Chikkaballapur news: ಜೂ.19ಕ್ಕೆ ನಂದಿ ಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಚಿವ ಸಂಪುಟ ಸಭೆ ಏರ್ಪಾಡಾಗಿದ್ದು ಸಭೆ ನಡೆಯುವ ಜಾಗದಲ್ಲಿ ಸಭಾ ವೇದಿಕೆಯನ್ನು ಸಿದ್ಧಪಡಿಸಬೇಕು. ಸಭೆಯ ನಂತರ ಪತ್ರಿಕಾಗೋಷ್ಠಿ ಏರ್ಪಡಿಸಲು ಕ್ರಮ ವಹಿಸಬೇಕು, ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು.

ನಂದಿ ಬೆಟ್ಟದಲ್ಲಿ ಜೂನ್ ೧೯ ರಂದು ನಡೆಯುವ ಸಚಿವ ಸಂಪುಟದ ಅಂಗವಾಗಿ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ : ವಿಶ್ವ ವಿಖ್ಯಾತ ನಂದಿ ಗಿರಿಧಾಮದಲ್ಲಿ ಜೂ.19 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲ್ಲಿದ್ದು ಈ ಸಭೆಯ ಸುಗಮ ಹಾಗೂ ಸಮರ್ಪಕ ನಿರ್ವಹಣೆಗೆ ಅಗತ್ಯ ಪೂರ್ವ ಸಿದ್ದತೆ ಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ನಗರ ಹೊರವಲಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂನ್ ೧೯ರ ಮಧ್ಯಾಹ್ನ ೧೨ ಗಂಟೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟದ ೧೩ನೇ ಸಭೆಯನ್ನು ಕರೆಯಲಾಗಿದೆ. ಸದರಿ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರುಗಳು, ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: Chikkaballapur News: ಅಖಿಲ ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ
ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಚಿವ ಸಂಪುಟ ಸಭೆ ಏರ್ಪಾಡಾಗಿದ್ದು ಸಭೆ ನಡೆಯುವ ಜಾಗದಲ್ಲಿ ಸಭಾ ವೇದಿಕೆಯನ್ನು ಸಿದ್ಧಪಡಿಸಬೇಕು. ಸಭೆಯ ನಂತರ ಪತ್ರಿಕಾಗೋಷ್ಠಿ ಏರ್ಪಡಿಸಲು ಕ್ರಮ ವಹಿಸಬೇಕು, ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು. ನಂದಿ ಗಿರಿಧಾಮದ ಪ್ರವೇಶ ದ್ವಾರದಿಂದ ಮೇಲ್ಬಾಗದ ಸಭಾ ವೇದಿಕೆಯವರೆಗಿನ ರಸ್ತೆಯ ಬದಿಯಲ್ಲಿ ಸ್ವಚ್ಚತೆ ಕೈಗೊಂಡು ಕಸ ವಿಲೇವಾರಿ ಯಾಗಬೇಕು. ರಸ್ತೆಯ ಇಕ್ಕೆಲಗಳಲ್ಲಿ ಸೂಚನ ಫಲಕಗಳು ಅಗತ್ಯವಿದ್ದಲ್ಲಿ ನಿರ್ಮಿಸಬೇಕು. ರಸ್ತೆಯಲ್ಲಿ ಗುಳಿಗಳು ಇದ್ದಲ್ಲಿ ಸರಿಪಡಿಸಿ ದುರಸ್ತಿಯಾಗಬೇಕು. ವಸತಿ ನಿಲಯಗಳ ಕೊಠಡಿಗಳ ದುರಸ್ತಿಯಾಗಬೇಕು. ಸಂಚಾರ ದಟ್ಟಣೆಯಾಗದಂತೆ ಕ್ರಮವಹಿಸಬೇಕು. ಪೊಲೀಸ್ ಭದ್ರತೆಗೆ ಅಗತ್ಯ ಕ್ರಮವಹಿಸಬೇಕು. ಈ ಎಲ್ಲಾ ಕಾರ್ಯಗಳನ್ನು ಶಿಷ್ಟಾಚಾರದಂತೆ ನಿರ್ವಹಿಸಲು ಒಟ್ಟು ೧೯ ಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರಂತೆ ತಮಗೆ ಪ್ರಭಾರ ವಹಿಸಿರುವ ಕೆಲಸ ಕಾರ್ಯಗಳ ನಿರ್ವಹಣೆಯನ್ನು ಶಿಷ್ಟಾಚಾರದಂತೆ ಹಾಗೂ ಸುಸೂತ್ರವಾಗಿ ಮಾಡಬೇಕು. ಅದಕ್ಕೆ ಬೇಕಾಗಿರುವ ಪೂರ್ವಸಿದ್ಧತೆಗಳನ್ನು ಈಗಿನಿಂದಲೆ ಕೈಗೊಳ್ಳಲು ಸೂಚನೆ ನೀಡಿದರು.

ಕೇಂದ್ರ ಸ್ಥಾನದಲ್ಲಿರಲು ಸೂಚನೆ: ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ತಮ್ಮ ಕಾರ್ಯ ನಿರ್ವಹಣೆಯ ಕೇಂದ್ರ ಸ್ಥಾನದಲ್ಲಿಯೇ ಇದ್ದು ತಮ್ಮ ಕಾರ್ಯ ಕಲಾಪಗಳನ್ನು ತ್ವರಿತವಾಗಿ ನಿರ್ವಹಿ ಸಬೇಕು, ಕೇಂದ್ರ ಸ್ಥಾನದಲ್ಲಿ ವಾಸ್ತವ್ಯವಿರುವ ಬಗ್ಗೆ ಮನೆ ವಿಳಾಸ, ಜಿ.ಪಿ.ಆರ್.ಎಸ್ ಸಹಿತ ಛಾಯಾಚಿತ್ರವನ್ನು ನೀಡಬೇಕು. ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಯಮಾವಳಿ ರೀತ್ಯ ಕಾಲಮಿತಿಯಲ್ಲಿ ಮಾಡಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಹಾಗೂ ಸೇವೆಗಳನ್ನು ಫಲಾನುಭವಿಗಳಿಗೆ ಸುಗಮವಾಗಿ ತಲುಪಿಸುವ ವ್ಯವಸ್ಥೆಯಾಗಬೇಕು. ಮುಂದಿನ ೧೫ ದಿನಗಳ ಕಾರ್ಯ ನಿರ್ವಹಣೆಯ ಪಟ್ಟಿಯನ್ನು ತಮ್ಮ ಕಚೇರಿಯ ಸೂಚನಾ ಫಲಕದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂಗಡವಾಗಿ ಪ್ರಕಟಿಸಬೇಕು. ಅಧಿಕಾರಿಗಳು ದಿನಚರಿಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು, ಮೇಲಧಿಕಾರಿಗಳು ಕೇಳಿದಾಗ ದಿನಚರಿಯನ್ನು ತೋರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾರ್ಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪಾರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.