ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ತಿಪ್ಪೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಶಶಿ ಅವಿರೋಧ ಆಯ್ಕೆ: ಸಂಭ್ರಮಾಚರಣೆ

ನನ್ನ ಅಧಿಕಾರವಧಿಯಲ್ಲಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕಾಳಜಿಯಿಂದ ಕೆಲಸ ಮಾಡುತ್ತೇನೆ.ಬೀದಿ ದೀಪ,ರಸ್ತೆಗಳ ಅಭಿ ವೃದ್ಧಿ, ಸ್ವಚ್ಛತೆ,ನೀರು ಪೂರೈಕೆ, ನೈರ್ಮಲ್ಯಕ್ಕೆ ಹೆಚ್ಚಿನ ಆಧ್ಯತೆ, ಜತೆಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಿ ಅಬಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಯನ್ನು ಅಭಿವೃದ್ಧಿಯತ್ತ ಸಾಗಿಸಿ ಮಾದರಿ ಪಂಚಾಯಿತಿ ಮಾಡುವುದಾಗಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಶಶಿ ತಿಳಿಸಿ ದರು

ಕ್ಷೇತ್ರದ ಎಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿಗರೇ ಆಯ್ಕೆಯಾಗುತ್ತಿದ್ದಾರೆ

ಒಂಬತ್ತು ತಿಂಗಳ ಅವಧಿಯುಳ್ಳ ಗ್ರಾ.ಪಂ.ಅಧ್ಯಕ್ಷರ ಆಯ್ಕೆ ಸಂಬಂಧ ಸೋಮವಾರ ನಡೆದ ಚುನಾವಣೆಯಲ್ಲಿ ಸಂಸದ ಸುಧಾಕರ್ ಬೆಂಬಲಿತ ಅಭ್ಯರ್ಥಿ ಮುಷ್ಟೂರು ಶಶಿ ಅವಿರೋಧವಾಗಿ ಆಯ್ಕೆಯಾಗಿದ್ದು ಪಂಚಾಯತಿ ಕಚೇರಿಯ ಮುಂಭಾಗವೇ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ಸಂಭ್ರಮಾಚರಣೆ ನಡೆಸಿದರು.

Profile Ashok Nayak Feb 17, 2025 9:12 PM

ಚಿಕ್ಕಬಳ್ಳಾಪುರ:  ಒಂಬತ್ತು ತಿಂಗಳ ಅವಧಿಯುಳ್ಳ ಗ್ರಾ.ಪಂ.ಅಧ್ಯಕ್ಷರ ಆಯ್ಕೆ ಸಂಬಂಧ ಸೋಮ ವಾರ ನಡೆದ ಚುನಾವಣೆಯಲ್ಲಿ ಸಂಸದ ಸುಧಾಕರ್ ಬೆಂಬಲಿತ ಅಭ್ಯರ್ಥಿ ಮುಷ್ಟೂರು ಶಶಿ ಅವಿ ರೋಧವಾಗಿ ಆಯ್ಕೆಯಾಗಿದ್ದು ಪಂಚಾಯತಿ ಕಚೇರಿಯ ಮುಂಭಾಗವೇ ಬಿಜೆಪಿ ಪಕ್ಷದ ಕಾರ್ಯ ಕರ್ತರು, ಮುಖಂಡರು ಸಂಭ್ರಮಾಚರಣೆ ನಡೆಸಿದರು. ತಾಲೂಕಿನ ತಿಪ್ಪೇನಹಳ್ಳಿ ಗ್ರಾಮಪಂಚಾ ಯಿತಿ ಆವರಣದಲ್ಲಿ ಸೋಮವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಶಶಿ ಅವಿರೋಧ ಆಯ್ಕೆಯಾದ ನಂತರ ಮಾತನಾಡಿದ ಮಾವು ಅಭಿವೃದ್ಧಿ ಮಂಡ ಳಿ ಅಧ್ಯಕ್ಷ ಕೆ.ವಿ. ನಾಗರಾಜ್ ಮಾತನಾಡಿ ಸಂಸದ ಸುಧಾಕರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ.

ಅವರ ಮೇಲೆ ವಿಶ್ವಾಸವಿಟ್ಟು ಮುಖಂಡರು ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಕ್ಷೇತ್ರದ ಎಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರೇ ಆಯ್ಕೆಯಾಗುತ್ತಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕೂಡ ಬಿಜೆಪಿ ಬೆಂಬಲಿತರೇ ಗೆಲುವು ಸಾಧಿಸಲಿದ್ದಾರೆ ಎಂದು ಮಾತನಾಡಿದರು.

ಇದನ್ನೂ ಓದಿ: Chikkaballapur News: ರಾಷ್ಟ್ರ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಲು ಸ್ಕೇಟಿಂಗ್ ಉತ್ತಮ ತರಬೇತಿ ನೀಡಲಾಗುತ್ತಿದೆ

ನೂತನ ಅಧ್ಯಕ್ಷ ಶಶಿ ಮಾತನಾಡಿ ನನ್ನ ಅಧಿಕಾರವಧಿಯಲ್ಲಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಕಾಳಜಿಯಿಂದ ಕೆಲಸ ಮಾಡುತ್ತೇನೆ.ಬೀದಿ ದೀಪ,ರಸ್ತೆಗಳ ಅಭಿವೃದ್ಧಿ,ಸ್ವಚ್ಛತೆ,ನೀರು ಪೂರೈಕೆ, ನೈರ್ಮಲ್ಯಕ್ಕೆ ಹೆಚ್ಚಿನ ಆಧ್ಯತೆ, ಜತೆಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಿ ಅಬಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಸಾಗಿಸಿ ಮಾದರಿ ಪಂಚಾಯಿತಿ ಮಾಡುವುದಾಗಿ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಶಶಿ ತಿಳಿಸಿ ದರು.

ನಾನು ಅವಿರೋಧವಾಗಿ ಆಯ್ಕೆಯಾಗಲು ಸಹಕಾರ ನೀಡಿದ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರಿಗೆ ಧನ್ಯವಾದಗಳು ತಿಳಿಸಿದ ಅವರು ಮಾತನಾಡಿದ ಅವರು ಅಭಿವೃದ್ಧಿ ಕಾರ್ಯ ಗಳನ್ನು ಕೈಗೊಳ್ಳಲು ವರ್ಷಗಳ ಸಮಯ ಮುಖ್ಯವಲ್ಲ ಸಿಕ್ಕಿದ ಸಮಯವನ್ನು ಬಳಸಿಕೊಂಡು ಜನರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿಗೆ ಏನೆಲ್ಲ ಮಾಡಬಹುದು ಪ್ರಾಮಾಣಿಕವಾಗಿ ಮಾಡಿದರೆ ಜನರ ವಿಶ್ವಾಸ ಗಿಟ್ಟಿಸಿಕೊಂಡು ಅವರ ಮನಸ್ಸಿನಲ್ಲಿ ಇರುವುದು ಸಾಧ್ಯ.ಸಂಸದ ಡಾ.ಕೆ.ಸುಧಾಕರ್ ಅವರನ್ನು ನೋಡಿ ಬಹಳಷ್ಟು ಕಲಿತಿದ್ದೇನೆ. ನಮ್ಮ ನಾಯಕರಾದ ಕೆ.ವಿ.ನಾಗರಾಜ್ ಹಾಗೂ ಸಂಸದರಾದ ಡಾ.ಕೆ.ಸುಧಾಕರ್ ಅವರ ಮಾರ್ಗದರ್ಶನದಲ್ಲಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿ ಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ರಂಗಣ್ಣ,ಶ್ರೀನಿವಾಸ್,ಗೋಪಾಲ್,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುನಿರಾಜು,ಮುಖಂಡರಾದ ರವೀಂದ್ರ, ವೆಂಕಟೇಶ್, ರವಿ, ಆನಂದ್, ಶೈಲಾ, ನಾಗೇಶ್, ಶಿವು, ಪಂಚಾಯಿತಿ ಸದಸ್ಯರು ಇದ್ದರು.

ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 13 ಬಿಜೆಪಿ ಬೆಂಬಲಿತರು ಹಾಗೂ 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, 13 ಬಿಜೆಪಿ ಬೆಂಬಲಿತ ಸದಸ್ಯರ ಬೆಂಬಲದೊಂದಿಗೆ ಶಶಿರವರು ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.