ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಬೆಂಗಳೂರಿನಲ್ಲಿ ಕಾಲೇಜಿನ 4ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಕಟ್ಟಡದಿಂದಲೇ ಆಕೆ ಕೆಳಗೆ ಹಾರಿದ್ದಾಳೆ.

ಬೆಂಗಳೂರಿನಲ್ಲಿ ಕಾಲೇಜಿನ 4ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 22, 2025 9:40 AM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಮತ್ತೊಂದು ದುರಂತ ಸಂಭವಿಸಿದ್ದು, ಕಾಲೇಜಿನಲ್ಲಿ ಆತ್ಮಹತ್ಯೆ (Self harming) ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಸರಣಿಗೆ (student) ಮತ್ತೊಬ್ಬಾಕೆಯ ಸೇರ್ಪಡೆಯಾಗಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಕೇರಳ ಮೂಲದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ (Crime news) ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಕಾಲೇಜಿನ 4ನೇ ಮಹಡಿಯಿಂದ ಕೆಳಗೆ ಹಾರಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ಕೈಗೆ ಬರೆ ಎಳೆದು, ಡೈಪರ್‌ನಲ್ಲಿ ಕಾರದಪುಡಿ ಹಾಕಿದ ವಿಕೃತ ಅಂಗನವಾಡಿ ಸಹಾಯಕಿ

ಕನಕಪುರ: ರಾಜ್ಯದಲ್ಲಿ ಚಿಕ್ಕ ಮಗುವಿನ ಮೇಲೆ ವಿಕೃತಿ ಮೆರೆದ ಅಂಗನವಾಡಿ (Anganavadi) ಸಹಾಯಕಿಯೊಬ್ಬಳ ರಾಕ್ಷಸಿ ಕೃತ್ಯದ (Crime News) ಬಗ್ಗೆ ದೂರು ದಾಖಲಾಗಿದೆ. ಈಕೆ ಎರಡೂವರೆ ವರ್ಷದ ಮಗುವಿನ ಕೈ ಮೇಲೆ ಬರೆ (child abuse) ಹಾಕಿ, ಡೈಪರ್‌ನಲ್ಲಿ ಕಾರದಪುಡಿ ಹಾಕಿ ವಿಕೃತಿ ಮೆರೆದಿದ್ದಾಳೆ. ರಾಮನಗರ (Ramanagara news) ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ದೀಕ್ಷಿತ್ ಎಂಬಾತ ಸಂತ್ರಸ್ತ ಬಾಲಕ.

ಮಂಗಳವಾರ ಮಧ್ಯಾಹ್ನ ಮಗುವಿನ ಪೋಷಕರಾದ ರಮೇಶ್ ನಾಯಕ್, ಪತ್ನಿ ಚೈತ್ರಾಬಾಯಿ ತಮ್ಮ ಮಗುವನ್ನು ಕರೆದುಕೊಂಡು ಬರಲು ಅಂಗನವಾಡಿಗೆ ತೆರಳಿದ್ದಾರೆ. ಆಗ ಬಾಲಕ ಅಳುತ್ತಿರುವುದನ್ನು ಗಮನಿಸಿದ್ದಾರೆ. ವಿಚಾರಿಸಿದಾಗ ಸಹಾಯಕಿಯ ಕೃತ್ಯ ಗೊತ್ತಾಗಿದೆ. ಮಗು ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ ಹಾಕಿದ್ದಲ್ಲದೆ ಡೈಪರ್ ಒಳಗೆ ಕಾರದ ಪುಡಿ ಹಾಕಿ ಹಿಂಸಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಷಕರು ಸಿಡಿಪಿಒ ತಾಲೂಕು ಅಧಿಕಾರಿ ನಾರಾಯಣ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: Self Harming: 47 ವರ್ಷದ ಅಂಕಲ್ ಕಾಟ ತಾಳಲಾಗದೆ ಆತ್ಮಹತ್ಯೆಗೆ ಶರಣಾದ 19ರ ಯುವತಿ