Udayagiri Violence: ಉದಯಗಿರಿ ಕಲ್ಲು ತೂರಾಟ ಕೇಸ್; ಮೈಸೂರಿನಲ್ಲಿ 144 ಸೆಕ್ಷನ್ ಜಾರಿ
ಜಾಥಾ ಹಿನ್ನೆಲೆಯಲ್ಲಿ, ಫೆಬ್ರವರಿ 24ರಂದು ಸೋಮವಾರ ಮಧ್ಯರಾತ್ರಿವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವುದರಿಂದ ಮೆರವಣಿಗೆ, ಸಭೆ, ಸಮಾರಂಭಕ್ಕೆ ನಿಷೇಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಮೈಸೂರು: ಮೈಸೂರಿನ (Mysuru news) ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ (Udayagiri Violence, stone pelting) ಖಂಡಿಸಿ ಸೋಮವಾರ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ (Section 144) ಜಾರಿಗೊಳಿಸಲಾಗಿದೆ.
ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದು, ನಾಳೆ ರಾಷ್ಟ್ರ ಸುರಕ್ಷತಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ.
ಇಂದಿನಿಂದ ನಾಳೆ ಮಧ್ಯರಾತ್ರಿವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವುದರಿಂದ ಮೆರವಣಿಗೆ, ಸಭೆ, ಸಮಾರಂಭಕ್ಕೆ ನಿಷೇಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.
ಕಂಡಕ್ಟರ್ ಮೇಲೆ ಹಲ್ಲೆ, ಐವರ ಬಂಧನ, ನಾಲಿಗೆ ಹರಿಬಿಟ್ಟ ʼನಾಲಾಯಕ್ʼ ಮುಖಂಡ
ಬೆಳಗಾವಿ: ಕನ್ನಡ ಮಾತನಾಡು ಎಂದಿದ್ದಕ್ಕೆ ಕೆಎಸ್ಆರ್ಟಿಸಿ (KSRTC) ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನನ್ನು ಬಂಧಿಸಲಾಗಿದೆ. 2 ದಿನಗಳ ಹಿಂದೆ ಕಂಡಕ್ಟರ್ ಮಹದೇವಪ್ಪ ದೂರು ದಾಖಲಿಸಿದ್ದರು. ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ್ದ ಪೊಲೀಸರು, ಇಂದು ಮತ್ತೋರ್ವ ಆರೋಪಿ ಮೋಹನ್ ಹಂಚಿನಮನಿ(25) ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾರಿಹಾಳ ಠಾಣೆ ಪೊಲೀಸರು ಒಟ್ಟು ಐವರನ್ನು ಬಂಧಿಸಲಾಗಿದೆ. ಈ ನಡುವೆ ಬೆಳಗಾವಿಯ ಎಂಇಎಸ್ ಮುಖಂಡನೊಬ್ಬ ʼಕನ್ನಡ ಸಂಘಟನೆಯವರು ನಾಲಾಯಕ್ʼ ಎಂದು ನಾಲಿಗೆ ಹರಿಬಿಟ್ಟಿದ್ದಾನೆ.
ಬೆಳಗಾವಿ- ಮಹಾರಾಷ್ಟ್ರ ಸಂಚಾರ ಸ್ಥಗಿತ
ಕರ್ನಾಟಕ, ಮಹಾರಾಷ್ಟ್ರದಲ್ಲಿ ಮರಾಠಿ ಪುಂಡರಿಂದ ಭಾಷಾ ಕಿರಿಕ‌್ ಮುಂದುವರೆದಿದೆ. ಪುಣೆಯಲ್ಲಿ ಕರ್ನಾಟಕ ಸಾರಿಗೆ ಬಸ್ ತಡೆದು ಕಪ್ಪು ಮಸಿಯಿಂದ ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟಿಕೆ ಮೆರೆದಿದ್ದಾರೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕನ್ನಡದಲ್ಲಿ ಮಾತಾಡು ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಗೂಂಡಾಗಿರಿ ಪ್ರಕರಣ ಗಡಿ ಜಿಲ್ಲೆಯಲ್ಲಿ ಭಾಷಾ ಬಾಂಧವ್ಯಕ್ಕೆ ಕೊಳ್ಳಿಯಿಟ್ಟಿದೆ. ಎಂಇಎಸ್, ಶಿವಸೇನೆ ಪುಂಡರ ಪುಂಡಾಟಿಕೆ ಬೆಳಗಾವಿ ಮತ್ತು ಮಹಾರಾಷ್ಟ್ರದಲ್ಲಿ ಮುಂದುವರೆದಿದೆ. ನಿನ್ನೆ ರಾತ್ರಿ ಮಹಾರಾಷ್ಟ್ರದ ಪುಣೆಯ ಸ್ವಾರಗೇಟ್ನಲ್ಲಿ ಕರ್ನಾಟಕದ ಅಂಬಾರಿ ಬಸ್ಗೆ ಕಪ್ಪು ಮಸಿ ಹಚ್ಚಿದ್ದಾರೆ. ಶಿವಸೇನೆ ಪುಂಡರು ಕರ್ನಾಟಕದ ಬಸ್ ಮೇಲೆ ಕಪ್ಪು ಮಸಿಯಿಂದ ಜೈ ಮಹಾರಾಷ್ಟ್ರ ಮತ್ತು ಮರಾಠಾ ಮಾನುಸ ಅಂತಾ ಬರೆದು ಗೂಂಡಾವರ್ತನೆ ತೋರಿದ್ದಾರೆ.
ಬೆಳಗಾವಿ ಡಿಪೋಗೆ ಸೇರಿದ್ದ ಅಂಬಾರಿ ಬಸ್ ಇಂದು ಬೆಳಗ್ಗೆ ಬೆಳಗಾವಿಗೆ ವಾಪಸ್ ಬಂದಿದೆ. ನಿನ್ನೆಯಷ್ಟೇ ಕೊಲ್ಲಾಪುರದಲ್ಲಿ ಶಿವಸೇನೆ ಪುಂಡರು ಕರ್ನಾಟಕ ಬಸ್ಗೆ ಭಗವಾ ಧ್ವಜ ಕಟ್ಟಿದ್ದರು. ಇದಾದ ಬಳಿಕ ರಾತ್ರಿ ಮಸಿ ಬಳೆದು ಕೃತ್ಯ ಎಸಗಿದ್ದಾರೆ. ಇದರಿಂದ ಕರ್ನಾಟಕ ಮಹಾರಾಷ್ಟ್ರ ರಾಜ್ಯದ ಮಧ್ಯೆ ಸುಗಮ ಬಸ್ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಪುಣೆಯಲ್ಲಿ ಮಸಿ ಹಚ್ಚಿದ್ದರಿಂದ ಮಹಾರಾಷ್ಟ್ರ ಸರ್ಕಾರದ ಬಸ್ಗಳು ಕರ್ನಾಟಕ ರಾಜ್ಯದ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಿವೆ.
ಇತ್ತ ಬೆಳಗಾವಿಯಿಂದ ಸುಮಾರು 150ಕ್ಕೂ ಅಧಿಕ ಬಸ್ಗಳ ಕಾರ್ಯಾಚರಣೆ ಮಾಡುತ್ತಿದ್ದು, ಇಂದು ಬಹುತೇಕ ಬಸ್ಗಳು ಗಡಿವರೆಗೂ ಮಾತ್ರ ಸಂಚರಿಸುತ್ತಿವೆ. ಆಗಾಗ ಒಂದು ಬಸ್ಗಳನ್ನ ಕಳುಹಿಸುತ್ತಿದ್ದು ಗಡಿಯಲ್ಲಿ ಬಿಗುವಿನ ವಾತಾವರಣ ಇದ್ದರೆ, ಮಹಾರಾಷ್ಟ್ರ ಪ್ರವೇಶಿಸದಂತೆ ಸಾರಿಗೆ ಇಲಾಖೆಯವರು ಸೂಚನೆ ಕೊಟ್ಟು ಕಳಿಸಿದ್ದಾರೆ. ಇತ್ತ ಬಸ್ಗಳೇ ಇಲ್ಲದ ಕಾರಣ ಬೆಳಗಾವಿ, ಕೊಲ್ಲಾಪುರ, ಪುಣೆಯಲ್ಲಿ ಕರ್ನಾಟಕದ ಪ್ರಯಾಣಿಕರು ಪರದಾಡುವಂತಾಗಿದೆ.
ಕನ್ನಡಿಗರ ಕುರಿತು ನಾಲಿಗೆ ಹರಿಬಿಟ್ಟ ʼನಾಲಾಯಕ್ʼ ಮುಖಂಡ
ಬೆಳಗಾವಿಯಲ್ಲಿ ಕನ್ನಡದ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಗೂಂಡಾಗಿರಿಯನ್ನು ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ ಸಮರ್ಥಸಿಕೊಂಡಿದ್ದಾನೆ. ʼಕನ್ನಡಪರ ಹೋರಾಟಗಾರರು ನಾಲಾಯಕ್ʼ ಎಂದು ಎಂಇಎಸ್ ಮುಖಂಡ ಬೆಳಗಾವಿ ನೆಲದಲ್ಲಿ ನಿಂತುಕೊಂಡೇ ನಾಲಿಗೆ ಹರಿ ಬಿಟ್ಟಿದ್ದಾನೆ. ಎಂಇಎಸ್ ಮುಖಂಡ ಶುಭಂ ಶಳಕೆಯಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಕಂಡಕ್ಟರ್ ಬಾಲಕಿ ಜೊತೆಗೆ ಅಸಭ್ಯ ವರ್ತನೆ ಮಾಡಿದ್ದಾನೆ. ಅದಕ್ಕೆ ಪೊಲೀಸರು ಪೋಕ್ಸೋ ಕೇಸ್ ಹಾಕಿದ್ದಾರೆ. ಇಂತಹ ನೀಚ, ನಾಲಾಯಲಕ್ ಕಂಡಕ್ಟರ್, ಇಂತಹ ಕಂಡಕ್ಟರ್ ಪರ ನಿಂತ ಕನ್ನಡ ಪರ ಸಂಘಟನೆಗಳು ಸಹ ನಾಲಾಯಕರು ಎಂದಿದ್ದಾನೆ.
ಇದನ್ನೂ ಓದಿ: Udayagiri Violence: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ : ಮೌಲ್ವಿ ಮುಸ್ತಾಕ್ ಬಂಧನ