ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕುಂಭಮೇಳ ಕಾಲ್ತುಳಿತ ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ನೀಡಿದ ಉತ್ತರ ಪ್ರದೇಶ; ರಾಜ್ಯ ಸರ್ಕಾರವೂ ಪರಿಹಾರ ನೀಡಲಿ ಎಂದ ವಿಜಯೇಂದ್ರ

Kumbh Mela stampede: ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ.ಪರಿಹಾರ ಘೋಷಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ಬದ್ಧತೆ ಪ್ರದರ್ಶಿಸಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಕುಂಭಮೇಳ ಕಾಲ್ತುಳಿತ ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ನೀಡಿದ ಉತ್ತರ ಪ್ರದೇಶ

Profile Prabhakara R Mar 13, 2025 5:02 PM

ಬೆಂಗಳೂರು: ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ (Kumbh Mela stampede) ಮೃತಪಟ್ಟ ಬೆಳಗಾವಿ ಮೂಲದ ನಾಲ್ವರ ಕುಟುಂಬಗಳಿಗೆ ತಲಾ 25 ಲಕ್ಷ ರೂ.ಗಳಂತೆ 1 ಕೋಟಿ ರೂ. ಪರಿಹಾರವನ್ನು ಉತ್ತರ ಪ್ರದೇಶ ಸರ್ಕಾರ ನೀಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ವಿತರಿಸುವ ಮೂಲಕ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮಾನವೀಯತೆ ತೋರಿದ್ದಾರೆ. ಈಗಲಾದರೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ, ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ತನ್ನ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಮಾನವೀಯ ಮೌಲ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ನಮ್ಮ ಬಿಜೆಪಿ ಸರ್ಕಾರ ಕುಂಭಮೇಳದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಘಟಿಸಿದ ಕಾಲ್ತುಳಿತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 25 ಲಕ್ಷ ರೂ. ಪರಿಹಾರ ವಿತರಿಸುವ ಮೂಲಕ ತನ್ನ ಮಾನವೀಯ ಬದ್ಧತೆಯನ್ನು ಮೆರೆದಿದೆ, ಇದಕ್ಕಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೃತಜ್ಞತೆಗಳನ್ನು ಸಮರ್ಪಿಸುವೆ. ತನ್ನ ರಾಜ್ಯ ಅಥವಾ ಹೊರಗಿನ ರಾಜ್ಯದ ಯವರು ಎನ್ನುವುದನ್ನು ಲೆಕ್ಕಿಸದೇ ಕುಂಭಮೇಳದಲ್ಲಿ ಭಾಗವಹಿಸಿದವರೆಲ್ಲರೂ ಈ ದೇಶದ ಸತ್ಪ್ರಜೆಗಳು ಎಂದು ಪರಿಗಣಿಸಿ ತನ್ನ ಪರಿಹಾರವನ್ನು ಘೋಷಿಸಲಾಗಿದೆ.

ಆದರೆ, ಕರ್ನಾಟಕ ಸರ್ಕಾರ ಇವರೆವಿಗೂ ಇಂತಹ ಮಾನವೀಯ ನೆರವಿಗೆ ಮುಂದಾಗದಿರುವುದು ಬೇಸರದ ಸಂಗತಿ. ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡುವ ಬಜೆಟ್ ಮಂಡಿಸಿ ಮುಸ್ಲಿಂ ಓಲೈಕೆಗಾಗಿ ಯೋಜನೆಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಸನಾತನ ಹಿಂದೂ ಧರ್ಮದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ದುರ್ಮರಣಕ್ಕೀಡಾದವರ ಬಗ್ಗೆ ಕನಿಕರ ಮೂಡದಿರುವುದು ಅವರ ಧರ್ಮಬೇದದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ.

ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಕುಂಭಮೇಳದಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರಿಹಾರವನ್ನು ಘೋಷಿಸಿ ತನ್ನ ಬದ್ಧತೆ ಪ್ರದರ್ಶಿಸಲಿ ಎಂದು ಒತ್ತಾಯಿಸುವೆ ಎಂದು ತಿಳಿಸಿದ್ದಾರೆ.