ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shiggaon Accident: ಶಿಗ್ಗಾಂವಿ ಬಳಿ ಭೀಕರ ಅಪಘಾತ; ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರ ದಾರುಣ ಸಾವು

Shiggaon Accident: ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ದುರಂತ ನಡೆದಿದೆ. ಇದರಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

Profile Prabhakara R Dec 25, 2024 4:40 PM
ಹಾವೇರಿ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ (Shiggaon Accident) ಶಿಗ್ಗಾಂವಿ ಬಳಿಯ ತಡಸ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗದಲ್ಲಿ ಸಂಚರಿಸುವಾಗ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಮತ್ತೊಂದು ಬದಿಯಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (59), ಪುತ್ರಿ ಮೀನಾ (39), ಮಹೇಶಕುಮಾರ.ಸಿ( 41) ಹಾಗೂ ಬಾಲಕ ಧನವೀರ (11) ಮೃತರು. ಹುಬ್ಬಳ್ಳಿಯಿಂದ ತಿಮ್ಮಾಪುರದ ಬೆಳ್ಳಿಗಟ್ಟಿ ಗ್ರಾಮದ ತಡಸ ಪಿಎಸ್‌ ವ್ಯಾಪ್ತಿಯಲ್ಲಿ ಈ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಅಂಶುಕುಮಾರ ತಡಸ್ ಠಾಣೆಯ ಪಿಎಸ್ಐ, ಸಿಪಿಐ ಸೇರಿ ಪೊಲೀಸ್ ಅಧಿಕಾರಿಗಳು ಭೆಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿ 4 ಜನರಿದ್ದರು, ಅವರೆಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 2 ಜನರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Pushpa 2 Stampede: ಪುಷ್ಪಾ2 ಕಾಲ್ತುಳಿತ; ಫೇಕ್‌ ವಿಡಿಯೊ ಶೇರ್‌ ಮಾಡಿದ್ರೆ ಹುಷಾರ್‌! ಪೊಲೀಸರಿಂದ ಖಡಕ್‌ ವಾರ್ನಿಂಗ್
ಜಮ್ಮುವಿನ ಪೂಂಛ್‌ ಬಳಿ ಅಪಘಾತ; ಕರ್ನಾಟಕದ ಮೂವರು ಯೋಧರ ಸಾವು
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ಸೇನಾ ವಾಹನ ಅಪಘಾತದಲ್ಲಿ (Poonch Accident) ಕರ್ನಾಟಕದ ಮೂವರು ಸೇರಿ ಐವರು ಯೋಧರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಐವರು ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.ಸುದ್ದಿ ತಿಳಿದ ಬಳಿಕ ಮೃತ ಯೋಧರ ಮನೆಯಲ್ಲಿ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಕೂಡ ಅಪಘಾತದಲ್ಲಿ ಕೊನೆಯುಸಿರೆದಿದ್ದಾರೆ. ಯೋಧರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದಾಗ ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತ್ತು. ಈ ದುರ್ಘಟನೆಯಲ್ಲಿ ಐವರು ಯೋಧರು ಮೃತಪಟ್ಟಿದ್ದು, ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ನೀಲಂ ಪ್ರಧಾನ ಕಚೇರಿಯಿಂದ ಬಲ್ಲೋಯಿ ಘೋರಾ ಪೋಸ್ಟ್‌ಗೆ ವಾಹನ ಬರುತ್ತಿದ್ದಾಗ ಫೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಾಜ್ಯದ ಯೋಧರ ಮೃತದೇಹವನ್ನು ನಾಳೆ ಬೆಳಗಾವಿಗೆ ತೆಗೆದುಕೊಂಡು ಬರಲಾಗುತ್ತದೆ.
ಈ ಸುದ್ದಿಯನ್ನೂ ಓದಿ | Terror Activities: ವಿಧ್ವಂಸಕ ಕೃತ್ಯಗಳಲ್ಲಿ ಬ್ರಿಟಿಷ್‌ ಯೋಧ ಭಾಗಿ? ಯಾರು ಈ ಜಗಜೀತ್ ಸಿಂಗ್? ಭಾರತದ ಆರೋಪಕ್ಕೆ ಯುಕೆ ರಿಯಾಕ್ಟ್‌
ಮೃತರ ಪೈಕಿ ದಯಾನಂದ ತಿರಕಣ್ಣವರ ಅವರು ಬೆಳಗಾವಿ ತಾಲೂಕಿನ ಸಾಂಬ್ರಾ‌ ಗ್ರಾಮದ ಯೋಧರಾಗಿದ್ದಾರೆ. ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ತಿರಕಣ್ಣವರ ಅವರು ಗಡಿ ರೇಖೆ ಬಳಿ ಗಸ್ತು ತಿರುಗುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹುತಾತ್ಮ ಯೋಧನ ಪಾರ್ಥಿವ ಶರೀರ ನಾಳೆ ಬೆಳಗಾವಿಗೆ ಬರುವ ಸಾಧ್ಯತೆಯಿದೆ.
ಯೋಧ ಅನೂಪ್ ಪೂಜಾರಿ ಅವರು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಆಗಿದ್ದಾರೆ. ಕಳೆದ 13 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಕೆಲವೇ ವರ್ಷಗಳಲ್ಲಿ ಸೇನೆಯಿಂದ ನಿವೃತ್ತಿ ಪಡೆದು ವಾಪಸ್ ಬರಬೇಕಿತ್ತು. ಇವರಿಗೆ ಹೆಂಡತಿ, ತಂದೆ-ತಾಯಿ ಹಾಗೂ 2 ವರ್ಷದ ಪುಟ್ಟ ಮಗುವಿದೆ.
ಯೋಧ ಮಹೇಶ್ ಮಾರಿಗೊಂಡ ಅವರು ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದ ಯೋಧ ಮಹೇಶ್ ನಾಗಪ್ಪ ಮಾರಿಗೊಂಡ (25) ಹುತಾತ್ಮರಾಗಿದ್ದಾರೆ. ಈ ಘಟನೆಯಲ್ಲಿ ಹುತಾತ್ಮರಾದ ಅತಿ ಚಿಕ್ಕ ವಯಸ್ಸಿನ ಯೋಧ ಇವರಾಗಿದ್ದಾರೆ. ಇವರು 11ನೇ ಮರಾಠಾ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 6 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಮಹೇಶ್ ಮಾರಿಗೊಂಡ ಅವರಿಗೆ ಕಳೆದ 3 ವರ್ಷಗಳ ಹಿಂದೆ ಮದುವೆಯಾಗಿತ್ತು. ಲಕ್ಷ್ಮೀ ಎಂಬ ಯುವತಿ ಮದುವೆಯಾಗಿದ್ದ ಮಹೇಶ್ ಇದೀಗ ಇಹಲೋಕ ತ್ಯಜಿಸಿದ್ದಾರೆ. ಇನ್ನು ಯೋಧ ಮಹೇಶ್ ಅವರಿಗೆ ತಾಯಿ ಹಾಗೂ ತಂಗಿ ಮತ್ತು ಒಬ್ಬ ತಮ್ಮ ಇದ್ದಾರೆ. ನಾಳೆ ಮೃತದೇಹ ಬೆಳಗಾವಿಗೆ ಬರಲಿದೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯದ ಮೂವರು ಯೋಧರ ಸಾವಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ತಿಳಿಸಿದ್ದಾರೆ.