#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

‌Mysuru news: ಮೈಸೂರಿನ ಪೊಲೀಸ್‌ ಠಾಣೆ ಮೇಲೆ ಡಿಜೆ ಹಳ್ಳಿ ಮಾದರಿ ದಾಳಿ, ಲಾಠಿ ಚಾರ್ಜ್

ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು.

ಮೈಸೂರಿನ ಪೊಲೀಸ್‌ ಠಾಣೆ ಮೇಲೆ ಡಿಜೆ ಹಳ್ಳಿ ಮಾದರಿ ದಾಳಿ, ಕಲ್ಲು ತೂರಾಟ

ಮೈಸೂರು ಉದಯಗಿರಿ ಉದ್ವಿಗ್ನ ಪರಿಸ್ಥಿತಿ

ಹರೀಶ್‌ ಕೇರ ಹರೀಶ್‌ ಕೇರ Feb 11, 2025 7:47 AM

ಮೈಸೂರು: ಮೈಸೂರಿನಲ್ಲಿ (Mysuru news) ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಪೋಸ್ಟ್‌ (Social media post) ಕೋಮು ಉದ್ವಿಗ್ನತೆ (Communal tension) ಸೃಷ್ಟಿಸಿದೆ. ಒಂದು ಸಮುದಾಯದ ಸಾವಿರಾರು ಯುವಕರು ಸೇರಿ ಬೆಂಗಳೂರಿನ ಡಿಜೆಹಳ್ಳಿ, ಕೆಜಿ ಹಳ್ಳಿ ಮಾದರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ಠಾಣೆ, ಡಿಸಿಪಿ ವಾಹನಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ್ ಎಂಬಾತ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ. ಆತನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಉದ್ರಿಕ್ತಗೊಂಡ ಸಾವಿರಾರು ಮಂದಿ ದಿಢೀರ್ ಪ್ರತಿಭಟನೆ ನಡೆಸಿದ್ದು, ಆತನನ್ನು ತಮ್ಮ ಕೈಗೊಪ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸದ್ಯ ಆರೋಪಿ ಸುರೇಶ್ ವಿರುದ್ಧ ದೂರು ದಾಖಲಿಸಿ ಉದಯಗಿರಿ ಠಾಣೆಯ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನು ವಿವಸ್ತ್ರಗೊಳಿಸಿ ತಲೆ ಮೇಲೆ ಸಮುದಾಯವೊಂದರ ವೇಷ ಭೂಷಣ, ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಇದಕ್ಕೆ ಆಕ್ರೋಶಗೊಂಡ ಒಂದು ಸಮುದಾಯದ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಇದನ್ನೂ ಓದಿ: Mysore News: ಮೈಸೂರು ಮಹಾರಾಣಿ ಕಾಲೇಜಿನ ಗೋಡೆ ಕುಸಿದು ಓರ್ವ ಸಾವು