ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

SL Bhyrappa: ನಾಳೆ ಸಂತೇಶಿವರದಲ್ಲಿ ಕಾದಂಬರಿಕಾರ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಕೃತಜ್ಞತಾರ್ಪಣೆ

ಭೈರಪ್ಪ ಅವರ ಪ್ರಯತ್ನದ ಫಲವಾಗಿ ಯೋಜನೆ ಸಫಲಗೊಂಡು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ಪೂರೈಕೆಯಾಗಿದೆ. ಸುತ್ತಲ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಿಂದಾಗಿ ಸಾವಿರಾರು ಕೊಳವೆ ಬಾವಿಗಳು ಮರುಪೂರಣಗೊಂಡು ರೈತ ಸಮುದಾಯಕ್ಕೆ ಖುಷಿ ನೆಮ್ಮದಿ ದೊರೆತಿದೆ. ಇದರಿಂದ ಹರ್ಷಗೊಂಡ ಊರಿನ ಜನ ಭೈರಪ್ಪನವರನ್ನು ಸನ್ಮಾನಿಸುತ್ತಿದ್ದಾರೆ.

ನಾಳೆ ಸಂತೇಶಿವರದಲ್ಲಿ ಸಾಹಿತಿ ಎಸ್‌ಎಲ್‌ ಭೈರಪ್ಪ ಅವರಿಗೆ ಹುಟ್ಟೂರಿನ ಗೌರವ

ಎಸ್‌ ಎಲ್‌ ಭೈರಪ್ಪ

ಹರೀಶ್‌ ಕೇರ ಹರೀಶ್‌ ಕೇರ Mar 8, 2025 5:55 PM

ಬೆಂಗಳೂರು: ಕನ್ನಡದ ಹಿರಿಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್‌, ಪದ್ಮಭೂಷಣ ಪುರಸ್ಕೃತ ಎಸ್‌ಎಲ್‌ ಭೈರಪ್ಪ (SL Bhyrappa) ಅವರಿಗೆ ನಾಳೆ (ಮಾರ್ಚ್‌ 9) ಹುಟ್ಟೂರು ಸಂತೇಶಿವರದಲ್ಲಿ ಗೌರವ ಸನ್ಮಾನ ನಡೆಯಲಿದೆ. ಹುಟ್ಟೂರಿನ ಕೆರೆಯನ್ನು ಹೂಳುಮುಕ್ತಗೊಳಿಸಿದ ಹಾಗೂ ಏತ ನೀರಾವರಿ ನೀರನ್ನು ತರಿಸಿದ ಹಿನ್ನೆಲೆಯಲ್ಲಿ "ನಮ್ಮ ಭೈರಪ್ಪ ನಮ್ಮ ಹೆಮ್ಮೆ" ಹೆಸರಿನಲ್ಲಿ ಸನ್ಮಾನ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಎಸ್‌ಎಲ್‌ ಭೈರಪ್ಪನವರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆ ಕಟ್ಟೆಗಳಿಗೆ ಸರ್ಕಾರದ ವತಿಯಿಂದ ಏತ ನೀರಾವರಿ ಯೋಜನೆಯಡಿ ನೀರು ಪೂರೈಕೆಗೆ ಶ್ರಮ ವಹಿಸಿದ್ದರು. ಇದಕ್ಕಾಗಿ ಹತ್ತಾರು ವರ್ಷಗಳಿಂದ ಅವರು ಪ್ರಯತ್ನಿಸಿದ್ದರು. ಮುಖ್ಯಮಂತ್ರಿಗಳಾಗಿದ್ದ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕಂಡು ಮನವಿ ಸಲ್ಲಿಸಿದ್ದರು.

ಇದೀಗ ಅವರ ಪ್ರಯತ್ನದ ಫಲವಾಗಿ ಯೋಜನೆ ಸಫಲಗೊಂಡು ಸಂತೇಶಿವರ ಮತ್ತು ಅಗ್ರಹಾರ ಬೆಳಗುಲಿ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ಪೂರೈಕೆಯಾಗಿದೆ. ಸುತ್ತಲ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಏರಿಕೆಯಿಂದಾಗಿ ಸಾವಿರಾರು ಕೊಳವೆ ಬಾವಿಗಳು ಮರುಪೂರಣಗೊಂಡು ರೈತ ಸಮುದಾಯಕ್ಕೆ ಖುಷಿ ನೆಮ್ಮದಿ ದೊರೆತಿದೆ. ಇದರಿಂದ ಹರ್ಷಗೊಂಡ ಊರಿನ ಜನ ಭೈರಪ್ಪನವರನ್ನು ಸನ್ಮಾನಿಸುತ್ತಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಂಸದರಾದ ಡಾ.ಸಿಎನ್‌ ಮಂಜುನಾಥ್‌, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಶ್ರೇಯಸ್‌ ಎಂ. ಪಟೇಲ್‌, ಶಾಸಕರಾದ ಕೆಎನ್‌ ರಾಜಣ್ಣ, ಸಿಎನ್‌ ಬಾಲಕೃಷ್ಣ, ಷಡಕ್ಷರಿ, ಜೆಸಿ ಮಾಧುಸ್ವಾಮಿ ಮುಂತಾದವರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಭೈರಪ್ಪನವರ ಮೆರವಣಿಗೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಭೈರಪ್ಪನವರ ಕೃತಿಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ.

ಇದನ್ನೂ ಓದಿ: S.L. Bhyrappa: ನಮ್ಮ ಭೈರಪ್ಪ ನಮ್ಮ ಹೆಮ್ಮೆ; ಫೆ. 23ಕ್ಕೆ ಎಸ್.ಎಲ್.ಭೈರಪ್ಪಗೆ ಹುಟ್ಟೂರ ಅಭಿನಂದನೆ