ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Student Self Harming: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣಿಗೆ ಶರಣು

Bengaluru News: ನೆಲಮಂಗಲದ ಮಾದನಾಯಕನಹಳ್ಳಿಯ ರಾಮು ಹಾಗೂ ಶೋಭಾ ದಂಪತಿಯ ಮಗಳು ಕುಸುಮಾ ಎಸ್ಎಸ್ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ನೇಣು ಹಾಕಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Student Self Harming: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣಿಗೆ ಶರಣು

ಮೃತ ಕುಸುಮಾ

ಹರೀಶ್‌ ಕೇರ ಹರೀಶ್‌ ಕೇರ Aug 23, 2025 10:13 AM

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) 16 ವರ್ಷದ ಬಾಲಕಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ (SSLC Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನಿನ್ನೆ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಾಮು ಹಾಗೂ ಶೋಭಾ ದಂಪತಿಯ ಮಗಳು ಕುಸುಮಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಏನಾದರೂ ಸಮಸ್ಯೆ ಆಗಿತ್ತೇ, ಅಕಾಡೆಮಿಕ್‌ ವಿಷಯಗಳಿಗಾಗಿ ನೊಂದಿದ್ದಳೇ, ಅಥವಾ ಕುಟುಂಬದಲ್ಲಿ ಏನಾದರೂ ಸಮಸ್ಯೆ ಇತ್ತೇ, ಡೆತ್‌ನೋಟ್‌ ಬರೆದಿಟ್ಟಿದ್ದಾಳೆಯೇ ಇತ್ಯಾದಿ ವಿಚಾರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ; ಪತಿ ವಿರುದ್ಧ ಕೊಲೆ ಆರೋಪ

ಹುಬ್ಬಳ್ಳಿ: ಹುಬ್ಬಳ್ಳಿಯ ನಂದಗೋಕುಲ ಬಡಾವಣೆಯಲ್ಲಿ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ನವವಿವಾಹಿತೆಯ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜಯಶ್ರೀ (31) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಯಶ್ರೀ ಮೇ. 21 ರಂದು ಶಿವಾನಂದ್ ಜೊತೆಗೆ ಮದುವೆಯಾಗಿತ್ತು. ಶಿವಾನಂದ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ಜಯಶ್ರೀ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಮದುವೆ ಬಳಿಕ ಶಿವಾನಂದ ಪ್ರೀತಿಸಿದ್ದ ಯುವತಿ, ಜಯಶ್ರೀಗೆ ತಮ್ಮ ಪ್ರೇಮದ ವಿಚಾರ ಹೇಳಿದ್ದಳಂತೆ. ಅಲ್ಲದೇ 13 ವರ್ಷದ ಪ್ರೀತಿಯನ್ನು ಮುಚ್ಚಿಟ್ಟು ನಿನ್ನನ್ನು ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಳಂತೆ. ಇದರಿಂದ ಜಯಶ್ರೀ ಹಾಗೂ ಶಿವಾನಂದ ದಂಪತಿ ನಡುವೆ ಜೋರು ಜಗಳವಾಗಿದೆ. ನಿನ್ನೆ ರಾತ್ರಿ ಕೂಡ ಗಂಡ-ಹೆಂಡತಿ ನಡುವೆ ಗಲಾಟೆಯಾಗಿದೆ. ಈಗ ಜಯಶ್ರೀ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮದುವೆ ಬಳಿಕ ಶಿವಾನಂದ ಜಯಶ್ರಿಗೆ ಮಾನಸಿಕವಾಗಿ ಕಿರುಕುಳ, ಹಿಂಸೆ ನೀಡುತ್ತಿದ್ದ. ಈಗ ತಮ್ಮ ಮಗಳನ್ನು ಕೊಲೆಗೈದು ನೇಣು ಬಿಗಿದಿದ್ದಾಗಿ ಜಯಶ್ರೀ ಪೋಷಕರು ದೂರಿದ್ದಾರೆ. ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Dharmasthala Case: ಅನನ್ಯ ಭಟ್‌ ಎಂಬ ಮಗಳೇ ಇರಲಿಲ್ಲ, ನಾನು ಹೇಳಿದ್ದೆಲ್ಲಾ ಸುಳ್ಳು: ಸುಜಾತ ಭಟ್‌