ಉಡುಪಿ : ಕೆಜಿಎಫ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ (Mangaluru Dinesh no more) ಇಂದು ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರದ ಮನೆಯಲ್ಲಿ ನಟ ದಿನೇಶ್ ಇಂದು ಬೆಳಗ್ಗೆ 3.30ಕ್ಕೆ ನಿಧನರಾಗಿದ್ದಾರೆ. ಕೆಜಿಎಫ್, ಉಳಿದವರು ಕಂಡಂತೆ, ರಿಕ್ಕಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಮೃತರು ಮಕ್ಕಳಾದ ಪವನ್, ಸಜ್ಜನ್ ಹಾಗೂ ಪತ್ನಿ ಭಾರತಿ ಡಿ. ಪೈ ಅವರನ್ನು ಅಗಲಿದ್ದಾರೆ. ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿತ್ತು. ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನೇಶ್ ಅವರ ಪಾರ್ಥಿವ ಶರೀರವನ್ನು ನಾಳೆ (ಮಂಗಳವಾರ) ಬೆಳಿಗ್ಗೆ 8 ಘಂಟೆಯಿಂದ ಲಗ್ಗೆರೆಯ ಅವರ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಇದನ್ನೂ ಓದಿ: Judge Frank Caprio: ʼವಿಶ್ವದ ಅತ್ಯಂತ ಮೃದು ನ್ಯಾಯಾಧೀಶʼ ಫ್ರಾಂಕ್ ಕ್ಯಾಪ್ರಿಯೊ ಇನ್ನಿಲ್ಲ