PM Narendra Modi: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಇಂದು, ಪ್ರಧಾನಿಯಿಂದ ಕನ್ನಡದಲ್ಲಿ ನಮನ
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದುಕೊಂಡಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠದ (siddaganga mutt) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ (shivakumara swamiji) ಜಯಂತಿ ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ್ದಾರೆ. ಕನ್ನಡದಲ್ಲೇ ಸಂದೇಶ ನೀಡಿರುವ ಅವರು, "ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಶಿವಕುಮಾರ ಸ್ವಾಮೀಜಿಗಳು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ" ಎಂದು ಹೇಳಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ" ಎಂದು ಬರೆದಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ… pic.twitter.com/fEvlBqxvtG
— Narendra Modi (@narendramodi) April 1, 2025
ವಿಶೇಷ ಕಾರ್ಯಕ್ರಮ
ಶ್ರೀಗಳ 118ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಶಿವಕುಮಾರ ಸ್ವಾಮೀಜಿಗಳ ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಂಗಳವಾರ ಬೆಳಗ್ಗೆ ನೆರವೇರಿದ್ದು, ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಶ್ರೀ ಸಿದ್ಧಗಂಗಾ ಮಠದಲ್ಲಿ ಬೆಳಗ್ಗೆ 11 ಗಂಟೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ, ಮೈಸೂರಿನ ಶ್ರೀ ಸುತ್ತೂರು ವೀರಸಿಂಹಾಸನ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ಶ್ರೀಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸುವರು. ಜತೆಗೆ ಅವರು ಸಿದ್ಧಗಂಗಾ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಲಯ ಕಟ್ಟಡ ಕೂಡ ಉದ್ಘಾಟನೆ ಮಾಡುವರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ, ಗೃಹಸಚಿವ ಹಾಗೂ ತುಮಕೂರು ಜಿಲ್ಲಾಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತಿತರರು ಉಪಸ್ಥಿತರಿರುವರು. 1 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ, ಐದಾರು ಕಡೆಗಳಲ್ಲಿದಾಸೋಹ ವ್ಯವಸ್ಥೆಯನ್ನು ಶ್ರೀಮಠದಲ್ಲಿಮಾಡಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಪೂಜ್ಯ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆ ಉತ್ಸವ, ಗದ್ದುಗೆಯಲ್ಲಿ ವಿಶೇಷ ಪೂಜೆ ನೆರವೇರಲಿದೆ. ಅತಿಥಿಗಳು ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆಗೆ ಆಗಮಿಸುವರು.
ಇದನ್ನೂ ಓದಿ: Murder Case: ಪತಿಯ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಹಿಳೆ ಸಂಶಯಾಸ್ಪದ ಸಾವು