ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suhas Shetty murder case: ಸುಹಾಸ್‌ ಶೆಟ್ಟಿ ಕೊಲೆಯ ಮತ್ತೊಬ್ಬ ಆರೋಪಿ, ಅಬ್ದುಲ್‌ ರಹಿಮಾನ್‌ ಕೊಲೆಯ ಇಬ್ಬರು ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ (Suhas Shetty murder case) ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾಗೇ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಕೊಲೆ (Abdul Rahiman Murder) ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನೂ ಬಂಧಿಸಲಾಗಿದೆ.

ಸುಹಾಸ್‌ ಶೆಟ್ಟಿ, ಅಬ್ದುಲ್‌ ರಹಿಮಾನ್‌ ಕೊಲೆಗಳ ಮೂವರು ಆರೋಪಿಗಳ ಬಂಧನ

ಹತ್ಯೆಯಾದ ಸುಹಾಸ್‌ ಶೆಟ್ಟಿ, ಅಬ್ದುಲ್‌ ರಹಿಮಾನ್

ಹರೀಶ್‌ ಕೇರ ಹರೀಶ್‌ ಕೇರ Jun 4, 2025 7:53 AM

ಮಂಗಳೂರು: ಮಂಗಳೂರು (Mangaluru news) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty murder case) ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹಾಗೇ ಬಂಟ್ವಾಳದಲ್ಲಿ ನಡೆದ ಅಬ್ದುಲ್‌ ರಹಿಮಾನ್‌ ಕೊಲೆ (Abdul Rahiman Murder) ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನೂ ಬಂಧಿಸಲಾಗಿದೆ.

ಬಜ್ಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಈತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಬಂಧಿತ ಆರೋಪಿ. ಅಬ್ದುಲ್ ರಜಾಕ್ ಪ್ರಮುಖ ಆರೋಪಿಗಳ ಜೊತೆ ಸೇರಿ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂಬ ಆರೋಪ ಇದೆ. ಅಬ್ದುಲ್ ರಜಾಕ್ ಈ ಪ್ರಕರಣದ ಪ್ರಮುಖ ಆರೋಪಿ ಮುಜಾಮಿಲ್​ನ ತಂದೆಯಾಗಿದ್ದಾನೆ. ಪುತ್ರ ಮುಜಾಮಿಲ್, ಅಳಿಯ ನೌಷಾದ್​ ಜೊತೆ ಸೇರಿ ಸುಹಾಸ್ ಶೆಟ್ಟಿ​ ಕೊಲೆಗೆ ಅಬ್ದುಲ್ ರಜಾಕ್ ಸಂಚು ರೂಪಿಸಿದ್ದಾನೆ ಎಂಬ ಆರೋಪ ಇದೆ. ಇದರೊಂದಿಗೆ ಸುಹಾಸ್‌ ಶೆಟ್ಟಿ ಕೊಲೆಯಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿದೆ.

ಮೇ 1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ (ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಹತ್ಯೆಗೊಳಗಾಗಿದ್ದ ಯುವಕ) ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದನು. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದನು. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ಪೊಲೀಸ್​ ತನಿಖೆ ವೇಳೆ ತಿಳಿದುಬಂದಿದೆ.

ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ಬಂಧನ

ಇತ್ತೀಚಿಗೆ ಸುಹಾಸ್‌ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಮತ್ತೆ ಇಬ್ಬರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ತೇಜಾಕ್ಷ ಮತ್ತು ಅಭಿನ್ ರೈ ಎನ್ನುವ ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.

ಇದನ್ನೂ ಓದಿ: Abdul Rahiman Murder case: ಅಬ್ದುಲ್‌ ರಹಿಮಾನ್‌ ಕೊಲೆ, ಇನ್ನಿಬ್ಬರ ಸೆರೆ; ಬಂಧಿತರ ಸಂಖ್ಯೆ 5ಕ್ಕೆ ಏರಿಕೆ