Road Accident: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು
Shivamogga: ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳಿಬ್ಬರು ಹಾಲಿನ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.


ಶಿವಮೊಗ್ಗ : ಶಿವಮೊಗ್ಗದಲ್ಲಿ (Shivamogga) ಭೀಕರ ರಸ್ತೆ ಅಪಘಾತ (Road accident news) ಸಂಭವಿಸಿದ್ದು, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು (MBBS students) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳಿಬ್ಬರು ಹಾಲಿನ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಪಶ್ಚಿಮ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕುಡಿತಕ್ಕೆ ಹಣ ನೀಡದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿರಾಯ!
ಮೈಸೂರು: ಕುಡಿತಕ್ಕೆ ಹಣ ನೀಡದ ಪತ್ನಿಯನ್ನೇ ಪತಿ ಕೊಲೆ ಮಾಡಿರುವುದು ಮೈಸೂರಿನ (Mysuru News) ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಗಾಯತ್ರಿ ಕೊಲೆಯಾದ ಮಹಿಳೆ. ಪಾಪಣ್ಣ ಕೊಲೆ ಮಾಡಿರುವ ಪತಿ. ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ, ಸಾಲಗಾರನಾಗಿ ಕುಡಿತದ ಚಟಕ್ಕೆ ದಾಸನಾಗಿದ್ದ. ಹಣಕ್ಕಾಗಿ ಪತ್ನಿ ಮಕ್ಕಳನ್ನು ಪೀಡಿಸುತ್ತಿದ್ದ. ಜಮೀನು ಮಾರಿ ಹಣ ನೀಡುವಂತೆ ಹೆಂಡತಿಯನ್ನು ಪೀಡಿಸುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗುವಾಗ ಮಗನ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ವಿಜಯನಗರ ಪೊಲೀಸ್ ಠಾಣೆಗೆ ಮಗ ದೂರು ನೀಡಿದ್ದು, ಆರೋಪಿ ಪಾಪಣ್ಣನನ್ನ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: Chamarajanagara: ಚಾಮರಾಜನಗರದಲ್ಲಿ ಲೋ ಬಿಪಿಯಿಂದ 6 ವರ್ಷದ ಬಾಲಕ ಸಾವು