ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸತ್ಯ ಸಾಯಿ ಧರ್ಮಶಾಲ ಸೇವಾ ಟ್ರಸ್ಟ್ ವತಿಯಿಂದ ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ

ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ಮುಂದಿನ ಜೀವನಕ್ಕೆ ಪ್ರಮುಖ ಘಟ್ಟವಾಗಿದೆ. ಇಲ್ಲಿಂದ ನಿಮ್ಮ ಶೈಕ್ಷಣಿಕ ಪ್ರಯಾಣ ಆರಂಭವಾಗಿ ಮುಂದೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡುವ ಹಾದಿಯಾಗಲಿದೆ. ವಿದ್ಯಾರ್ಥಿಗಳು ಮುಂದಿನ ಸಾಧನೆಗೆ ಮುಂದಾಗಬೇಕು ಎಂದರು

ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಸನ್ಮಾನ

Profile Ashok Nayak May 4, 2025 11:49 AM

ಬಾಗೇಪಲ್ಲಿ: ತಾಲೂಕಿನ 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಮರೆಯದೆ ಮುಂದಿನ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಬಿಳ್ಳೂರು ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ನಾಗರಾಜು ಪಟ್ಟಣದ ಸತ್ಯ ಸಾಯಿ ಧರ್ಮಶಾಲ ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಮಾತನಾಡಿದರು. ಸತ್ಯ ಸಾಯಿ ಧರ್ಮಶಾಲ ಸೇವಾ ಟ್ರಸ್ಟ್ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ ಎಲ್‌ಸಿ ಪರೀಕ್ಷೆ ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಈ ವರ್ಷ ಹೆಚ್ಚು ಭದ್ರತೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಫಲಿತಾಂಶ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೆ ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಇದೇ ರೀತಿಯ ಉತ್ತಮ ಸಾಧನೆ ಮುಂದಿನ ದಿನಗಳಲ್ಲಿಯೂ ಮೂಡಿಬರಲಿ. ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಸಾಧನೆ ಮಾಡಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: Chikkaballapur News: ಜನವಿರೋಧಿ ನೀತಿಗಳ ವಿರುದ್ಧ ಮೇ ೨೦ರಂದು ದೇಶದ್ಯಂತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ :  ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ

ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದಿನ ಜೀವನಕ್ಕೆ ಪ್ರಮುಖ ಘಟ್ಟವಾಗಿದೆ. ಇಲ್ಲಿಂದ ನಿಮ್ಮ ಶೈಕ್ಷಣಿಕ ಪ್ರಯಾಣ ಆರಂಭವಾಗಿ ಮುಂದೆ ದೊಡ್ಡಮಟ್ಟದಲ್ಲಿ ಸಾಧನೆ ಮಾಡುವ ಹಾದಿಯಾಗಲಿದೆ. ವಿದ್ಯಾರ್ಥಿಗಳು ಮುಂದಿನ ಸಾಧನೆಗೆ ಮುಂದಾಗಬೇಕು ಎಂದರು.

ಈ ಸಂಧರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ಅಮರನಾಥ ಬಾಬು, ಪಿ.ಜಿ.ಶಿವಶಂಕರಾಚಾರಿ, ಕೆ.ಟಿ. ವೀರಾಂಜನೇಯಲು, ಜಯರಾಂ ಶೆಟ್ಟಿ, ವೆಂಕಟಸ್ವಾಮಿ, ಮುನಿಯಪ್ಪ, ಚಿನ್ನಕೈವಾರಮಯ, ವೆಂಕಟೇಶ್, ಕೆ.ಬಿ.ಆಂಜನೇಯ ರೆಡ್ಡಿ ಜಿ.ವಿ.ಚಂದ್ರಶೇಖರ, ಆರ್. ಹನುಮಂತ ರೆಡ್ಡಿ ಹಾಗೂ ಸಾಧಕರು ಪೋಷಕರು ಹಾಜರಿದ್ದರು.

ತಾಲೂಕಿನ ೨೦೨೪-೨೫ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಮರೆಯದೆ ಮುಂದಿನ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಬಿಳ್ಳೂರು ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಅದ್ಯಕ್ಷರಾದ ನಾಗರಾಜು   ಪಟ್ಟಣದ ಸತ್ಯ ಸಾಯಿ ಧರ್ಮಶಾಲ ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಿ ಮಾತನಾಡಿದರು.