ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Shiva Rajkumar: ಕರುನಾಡಿಗೆ ಮರಳಿದ ಶಿವಣ್ಣನಿಗೆ ಅದ್ದೂರಿ ಸ್ವಾಗತ; ಭವ್ಯ ಮೆರವಣಿಗೆ

ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್‌ಗೆ ಶಿವಣ್ಣ ಬಂದಿಳಿಯುತ್ತಿದ್ದಂತೆ ಅವರನ್ನು ಸ್ವಾಗತಿಸಲು ಅಭಿಮಾನಿಗಳ ದಂಡೇ ಆಗಮಿಸಿತ್ತು. ಅಷ್ಟೇ ಅಲ್ಲದೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತಕ್ಕೆ ಜಮಾಯಿಸಿದ್ದರು.

ತಾಯ್ನಾಡಿಗೆ ಶಿವಣ್ಣ ಆಗಮನ...ಮುಗಿಲು ಮುಟ್ಟಿದ ಸಂಭ್ರಮಾಚರಣೆ

Shiva rajkumar

Profile Rakshita Karkera Jan 26, 2025 12:03 PM

ಬೆಂಗಳೂರು: ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ತಾಯ್ನಾಡಿಗೆ ಮರಳಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌(Shiva Rajkumar) ಅವರಿಗೆ ಏರ್‌ಪೋರ್ಟ್‌ನಲ್ಲೇ ಭವ್ಯ ಸ್ವಾಗತ ದೊರೆತಿದೆ. ಕ್ಯಾನ್ಸ್‌ರ್‌ನಿಂದ ಬಳಲುತ್ತಿದ್ದ ಅವರು ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಒಂದು ತಿಂಗಳ ನಂತರ ಅವರು ಚೇತರಿಸಿಕೊಂಡಿದ್ದು, ಇಂದು ಬೆಳಗ್ಗೆ ಕರುನಾಡಿಗೆ ಮರಳಿದ್ದಾರೆ.

ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್‌ಗೆ ಶಿವಣ್ಣ ಬಂದಿಳಿಯುತ್ತಿದ್ದಂತೆ ಅವರನ್ನು ಸ್ವಾಗತಿಸಲು ಅಭಿಮಾನಿಗಳ ದಂಡೇ ಆಗಮಿಸಿತ್ತು. ಅಷ್ಟೇ ಅಲ್ಲದೇ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತಕ್ಕೆ ಜಮಾಯಿಸಿದ್ದರು.

ಈ ಸುದ್ದಿಯನ್ನೂ ಓದಿ: Geetha Shivarajkumar: ನೀಮೋ ಸದಾ ನಮ್ಮೊಳಗಿದ್ದಾನೆ; ಮುದ್ದಿನ ಶ್ವಾನವನ್ನು ನೆನೆದು ಗೀತಾ ಶಿವರಾಜ್‌ಕುಮಾರ್‌ ಭಾವುಕ ಪತ್ರ

ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ಪಡೆದ ಶಿವರಾಜ್‌ ಕುಮಾರ್‌ ಅವರು ಅವರು ತಮ್ಮ ಕಾರಿನಲ್ಲೇ ಅಭಿಮಾನಿಗಳತ್ತ ಕೈ ಬೀಸಿದರು. ಇನ್ನು ನೆಚ್ಚಿನ ನಟನಿಗಾಗಿ ಅಭಿಮಾನಿಗಳು ಕೈಯಲ್ಲಿ ಹಾರ, ಕೇಕ್‌ ಹಿಡಿದು ಆಗಮಿಸಿದ್ದರು. ಅಲ್ಲದೇ ನೂರಾರು ಅಭಿಮಾನಿಗಳು ಜೈಕಾರ ಕೂಗಿದರು. ಬಳಿಕ ಶಿವಣ್ಣ ಮಾನ್ಯತಾ ಟೆಕ್ ಪಾರ್ಕ್‌ನ ನಿವಾಸಕ್ಕೆ ತೆರಳಿದರು.



ನಟ ಶಿವರಾಜ್‌ ಕುಮಾರ್‌ ಹಾಗೂ ಗೀತಾ ಶಿವರಾಜ್‌ ಕುಮಾರ್‌ ಅವರು ಬೆಂಗಳೂರಿಗೆ ಬರುವ ಕುರಿತು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ ಎಂದು ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್ ಅವರು ಹೇಳಿಕೊಂಡಿದ್ದರು.

ಮೂತ್ರ ಕೋಶದ ಕ್ಯಾನ್ಸರ್ ಸಂಬಂಧ ಶಿವರಾಜ್ ಕುಮಾರ್ ಡಿಸೆಂಬರ್ 18 ರಂದು ಬೆಂಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಮಾಡಿದ್ದರು. ಡಿಸೆಂಬರ್ 24ರಂದು ಶಿವರಾಜ್ ಕುಮಾರ್‌ಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆರೋಗ್ಯ ಸಂಬಂಧ ಶಿವರಾಜ್ ಕುಮಾರ್ 6 ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.