death: ಆಟವಾಡುವಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ