ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ನಟ ದರ್ಶನ್‌ಗೆ ಮತ್ತೆ ಸಂಕಷ್ಟ; ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್‌ ಜಾಮೀನು ನೀಡಿರುವ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 2 ರಂದು ನಟ ದರ್ಶನ್ ಮತ್ತು ಗ್ಯಾಂಗ್‌ನ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ದರ್ಶನ್‌ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Profile Prabhakara R Mar 18, 2025 3:25 PM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್‌ಗೆ (Actor Darshan) ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಪೊಲೀಸ್‌ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಏಪ್ರೀಲ್ 2 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್ 2 ರಂದು ನಟ ದರ್ಶನ್ ಮತ್ತು ಗ್ಯಾಂಗ್‌ನ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಗೃಹ ಇಲಾಖೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Actor Darshan: ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್‌ ಸ್ಪರ್ಧೆ: ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಫೋಟಕ ಭವಿಷ್ಯ

ಡಿಸೆಂಬರ್ ತಿಂಗಳಲ್ಲಿ ಹೈಕೋರ್ಟ್​ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಇನ್ನಿತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಪೊಲೀಸ್ ಇಲಾಖೆಯು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಈವರೆಗೆ ನಡೆದಿರಲಿಲ್ಲ. ಇದೀಗ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ವಕೀಲ ವಕೀಲ ಅನಿಲ್ ಕುಮಾರ್ ನಿಶಾನಿ ಮನವಿ ಮಾಡಿದ್ದಾರೆ.

ವಕೀಲ ಅನಿಲ್ ಕುಮಾರ್ ನಿಶಾನಿ ಅವರ ಮನವಿಗೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಏಪ್ರಿಲ್ 2 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಏಪ್ರಿಲ್ 2 ರಂದು ನಡೆಯುವ ವಿಚಾರಣೆಯಲ್ಲಿ ಪ್ರಕರಣ ಪೊಲೀಸರ ಪರವಾದರೆ ದರ್ಶನ್, ಪವಿತ್ರಾ ಸೇರಿ ಇನ್ನಿತರ ಆರೋಪಿಗಳು ಮತ್ತೆ ಜೈಲು ಪಾಲಾಗಲಿದ್ದಾರೆ.

ಕಳೆದ ವರ್ಷ ಜೂನ್9 ರಂದು ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆಯಾಗಿತ್ತು. ಜೂನ್ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್, ಪವಿತ್ರಾ ಗೌಡ ಸೇರಿ ಹಲವರನ್ನು ಬಂಧಿಸಿದ್ದರು. ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಕೆಲವರು ಸುಮಾರು ಐದು ತಿಂಗಳ ಕಾಲ ವಿಚಾರಣಾಧೀನ ಕೈದಿಗಳಾಗಿ ಜೈಲು ವಾಸ ಅನುಭವಿಸಿದ್ದರು.