Shocking News: ನವಜಾತ ಶಿಶುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಕಟ್ಟಿ ಚರಂಡಿಗೆಸೆದರು!
ಹೇಮಾವತಿ ನಗರದ ಕಾರ್ಮೆಲ್ ಚರ್ಚ್ ಬಳಿಯ ಚರಂಡಿಯೊಳಗೆ ಹೆಣ್ಣು ನವಜಾತ ಶಿಶು ಪತ್ತೆಯಾಗಿದೆ. ಮಗುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿತ್ತು.
ಹಾಸನ: ನವಜಾತ ಶಿಶುವನ್ನು (New born baby) ಪ್ಲಾಸ್ಟಿಕ್ ಕವರ್‌ನಲ್ಲಿ ಕಟ್ಟಿ ಚರಂಡಿಗೆ ಎಸೆದಿರುವ (Thrown to drainage) ಶಾಕಿಂಗ್ ಘಟನೆ ಹಾಸನ (Hassan news) ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.
ಹೇಮಾವತಿ ನಗರದ ಕಾರ್ಮೆಲ್ ಚರ್ಚ್ ಬಳಿಯ ಚರಂಡಿಯೊಳಗೆ ಹೆಣ್ಣು ನವಜಾತ ಶಿಶು ಪತ್ತೆಯಾಗಿದೆ. ಮಗುವನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿತ್ತು. ಶಿಶುವಿನ ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಫೂಟೇಜ್‌ಗಳನ್ನು ಸಂಗ್ರಹಿಸಿ, ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ.
8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಮಂಡ್ಯ: ಮಂಡ್ಯ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲೆ ಆವರಣದಲ್ಲೇ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಗರದ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಕೇಕ್ ಕೊಡಿಸಿ, ಚಾಕುವಿನಿಂದ ಇರಿಯುವುದಾಗಿ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜ.31ರಂದು ಘಟನೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಯಾರೊಂದಿಗೆ ಹೇಳಿಕೊಂಡಿರಲಿಲ್ಲ. ಬಾಲಕಿ ಋತುಮತಿಯಾಗಿ ಎರಡು ದಿನ ಕಳೆದರೂ ಆಕೆಗೆ ಹೊಟ್ಟೆ ನಾವು, ರಕ್ತಸ್ರಾವ ನಿಂತಿರಲಿಲ್ಲ. ಇದರಿಂದ ಅನುಮಾನಗೊಂಡ ಬಾಲಕಿ ಚಿಕ್ಕಮ್ಮ ಬಂದು ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ.
ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬಂದ ಪೊಲೀಸರು ಬಾಲಕಿಯ ಆರೋಗ್ಯ ವಿಚಾರಣೆ ನಡೆಸಿದ್ದು, ಆಕೆಯ ಆರೋಗ್ಯದ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: Physical Abuse: ಮಂಡ್ಯದಲ್ಲಿ ಕಾಮುಕರ ಅಟ್ಟಹಾಸ; 8 ವರ್ಷದ ಬಾಲಕಿ ಮೇಲೆ ಮೂವರಿಂದ ಲೈಂಗಿಕ ದೌರ್ಜನ್ಯ