DCC bank scam: ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ
ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಏ.9ರಂದು ಅಧಿಕೃತವಾಗಿ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ. ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಮಂಜುನಾಥ ಗೌಡ

ಶಿವಮೊಗ್ಗ: ನಕಲಿ ಚಿನ್ನ (fake gold) ವಿಟ್ಟು 62 ಕೋಟಿ ರೂ. ಸಾಲ (loan) ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank) ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಬಂಧಿಸಿದ್ದಾರೆ. ಡಿಸಿಸಿ ಬ್ಯಾಂಕ್ ಹಗರಣ (DCC bank scam) ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ (ED raid) ನಡೆಸಿದ್ದರು. ಅಲ್ಲದೇ ಮಂಜುನಾಥ್ ಗೌಡ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ನಡೆಸಿದ್ದರು.
ಹೆಚ್ಚಿನ ವಿಚಾರಣೆಗಾಗಿ ಮಂಜುನಾಥ್ ಗೌಡ ಅವರನ್ನು ಏ.9ರಂದು ಅಧಿಕೃತವಾಗಿ ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ 1ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿಯನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ. ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ ಮತ್ತು ದಿನದಲ್ಲಿ 30 ನಿಮಿಷ ವಕೀಲರಿಂದ ಮಂಜುನಾಥ್ ಗೌಡ ಭೇಟಿಗೆ ಕೋರ್ಟ್ ಅವಕಾಶ ನೀಡಿದೆ.
2014ರ ಜೂನ್‌ನಲ್ಲಿ ಶಿವಮೊಗ್ಗದ ಗಾಂಧಿ ಬಜಾರ್ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಹಗರಣ ನಡೆದಿತ್ತು. ಆ ವೇಳೆ ಮಂಜುನಾಥ್ ಗೌಡ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಶಾಖೆಯ ಮ್ಯಾನೇಜರ್ ಶೋಭಾ ಆಗಿದ್ದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅ.18ರಂದು ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯಕ್ಕೆ ಮೊದಲ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಮಂಜುನಾಥ್ ಗೌಡಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು. ಕಳೆದ ವಾರವಷ್ಟೇ ಇಡಿ ಸಮನ್ಸ್ ಪ್ರಶ್ನಿಸಿದ್ದ ಮಂಜುನಾಥ್ ಗೌಡ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಮೊನ್ನೆ ಮಂಜುನಾಥ ಗೌಡ ಹಾಗೂ ಶೋಭಾ ಇಬ್ಬರ ನಿವಾಸಗಳ ಮೇಲೂ ಇಡಿ ದಾಳಿ ನಡೆದಿದೆ.
ಇದನ್ನೂ ಓದಿ: ED Raid: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ ಸೇರಿ 3 ಕಡೆ ಇಡಿ ದಾಳಿ