Suhas Shetty Murder Case: ದಕ್ಷಿಣ ಕನ್ನಡ ಇಂದು ಬಂದ್, ನಾಲ್ಕು ದಿನ ನಿಷೇಧಾಜ್ಞೆ, ಬಸ್ಸುಗಳಿಗೆ ಕಲ್ಲು ತೂರಾಟ
ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಇಂದು ದಕ್ಷಿಣ ಕನ್ನಡ ಬಂದ್‌ಗೆ ಕರೆ ಕೊಟ್ಟಿದೆ. ರಸ್ತೆಗಿಳಿದ ಖಾಸಗಿ ಬಸ್ ಮೇಲೆ ಉದ್ರಿಕ್ತ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಹಂಪನಕಟ್ಟೆ ಬಳಿಯ ಬಸ್ಸಿಗೆ ಉದ್ರಿಕ್ತ ಗುಂಪಿನಿಂದ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಮೂರು ಬಸ್ಸಿಗೆ ಹಾನಿಯಾಗಿದೆ.

ಕೊಲೆಯಾದ ಸುಹಾಸ್ ಶೆಟ್ಟಿ

ಮಂಗಳೂರು: ನಗರದಲ್ಲಿ (Mangaluru news) ಸಂಭವಿಸಿದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಭೀಕರ ಕೊಲೆಯ (Suhas shetty Murder Case ಹಿನ್ನೆಲೆಯಲ್ಲಿ ಕರಾವಳಿ ನಗರಿ ಕೊತ ಕೊತ ಕುದಿಯುತ್ತಿದ್ದು, ಇಂದಿನಿಂದ ಮೇ 6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ (Dakshna kannada bandh) ಹಿಂದೂ ಸಂಘಟನೆಗಳು (hindu outfits) ಕರೆ ನೀಡಿದ್ದು, ರಸ್ತೆಗಳಿದ ಖಾಸಗಿ ಬಸ್ಸುಗಳು ಕಲ್ಲು ತೂರಾಟ ನಡೆಸಲಾಗಿದೆ.
2022ರಲ್ಲಿ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಮೇ 1ರ ರಾತ್ರಿ 8.27ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಇಂದು ದಕ್ಷಿಣ ಕನ್ನಡ ಬಂದ್‌ಗೆ ಕರೆ ಕೊಟ್ಟಿದೆ. ರಸ್ತೆಗಿಳಿದ ಖಾಸಗಿ ಬಸ್ ಮೇಲೆ ಉದ್ರಿಕ್ತ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಹಂಪನಕಟ್ಟೆ ಬಳಿಯ ಬಸ್ಸಿಗೆ ಉದ್ರಿಕ್ತ ಗುಂಪಿನಿಂದ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಮೂರು ಬಸ್ಸಿಗೆ ಹಾನಿಯಾಗಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಸುಹಾಸ್ ಶೆಟ್ಟಿ ಅವರ ಇನೋವಾ ಕಾರು, ಆರೋಪಿಗಳು ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಹಾಗೂ ಮೀನು ಸಾಗಾಟದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬಳಸಿದ ಸ್ವಿಫ್ಟ್ ಕಾರಿನಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ.
ಇಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದೆ. ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ BNS ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಆಗಿದೆ. ಈ ನಿಷೇಧಾಜ್ಞೆ ಮುಂಜಾನೆ 6 ಗಂಟೆಯಿಂದ ಮೇ 6ರ ಮುಂಜಾನೆ 6 ಗಂಟೆ ವರೆಗೆ ನಾಲ್ಕು ದಿನಗಳ ಕಾಲ ಜಾರಿಯಲ್ಲಿರಲಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕರೆ ನೀಡಿರುವ ವಿಶ್ವ ಹಿಂದೂ ಪರಿಷತ್, ಪ್ರತಿಭಟನೆ ಕೂಡ ನಡೆಸಲಿವೆ.