ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Student Death: ಪರೀಕ್ಷೆ ಮುಗಿಸಿ ಬರುತ್ತಿದ್ದ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ.

ಪರೀಕ್ಷೆ ಮುಗಿಸಿ ಬರುತ್ತಿದ್ದ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jan 18, 2025 7:14 AM

ತುಮಕೂರು: ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿ ಬರುವಾಗ ಹೃದಯಾಘಾತದಿಂದ ಕಾಲೇಜಿನ ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಶಮಂತ್ (17) ಸಾವನ್ನಪ್ಪಿದ್ದಾನೆ.

ಗುರುವಾರ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿ ವಾಪಸ್ ಬರುವಾಗ ಎದೆ ನೋವಿನಿಂದ ಕುಸಿದು ಬಿದ್ದ ಶಮಂತ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ತುಮಕೂರಿನಲ್ಲಿಯೇ ವಿದ್ಯಾರ್ಥಿನಿಯೊಬ್ಬಳು ಹೀಗೆ ಮೃತಪಟ್ಟಿದ್ದಳು. ರಾಜ್ಯದ ಇತರ ಕಡೆಗಳಲ್ಲೂ ಇಂಥ ಘಟನೆಗಳು ವರದಿಯಾಗಿವೆ.

ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಪ್ರಕರಣದ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣ (POCSO case) ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ (Karnataka High Court) ಆದೇಶವನ್ನು ಕಾಯ್ದಿರಿಸಿದೆ.

ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಆದೇಶ ಕಾಯ್ದಿರಿಸಿತು. ಇದೇ ವೇಳೆ ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ಆ ಮೂಲಕ ಬಿಜೆಪಿ ನಾಯಕರೂ ಆಗಿರುವ ಮಾಜಿ ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.