Supreme court: ಪ್ರಧಾನಿ ಮೋದಿ, ಆರ್‌ಎಸ್‌ಎಸ್ ವಿರುದ್ಧ ವ್ಯಂಗ್ಯ ಚಿತ್ರ- ಕಲಾವಿದನಿಗೆ ಸುಪ್ರೀಂ ಫುಲ್ ಕ್ಲಾಸ್!
Narendra Modi: ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಕುರಿತು ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಇಂದೋರ್ ಮೂಲದ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವೀಯ ಅವರನ್ನು ಸೋಮವಾರ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS) ಕಾರ್ಯಕರ್ತ ವಿರುದ್ಧ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ರಚಿಸಿ, ಅದನ್ನು ಸಾಮಾಜಿಕ ಜಾಲತಾಲದಲ್ಲಿ ಹರಿಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗರಂ ಆಗಿದೆ. ಆರೋಪಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದೆ. ಅಲ್ಲದೇ ತಕ್ಷಣ ಕಾರ್ಟೂನ್ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡುವಂತೆ ಆದೇಶ ಹೊರಡಿಸಿದೆ.
ಸೋಮವಾರ ನಡೆದ ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ನ್ಯಾಯಮೂರ್ತಿ ಅರವಿಂದ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ವ್ಯಂಗ್ಯಚಿತ್ರಕಾರರ ನಡವಳಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. 50 ವರ್ಷದ ವ್ಯಂಗ್ಯಚಿತ್ರಕಾರ ಹೇಮಂತ್ ಮಾಳವಿಯಾ ಅವರದ್ದು ಅಪ್ರಬುದ್ಧ ನಡವಳಿಕೆ. ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ. ವಾಕ್ ಸ್ವಾತಂತ್ರ್ಯವನ್ನು ಈ ವ್ಯಂಗ್ಯಚಿತ್ರಕಾರರು, ಸ್ಟ್ಯಾಂಡ್-ಅಪ್ ಹಾಸ್ಯನಟರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕರೆದಿದೆ.
ಈ ಸುದ್ದಿಯನ್ನೂ ಓದಿ: CJI Gavai: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿಢೀರ್ ಅಸ್ವಸ್ಥ- ಆಸ್ಪತ್ರೆಗೆ ದಾಖಲು
ನಂತರ ನ್ಯಾಯಾಲಯವು ಮಾಳವೀಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂದಿನ ವಿಚಾರಣೆಗೆ ಮುಂದೂಡಿತು, ಬಂಧನದ ವಿರುದ್ಧ ಮಧ್ಯಂತರ ರಕ್ಷಣೆಗಾಗಿ ಅರ್ಜಿಯನ್ನು ನಿರಾಕರಿಸಿತು. ಇಂದೋರ್‌ನ ಸೆಷನ್ಸ್ ನ್ಯಾಯಾಲಯವು ಮೇ 24 ರಂದು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಜುಲೈ 3ರಂದು ಮಧ್ಯಪ್ರದೇಶದ ಹೈಕೋರ್ಟ್ ಹೇಮಂತ್ ಮಾಳವೀಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.