#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Bangalore News: ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Bangalore News: ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್‌ ಬಿಟ್ಟು ಓದು ತಾಯಿ ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಬಾಲಕಿ, ಅಪಾರ್ಟ್‌ಮೆಂಟ್‌ನ ತನ್ನ ಕೊಠಡಿಯ ಕಿಟಕಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Profile Prabhakara R Feb 12, 2025 10:50 PM

ಬೆಂಗಳೂರು: ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Bangalore News) ನಗರದ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಘಟನೆ ನಡೆದಿದ್ದು, ಅವಂತಿಕಾ ಚೌರಾಸಿಯಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ, ತಾಯಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹತ್ತಿರ ಬರುತ್ತಿದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಧ್ಯಪ್ರದೇಶ ಮೂಲದ ಲಕ್ಷ್ಮೀಕಾಂತ್‌ ಚೌರಾಸಿಯಾ ದಂಪತಿಯ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲಕ್ಷ್ಮೀಕಾಂತ್‌ ಚೌರಾಸಿಯಾ ದಂಪತಿ ಇಬ್ಬರು ಪುತ್ರಿಯರ ಜತೆ ಕನ್ನಮಂಗಲದ ಅಪಾರ್ಟ್‌ಮೆಂಟ್‌ನ 20ನೇ ಮಹಡಿಯ ಫ್ಲ್ಯಾಟ್‌ನಲ್ಲಿವಾಸಿಸುತ್ತಿದ್ದರು. ಲಕ್ಷ್ಮೀಕಾಂತ್‌ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದರು. ಪತ್ನಿ ನಮ್ರತಾ ಗೃಹಿಣಿಯಾಗಿದ್ದರು.

ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಹಿರಿಯ ಪುತ್ರಿ ಅವಂತಿಕಾ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಮಾರ್ಚ್ 15 ರಂದು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯಲಿದ್ದು, ಓದಿಕೊಳ್ಳಲು ಮಕ್ಕಳಿಗೆ ರಜೆ ನೀಡಲಾಗಿತ್ತು. ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ತನ್ನ ಕೊಠಡಿಯಲ್ಲಿದ್ದ ಅವಂತಿಕಾ ಮೊಬೈಲ್‌ ನೋಡುತ್ತಿದ್ದಳು. ಇದನ್ನು ಗಮನಿಸಿದ ತಾಯಿ ನಮ್ರತಾ, 'ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್‌ ಬಿಟ್ಟು ಓದು' ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಅವಂತಿಕಾ, ತನ್ನ ಕೊಠಡಿಯ ಕಿಟಕಿ ಸರಿಸಿ ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ.

ತಕ್ಷಣ ತಾಯಿ, ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಲು ಮುಂದಾಗಿದ್ದಾರೆ. ಆದರೆ, ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಅವಂತಿಕಾ ಮೃತಪಟ್ಟಿದ್ದಾಳೆ.

ಈ ಸುದ್ದಿಯನ್ನೂ ಓದಿ | Microfinance ordinance: ಸಾಲಕ್ಕೆ ಭದ್ರತೆ ಕೇಳುವಂತಿಲ್ಲ, ನಿಯಮ ಮೀರಿದ್ರೆ 10 ವರ್ಷ ಜೈಲು ಶಿಕ್ಷೆ, 5 ಲಕ್ಷ ದಂಡ

ಫುಡ್​ ಪಾಯಿಸನ್; ಹಾಸ್ಟೆಲ್‌ನಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ

ಶಿರಾ: ಸರಕಾರಿ ಬಾಲಕರ ವಸತಿ ನಿಲಯದಲ್ಲಿ ಉಪಾಹಾರ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಲಕ್ಕನಹಳ್ಳಿಯಲ್ಲಿ ಬುಧವಾರ ನಡೆದಿದೆ. ತಕ್ಷಣವೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.​ ಫುಡ್​ ಪಾಯಿಸನ್ ಕಾರಣದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಮಕ್ಕಳು ಅಸ್ವಸ್ಥರಾಗಿರುವ ವಿಚಾರ ತಿಳಿದು ಪೋಷಕರು ಆಸ್ಪತ್ರೆಗೆ ಧಾವಿಸಿದ್ದು, ಹಾಸ್ಟೆಲ್‌ ವಾರ್ಡನ್‌, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಜಿಲ್ಲೆಯ ಕೆಲವು ಸರಕಾರಿ ವಸತಿ ನಿಲಯಗಳಲ್ಲಿ ಆಹಾರ ಸಾಮಗ್ರಿಯನ್ನು ಸರಿಯಾಗಿ ದಾಸ್ತಾನು ಮಾಡುವುದಿಲ್ಲ. ಅವಧಿ ಮುಗಿದಿದ್ದರೂ ಆಹಾರ ಸಾಮಗ್ರಿ ಬಳಸುತ್ತಾರೆ. ಈ ಬಗ್ಗೆ ವಿದ್ಯಾರ್ಥಿ ನಿಲಯ ಪಾಲಕರು ಎಚ್ಚರಿಕೆ ವಹಿಸಬೇಕಾಗಿದೆ ಪೋಷಕರು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Actor Vishal: ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್