ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Weather Forecast: ಇಂದು ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ, ಉಳಿದೆಡೆ ಒಣ ಹವೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Profile Prabhakara R Mar 13, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಒಣ ಹವೆಯ ವಾತಾವರಣ (Karnataka Weather) ಇತ್ತು. ಇನ್ನು ಮಾ.13ರಂದು ರಾಜ್ಯದ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚು, ಉಳಿದೆಡೆ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾ.14ರಿಂದ ಮಾ. 18 ರವರೆಗೆ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ 4 ದಿನಗಳವರೆಗೆ 2-3° C ರಷ್ಟು ಏರಿಕೆಯಾಗಲಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಮಂಗಳವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 38.2 ಡಿ.ಸೆ ದಾಖಲಾಗಿದೆ. ಇನ್ನು ಧಾರವಾಡದಲ್ಲಿ ಅತೀ ಕಡಿಮೆ ಉಷ್ಣಾಂಶ 17.0 ಡಿ.ಸೆ. ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Earbuds: ಇಯರ್‌ ಬಡ್‌ ಇಲ್ಲದೆ ಮನೆಯಿಂದ ಹೊರಹೋಗುವುದೇ ಇಲ್ವಾ? ಹಾಗಿದ್ದರೆ ನೀವು ಈ ಸುದ್ದಿ ಓದಲೇಬೇಕು

ತೀವ್ರ ಬಿಸಿಲು ಎಚ್ಚರಿಕೆ:

ಮುಂದಿನ 24 ಗಂಟೆಗಳವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣವಿರಲಿದೆ. ತೀವ್ರ ಬಿಸಿಲಿನಿಂದ ರಕ್ಷಣೆಗಾಗಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಸಾರ್ವಜನಿಕರು:

ಮಧ್ಯಾಹ್ನ 12ರಿಂದ ಮಧ್ಯಾಹ್ನ 3ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ.

ಬಾಯಾರಿಕೆ ಇಲ್ಲದಿದ್ದರೂ ಸಹ, ಸಾಕಷ್ಟು ನೀರು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ಕುಡಿಯಿರಿ.

ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಿ.

ತಲೆತಿರುಗುವಿಕೆ ಅಥವಾ ಅನಾರೋಗ್ಯ ಅನುಭವಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ, ಇದು ದೇಹವನ್ನು ಮತ್ತೆ ಹೈಟ್ರೇಟ್ ಮಾಡಲು ಸಹಾಯ ಮಾಡುತ್ತದೆ.

ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ರೈತರು/ಕೃಷಿ/ಕ್ಷೇತ್ರ ಕೆಲಸಗಾರರು:

ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ಕ್ರೀಡಾಪಟುಗಳು:

ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕಠಿಣ ಚಟುವಟಿಕೆಗಳು ಮತ್ತು ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.

ಪ್ರಯಾಣಿಕರು:

ಪ್ರಯಾಣ ಮಾಡುವಾಗ, ನೀರು/ಜ್ಯೂಸ್/ಮಜ್ಜಿಗೆಯನ್ನು ನಿಮ್ಮೊಂದಿಗೆ ಕೊಂಡೊಯ್ದಿರಿ.

ಮಧ್ಯಾಹ್ನ 12ರಿಂದ ಮಧ್ಯಾಹ್ನ 3ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ.