Self Harming: ಪತ್ನಿ ಕಿರುಕುಳಕ್ಕೆ ಮತ್ತೊಬ್ಬ ಎಂಜಿನಿಯರ್ ಬಲಿ; ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ

Self Harming: ಪತ್ನಿ ಕಾಟಕ್ಕೆ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಹಾಸನದಲ್ಲಿ ನಡೆದಿದೆ. ಪತ್ನಿ ಕಾಟದಿಂದ ಬೇಸತ್ತು ಹಾಸನದ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

image-5a8a5f8c-7505-40e8-8c8a-ddaa397f2c8e.jpg
Profile Prabhakara R Jan 1, 2025 8:38 PM
ಹಾಸನ: ಪತ್ನಿ ಕಾಟಕ್ಕೆ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ದೇಶದಾದ್ಯಂತ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಅಂತಹ ಪ್ರಕರಣಗಳು ವರದಿಯಾಗುತ್ತಿವೆ. ಜಿಲ್ಲೆಯಲ್ಲೂ ಅಂತಹುದೇ ಘಟನೆ ನಡೆದಿದ್ದು, ಪತ್ನಿ ಕಾಟದಿಂದ ಬೇಸತ್ತು ಹಾಸನದ ಸಾಫ್ಟ್‌ವೇರ್ ಎಂಜಿನಿಯರ್ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ.
ಹಾಸನ ನಗರದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಮೋದ್ (35) ಮೃತರು. ಪತ್ನಿ ಕಾಟದಿಂದ ಬೇಸತ್ತು ಎಂಜಿನಿಯರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್ ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ನಾಪತ್ತೆಯಾಗಿದ್ದರು. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಮೋದ್ ಶವ ನೋಡಲು ಪತ್ನಿಯೂ ಬಂದಿದ್ದು, ಇದೇ ವೇಳೆ ಹೈಡ್ರಾಮಾ ನಡೆದಿದೆ. ತಾಯಿ ಹಾಗೂ ಮಗು ಜತೆ ಪತಿ ಶವ ನೋಡಲು ಪತ್ನಿ ಬಂದಿದ್ದಾರೆ. ಈ ವೇಳೆ ಪತ್ನಿ ಕುಟುಂಬ ಸದಸ್ಯರು ಹಾಗೂ ಪ್ರಮೋದ್ ಕುಟುಂಬ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ನಂತರ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ಕರೆದೊಯ್ದಿದ್ದಾರೆ.
ಈ ಸುದ್ದಿಯನ್ನೂ ಓದಿ | Mangalore News: ಮೂವರು ಮಕ್ಕಳನ್ನು ಕೊಂದು, ಪತ್ನಿಯ ಕೊಲೆಗೂ ಯತ್ನಿಸಿದವನಿಗೆ ಮರಣ ದಂಡನೆ
ಮುದ್ದಿನ ನಾಯಿ ಸತ್ತಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!
ಬೆಂಗಳೂರು: ಮುದ್ದಿನ ಸಾಕು ನಾಯಿ ಸತ್ತಿದ್ದಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Self Harming) ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವಪುರದಲ್ಲಿ ನಡೆದಿದೆ. ರಾಜಶೇಖರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಯುವಕ 9 ವರ್ಷದ ಹಿಂದೆ ಜಮರ್ನ್ ಶೆಫರ್ಡ್ ನಾಯಿ ತಂದಿದ್ದರು. ನಾಯಿಗೆ ಪ್ರೀತಿಯಿಂದ ಬೌನ್ಸಿ ಎಂದು ಹೆಸರಿಟ್ಟಿದ್ದರು. ಅನಾರೋಗ್ಯದಿಂದ ನಾಯಿ ಮೃತಪಟ್ಟಿದ್ದು, ಬೆಳ್ಳಗ್ಗೆ ಎದ್ದು ನೋಡಿದಾಗರಾಜಶೇಖ‌ರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Viral News: ಭಾಷೆ ಬಾರದಿದ್ದರೆ ಏನಂತೆ? ಗೂಗಲ್‌ ಟ್ರಾನ್ಸ್‌ಲೇಟ್‌ ಇದ್ದರೆ ಸಾಕಲ್ವೇ? ಈ ಕ್ಯೂಟ್‌ ವಿಡಿಯೊಗೆ ನೆಟ್ಟಿಗರು ಫುಲ್‌ ಫಿದಾ
ಹಾಸನದಲ್ಲಿ ಪ್ರಿಯಕರನಿಗೇ ಚಾಕು ಇರಿದ ಪ್ರಿಯತಮೆ; ನ್ಯೂ ಇಯರ್‌ ಪಾರ್ಟಿ ವೇಳೆ ಘಟನೆ
ಹಾಸನ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪ್ರಿಯಕರನಿಗೆ ಪ್ರಿಯತಮೆಯೇ ಚಾಕುವಿನಿಂದ ಇರಿದ (Stabbing Case) ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ರಾತ್ರಿ 12.30ಕ್ಕೆ ಘಟನೆ ನಡೆದಿದೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎ.ಗುಡುಗನಹಳ್ಳಿ ನಿವಾಸಿ ಮನು ಕುಮಾರ್ ಚಾಕು ಇರಿತಕ್ಕೊಳಗಾದ ಯುವಕ. ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರಿಗೆ ಆತನ ಪ್ರಿಯತಮೆ ಚಾಕು ಇರಿದಿದ್ದಾಳೆ. ಸದ್ಯ ಪ್ರಿಯತಮೆ ವಿರುದ್ಧ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಯೊಬ್ಬಳನ್ನು ಮನು ಕುಮಾರ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಕೆಲವು ದಿನಗಳಿಂದ ಇಬ್ಬರು ವೈಮನಸ್ಸಿಂದ ದೂರವಾಗಿದ್ದರು. ನೆನ್ನೆ ಹೊಸ ವರ್ಷಾಚರಣೆ ಪಾರ್ಟಿ ಮುಗಿದ ಸಂದರ್ಭದಲ್ಲಿ ಮನುಕುಮಾರ್ ಮನೆಗೆ ತೆರಳುತ್ತಿದ್ದ ವೇಳೆ ಯುವತಿ ಚಾಕು ಇರಿದಿದ್ದಾಳೆ.
ಹೋಟೆಲ್ ಒಳಗೆ ತೆರಳುತ್ತಿದ್ದ ವೇಳೆ ಎದುರಿಗೆ ಆಕೆಯ ಪ್ರಿಯತಮ ಮನುಕುಮಾರ್ ಭೇಟಿಯಾಗಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಅಲ್ಲಿದ್ದ ಕೆಲವರು ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರಿಯತಮೆ ಮನುಕುಮಾರ್‌ಗೆ ಚಾಕು ಇರಿದಿದ್ದಾಳೆ. ಸದ್ಯ ಯುವಕ ಹಾಸನದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?