IPL 2025: ʻಕೆಕೆಆರ್ ಪ್ರಶಸ್ತಿ ಗೆದ್ದರೂ ಶ್ರೇಯಸ್ ಅಯ್ಯರ್‌ಗೆ ಸಿಗದ ಶ್ರೇಯʼ-ಸುನೀಲ್ ಗವಾಸ್ಕರ್!
Sunil Gavaskar on Shreyas Iyer: ತಮ್ಮ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ಗೆ ಪ್ರಶಸ್ತಿ ಗೆದ್ದು ಕೊಟ್ಟರೂ ಶ್ರೇಯಸ್ ಅಯ್ಯರ್ ಯಾವುದೇ ಶ್ರೇಯ ಲಭಿಸಲಿಲ್ಲ ಎಂದು ಭಾರತದ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ದಿಗ್ಗಜ ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಶ್ರೇಯಸ್ ಅಯ್ಯರ್ ನಾಯಕತ್ವಕ್ಕೆ ಸುನೀಲ್ ಗವಾಸ್ಕರ್ ಮೆಚ್ಚುಗೆ.

ನವದೆಹಲಿ: ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (KKR) ತಂಡ ಕಳೆದ ವರ್ಷ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಚಾಂಪಿಯನ್ ಆಗಿತ್ತು. ಆದರೂ ಅವರನ್ನು 2025ರ ಐಪಿಎಲ್ ಟೂರ್ನಿಗೆ ಉಳಿಸಿಕೊಳ್ಳಲು ಕೋಲ್ಕತಾ ಫ್ರಾಂಚೈಸಿ ಮನಸು ಮಾಡಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಕೆಕೆಆರ್ ಪ್ರಶಸ್ತಿ ಗೆದ್ದ ಶ್ರೇಯ ಶ್ರೇಯಸ್ ಅಯ್ಯರ್‌ಗೆ ಲಭಿಸಿಲ್ಲ ಎಂದು ಹೇಳಿದ್ದಾರೆ. ಇದೀಗ ನಡೆಯುತ್ತಿರುವ ಹದಿನೆಂಟನೇ ಆವೃತ್ತಿಯ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇವರ ನಾಯಕತ್ವದಲ್ಲಿ ಪಂಜಾಬ್ ಆಡಿದ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದೆ.
ಮಂಗಳವಾರ ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದಿದ್ದ13ನೇ ಪಂದ್ಯದಲ್ಲಿ ಲಖನೌ ಸೂಪರ್ ಕಿಂಗ್ಸ್ ವಿರುದ್ದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಲಖನೌ ತಂಡ 171 ರನ್‌ಗಳನ್ನು ಗಳಿಸಿತ್ತು. ಬಳಿಕ ಗುರಿ ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ ತಂಡ 16.2 ಓವರ್‌ಗಳಿಗೆ 177 ರನ್‌ಗಳನ್ನು ಗಳಿಸಿ 8 ವಿಕೆಟ್‌ಗಳಿಂದ ಗೆಲುವು ಪಡೆದಿದೆ. ಈ ಪಂದ್ಯದ ವೇಳೆ ಕಾಮೆಂಟರಿ ಮಾಡುತ್ತಿದ್ದ ಸುನೀಲ್ ಗವಾಸ್ಕರ್, ಶ್ರೇಯಸ್ ಅಯ್ಯರ್ ನಾಯಕತ್ವದ ಗುಣಗಳನ್ನು ಶ್ಲಾಘಿಸಿದ್ದಾರೆ.
IPL 2025: ಗೆಲುವಿನ ಬಳಿಕ ಪಂತ್ ಟ್ರೋಲ್ ಮಾಡಿದ ಪಂಜಾಬ್ ಕಿಂಗ್ಸ್
2024ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿ ಚಾಂಪಿಯನ್ ಆಗಿತ್ತು. ಆದರೂ ಬಲಗೈ ಬ್ಯಾಟ್ಸ್‌ಮನ್ ಕೆಕೆಆರ್ ತಂಡದ ಯಶಸ್ಸಿನ ಶ್ರೇಯ ಲಭಿಸಿರಲಿಲ್ಲ ಎಂಬುದು ಬೇಸರದ ಸಂಗತಿ ಎಂದು ಹೇಳಿಕೊಂಡಿದ್ದಾರೆ. "2024ರ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿದ್ದ ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕರಾಗಿದ್ದರು. ಆದರೂ ಅವರಿಗೆ ಇದರ ಶ್ರೇಯ ಲಭಿಸಿರಲಿಲ್ಲ ಎಂದು ನಂಬುತ್ತೇನೆ. ಅವರ ನಾಯಕತ್ವದ ಅಂಕಿಅಂಶಗಳು ಆಸಕ್ತದಾಯಕವಾಗಿದೆ," ಎಂದು ಸುನೀಲ್ ಗವಾಸ್ಕರ್ ತಿಳಿಸಿದ್ದಾರೆ.
ಪಂಜಾಬ್ ನಾಯಕ ಹೇಳಿದ್ದೇನು?
ಲಖನೌ ಸೂಪರ್ ಜಯಂಟ್ಸ್ ವಿರುದ್ಧದ ಪಂದ್ಯದ್ಲಿ ಗೆಲುವು ಪಡೆದ ಬಳಿಕ ಮಾತನಾಡಿದ ಪಿಬಿಕೆಎಸ್ ನಾಯಕ ಶ್ರೇಯಸ್ ಅಯ್ಯರ್, ತಮ್ಮ ಆಲೋಚನೆಗಳನ್ನು ಹಂಚಿಕೊಂಡರು ಮತ್ತು ಸರಿಯಾದ ಸಂಯೋಜನೆಗಿಂತ ಹೆಚ್ಚಾಗಿ ಕ್ರಿಕೆಟ್ ಪಂದ್ಯಗಳನ್ನು ಗೆಲ್ಲಲು ತಂಡಕ್ಕೆ ಅನುವು ಮಾಡಿಕೊಡುವುದು ಸರಿಯಾದ ಸೌಹಾರ್ದತೆ ಎಂದು ಹೇಳಿದ್ದಾರೆ.
IPL 2025: ಪಂಜಾಬ್ ಕಿಂಗ್ಸ್ ವಿರುದ್ದದ ಸೋಲಿನ ಬೆನ್ನಲ್ಲೆ ಪಿಚ್ ಕ್ಯುರೇಟರ್‌ಗಳನ್ನು ದೂರಿದ ಜಹೀರ್ ಖಾನ್!
"ನಿಜ ಹೇಳಬೇಕೆಂದರೆ, ಸರಿಯಾದ ಸಂಯೋಜನೆ ಇಲ್ಲ. ಸೌಹಾರ್ದತೆ ಮತ್ತು ಶಕ್ತಿ ಸರಿಯಾದ ಸಮಯದಲ್ಲಿ ಕೈ ಹಿಡಿಯಬೇಕು. ಎಲ್ಲಾ ತಂಡಗಳು ಪಂದ್ಯವನ್ನು ಗೆಲ್ಲಲು ಸರಿಯಾದ ಸಾಮರ್ಥ್ಯವನ್ನು ಹೊಂದಿವೆ ಎಂದು ನಾನು ಭಾವಿಸುತ್ತೇನೆ. ನೀವು ಪಂದ್ಯದಲ್ಲಿ ಆಡುವಾಗ ಇದೇ ರೀತಿಯ ಮನಸ್ಥಿತಿಯನ್ನು ಹೊಂದಿರಬೇಕು," ಎಂದು ಶ್ರೇಯಸ್ ಅಯ್ಯರ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್‌ನಲ್ಲಿ ತಿಳಿಸಿದ್ದಾರೆ.
"ಇದು ನಮಗೆ ಬೇಕಾದ ಆರಂಭ. ಹುಡುಗರು ತಮ್ಮ ಪಾತ್ರವನ್ನು ನಿಜವಾಗಿಯೂ ಚೆನ್ನಾಗಿ ನಿರ್ವಹಿಸಿದ್ದಾರೆ. ಪ್ರತಿಯೊಬ್ಬ ಆಟಗಾರ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆಯನ್ನು ನೀಡಿದ್ದಾರೆ ಮತ್ತು ಟೀಮ್ ಮೀಟಿಂಗ್‌ನಲ್ಲಿ ಯಾವ ಅಂಶಗಳ ಬಗ್ಗೆ ಚರ್ಚಿಸಲಾಗಿದೆಯೋ ಅದನ್ನು ನಾವು ನಿಜವಾಗಿಯೂ ಚೆನ್ನಾಗಿ ಕಾರ್ಯಗತಗೊಳಿಸಿದ್ದೇವೆ," ಎಂದು ಪಂಜಾಬ್ ಕಿಂಗ್ಸ್ ನಾಯಕ ಗುಣಗಾನ ಮಾಡಿದ್ದಾರೆ.