ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Udhayanidhi Stalin: ಸನಾತನ ಧರ್ಮ ವಿವಾದಾತ್ಮಕ ಹೇಳಿಕೆ;ಉದಯನಿಧಿಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್!

ಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂಕೋರ್ಟ್ ನಿಂದ ಸೋಮವಾರ ರಿಲೀಫ್ ಸಿಕ್ಕಿದೆ. ಸನಾತನ ಧರ್ಮ ನಿರ್ಮೂಲನೆ ಅಗತ್ಯ ಎಂಬ ಹೇಳಿಕೆ ನೀಡಿದ್ದ ಸ್ಟಾಲಿನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸುಪ್ರೀಂಕೋರ್ಟ್ ಗೆ ಮೂರು ರಿಟ್ ಅರ್ಜಿಗಳ ಸಲ್ಲಿಕೆಯಾಗಿತ್ತು. ಈ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ ನೀಡಿಲ್ಲ.

ಸನಾತನ ಧರ್ಮ ವಿವಾದಾತ್ಮಕ ಹೇಳಿಕೆ; ಉದಯನಿಧಿ ವಿರುದ್ಧ ಕ್ರಮಕ್ಕೆ ಸುಪ್ರೀಂ ನಕಾರ!

Profile Deekshith Nair Jan 27, 2025 8:00 PM

ಚೆನ್ನೈ: ಸನಾತನ ಧರ್ಮದ(Sanatana Dharma) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ಗೆ(Udayanidhi Stalin) ಸುಪ್ರೀಂಕೋರ್ಟ್(Supreme Court) ನಿಂದ ಇಂದು (ಜ.27) ರಿಲೀಫ್ ಸಿಕ್ಕಿದೆ. ಸನಾತನ ಧರ್ಮ ನಿರ್ಮೂಲನೆ ಅಗತ್ಯ ಎಂಬ ಹೇಳಿಕೆ ನೀಡಿದ್ದ ಸ್ಟಾಲಿನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸುಪ್ರೀಂ ಕೋರ್ಟ್‌ಗೆ ಮೂರು ರಿಟ್ ಅರ್ಜಿಗಳ ಸಲ್ಲಿಕೆಯಾಗಿತ್ತು. ಈ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ ನೀಡಿಲ್ಲ.

ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಸಂವಿಧಾನದ 32 ನೇ ವಿಧಿಯಡಿ ರಿಟ್ ಅರ್ಜಿಯನ್ನು ಹೇಗೆ ಪುರಸ್ಕರಿಸಲು ಸಾಧ್ಯ ಎಂದು ಗಂಭೀರವಾಗಿ ಪ್ರಶ್ನಿಸಿತು. ಎಲ್ಲಾ ಅರ್ಜಿಗಳನ್ನು ಸುಪ್ರೀಂ ವಜಾಗೊಳಿಸಿದ್ದು, ಕಾನೂನಿನ ಅಡಿಯಲ್ಲಿ ಪರ್ಯಾಯ ಪರಿಹಾರ ಪಡೆಯಲು ಅರ್ಜಿದಾರರಿಗೆ ಸ್ವಾತಂತ್ರ್ಯವನ್ನು ನೀಡಲಾಗಿದೆ.



ಸೆಪ್ಟೆಂಬರ್ 2023ರಲ್ಲಿ ಚೆನ್ನೈನಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಚಿವ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ, ಸಮಾನತೆಗೆ ವಿರುದ್ಧವಾಗಿದೆ. ಅದನ್ನು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್‌ ನಿರ್ಮೂನೆ ಮಾಡಿದ ಹಾಗೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಅವರ ಹೇಳಿಕೆಯಿಂದಾಗಿ ವಿವಾದ ಭುಗಿಲೆದ್ದಿತ್ತು. ಹಿಂದೂಪರ ನಾಯಕರು ಮತ್ತು ಕಾರ್ಯಕರ್ತರು ಸ್ಟಾಲಿನ್‌ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಕಿಡಿಕಾರಿದ್ದರು.

ಈ ಸುದ್ದಿಯನ್ನೂ ಓದಿ:Mallikarjun Kharge: ತ್ರಿವೇಣಿ ಸಂಗಮದಲ್ಲಿ ಮುಳುಗಿ ಎದ್ದ ಮಾತ್ರಕ್ಕೆ ಬಡತನ ನಿರ್ಮೂಲನೆ ಸಾಧ್ಯವೇ?; ಖರ್ಗೆ ಪ್ರಶ್ನೆ!

ಉದಯನಿಧಿ ಹೇಳಿಕೆಯನು ಆಕ್ಷೇಪಿಸಿದ್ದ ಚೆನ್ನೈ ನಗರದ ಬೆಳತ್ತೂರು ಕಾಲೋನಿಯ ವಿ. ಪರಮೇಶ್, 'ಈ ಹೇಳಿಕೆಯು ಸಮಾಜದಲ್ಲಿ ಅಶಾಂತಿ, ದಂಗೆ ಎಬ್ಬಿಸಲು ಪ್ರಚೋದನೆ ನೀಡುವಂತಿದೆ. ಇದರಿಂದ ನನ್ನ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗಿದೆ' ಎಂದು ಆರೋಪಿಸಿ ಖಾಸಗಿ ದೂರು ಸಲ್ಲಿಸಿದ್ದರು.



ದೂರಿನ ಅನುಸಾರ ಭಾರತೀಯ ದಂಡ ಸಂಹಿತೆ-1860ರ ಕಲಂ 153, 298 ಮತ್ತು 500ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ವಿಚಾರಣಾ ನ್ಯಾಯಾಲಯವು ಉದಯನಿಧಿ ಸ್ಟಾಲಿನ್ ಹಾಗೂ ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿತ್ತು.