ನ. 24, 25ರಂದು ಸಂಡೂರಿನಲ್ಲಿ ಶ್ರೀ ಕುಮಾರಸ್ವಾಮಿ ಮಹಾಯಾತ್ರೆ
ನವೆಂಬರ್ 24 ಮತ್ತು 25ರಂದು ನಡೆಯುವ ಶ್ರೀ ಕುಮಾರಸ್ವಾಮಿ ಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ದೇವಸ್ಥಾನ ಸಮಿತಿ ಕಲ್ಪಿಸಿದೆ. ಮಹಾಯಾತ್ರೆಯನ್ನು ಯಶಸ್ವಿಗೊಳಿಸಲು ದೇವಸ್ಥಾನ ಸಮಿತಿ ಹಾಗೂ ಸಂಬಂಧಿಸಿದವರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
-
ಸಂಡೂರು: ತಾಲೂಕಿನ ಶ್ರೀ ಕುಮಾರಸ್ವಾಮಿಯ (ಕಾರ್ತಿಕಸ್ವಾಮಿ) ಮಹಾಯಾತ್ರೆ (Sri Kumaraswamy Maha yatra) ನವೆಂಬರ್ 24 ಮತ್ತು 25ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಹಾಯಾತ್ರೆಯ ಅಂಗವಾಗಿ ವಿಶೇಷ ಪೂಜೆ, ಮಹಾಭಿಷೇಕ, ಪೂರ್ಣಾಲಂಕಾರ, ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನ.24ರಂದು ಬೆಳಿಗ್ಗೆಯಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ಘೋರ್ಪಡೆ ರಾಜಮನೆತನದವರಿಂದ ಪಟಾರೋಹಣ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನ.25ರಂದು ವಿವಿಧ ಬೆಳಗ್ಗೆ 9:00 ಗಂಟೆಗೆ ಪ್ರತಿಪದಾ ದರ್ಶನ ಹಾಗೂ ಇನ್ನಿತರ ಕಾರ್ಯಕ್ರಮಗಳೊಂದಿಗೆ ಮಹಾಯಾತ್ರೆ ಜರುಗಲಿದೆ.
ಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ದೇವಸ್ಥಾನ ಸಮಿತಿ ಕಲ್ಪಿಸಿದೆ. ಸುತ್ತಮುತ್ತಲಿನ ಗ್ರಾಮಗಳು ಸೇರಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ರಾಜ್ಯಗಳಿಂದ ಭಕ್ತರು ಆಗಮಿಸಲಿದ್ದಾರೆ. ಮಹಾಯಾತ್ರೆಯನ್ನು ಯಶಸ್ವಿಗೊಳಿಸಲು ದೇವಸ್ಥಾನ ಸಮಿತಿ ಹಾಗೂ ಸಂಬಂಧಿಸಿದವರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕುಮಾರಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಮನವಿ ಮಾಡಿದೆ.