#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Saudi Accident: ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; 9 ಭಾರತೀಯರ ದುರ್ಮರಣ!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಒಂಬತ್ತು ಜನರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಾರತೀಯರ ಸಾವಿನ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ರಾಯಭಾರಿ ಕಚೇರಿ ಖಚಿತಪಡಿಸಿದೆ. ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಸೌದಿ ಅರೇಬಿಯಾ ರಸ್ತೆ ಅಪಘಾತ; 9 ಭಾರತೀಯರು ಬಲಿ

Saudi Accident

Profile Deekshith Nair Jan 29, 2025 5:43 PM

ರಿಯಾದ್: ಸೌದಿ ಅರೇಬಿಯಾದಲ್ಲಿ(Saudi Accident) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ಒಂಬತ್ತು ಜನರು ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭಾರತೀಯರ ಸಾವಿನ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ರಾಯಭಾರ ಕಚೇರಿ ಖಚಿತಪಡಿಸಿದೆ. ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಸೌದಿ ಅರೇಬಿಯಾದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ಅಪಘಾತ ಸಂಭವಿಸಿದೆ. ಮೃತರು ಭಾರತದ ಯಾವ ಭಾಗದವರು ಎಂಬ ಮಾಹಿತಿ ಈವರೆಗೆ ತಿಳಿದು ಬಂದಿಲ್ಲ.ವಿದೇಶಾಂಗ ಸಚಿವ ಜೈಶಂಕರ್‌ ತಮ್ಮ ಎಕ್ಸ್‌ ಖಾತೆಯ ಮೂಲಕ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.



ಭಾರತೀಯ ಕಾನ್ಸುಲೇಟ್, “ಸೌದಿ ಅರೇಬಿಯಾದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳ ದುರಂತ ಸಾವಿಗೆ ನಾವು ತೀವ್ರ ದುಃಖಿತರಾಗಿದ್ದೇವೆ” ಎಂದು ಹೇಳಿದೆ. ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ, ಅಧಿಕಾರಿಗಳು ಮತ್ತು ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಅಪಘಾತದಲ್ಲಿ ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mahakumbh Mela: ಮಹಾ ಕುಂಭಮೇಳಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಅಪಘಾತ; ರಾಜ್ಯದ ಇಬ್ಬರ ದುರ್ಮರಣ

“ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ" ಎಂದು ಭಾರತೀಯ ಕಾನ್ಸುಲೇಟ್ ಹೇಳಿದೆ.



ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ "ಭೀಕರ ಅಪಘಾತ ಮತ್ತು ಜೀವಹಾನಿಯ ಬಗ್ಗೆ ತಿಳಿದು ದುಃಖಿತನಾಗಿದ್ದನೆ. ಜೆಡ್ಡಾದ ನಮ್ಮ ಕಾನ್ಸುಲ್ ಜನರಲ್ ಜೊತೆ ಮಾತನಾಡಿದ್ದೇನೆ. ಅವರು ಸಂಬಂಧಪಟ್ಟ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ದುರಂತ ಪರಿಸ್ಥಿತಿಯಲ್ಲಿ ಅವರು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ” ಎಂದು ಜೈಶಂಕರ್‌ ಹೇಳಿದ್ದಾರೆ.