Suryakumar Yadav: ಶಸ್ತ್ರಚಿಕಿತ್ಸೆ ಬಳಿಕ ಮೊದಲ ಬಾರಿಗೆ ಅಭ್ಯಾಸ ನಡೆಸಿದ ಸೂರ್ಯಕುಮಾರ್
ಜೂನ್ 25 ರಂದು ಗಾಯಗೊಂಡಿದ್ದ ಸೂರ್ಯಕುಮಾರ್ ಆ ಬಳಿಕ ಜರ್ಮನಿಯ ಮ್ಯೂನಿಚ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಪುನರ್ವಸತಿ ಮತ್ತು ಫಿಟ್ನೆಸ್ ಮೌಲ್ಯಮಾಪನಕ್ಕಾಗಿ ಎನ್‌ಸಿಎಯಲ್ಲಿದ್ದರು. ಇದೀಗ ಮೈದಾನಕ್ಕಿಳಿದು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಸೂರ್ಯಕುಮಾರ್ ಅವರು ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದು ಎರಡನೇ ಬಾರಿ. ಅವರು ಜನವರಿ 2024 ರಲ್ಲಿಯೂ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.


ಬೆಂಗಳೂರು: ಜೂನ್‌ನಲ್ಲಿ ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗೆ(sports hernia) ಒಳಗಾದ ನಂತರ ಇದೇ ಮೊದಲ ಬಾರಿಗೆ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಸಂಪೂರ್ಣವಾಗಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸವನ್ನು ನಡೆಸಿದ್ದಾರೆ. ಇದು ಏಷ್ಯಾ ಕಪ್(Asia Cup 2025) ಆರಂಭಕ್ಕೂ ಮುನ್ನ ಭಾರತ ತಂಡ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ ಎನ್‌ಸಿಎಯಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ವೀಡಿಯೊವನ್ನು ಸೂರ್ಯಕುಮಾರ್ ಹಂಚಿಕೊಂಡಿದ್ದಾರೆ. "ನಾನು ಇಷ್ಟಪಡುವದನ್ನು ಮಾಡಲು ಹಿಂತಿರುಗಲು ಕಾಯಲು ಸಾಧ್ಯವಿಲ್ಲ" ಎಂದು ಅವರು ವೀಡಿಯೊಗೆ ಶೀರ್ಷಿಕೆ ನೀಡಿದ್ದಾರೆ.
ಜೂನ್ 25 ರಂದು ಗಾಯಗೊಂಡಿದ್ದ ಸೂರ್ಯಕುಮಾರ್ ಆ ಬಳಿಕ ಜರ್ಮನಿಯ ಮ್ಯೂನಿಚ್‌ಗೆ ಹೋಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಪುನರ್ವಸತಿ ಮತ್ತು ಫಿಟ್ನೆಸ್ ಮೌಲ್ಯಮಾಪನಕ್ಕಾಗಿ ಎನ್‌ಸಿಎಯಲ್ಲಿದ್ದರು. ಇದೀಗ ಮೈದಾನಕ್ಕಿಳಿದು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.
ಸೂರ್ಯಕುಮಾರ್ ಅವರು ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದು ಎರಡನೇ ಬಾರಿ. ಅವರು ಜನವರಿ 2024 ರಲ್ಲಿಯೂ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಏತನ್ಮಧ್ಯೆ, ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ನಡೆಯಲಿದ್ದು, ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಂಗ್ ಕಾಂಗ್ ವಿರುದ್ಧ ಸೆಣಸಲಿದೆ. ಭಾರತ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಅಭಿಯಾನವನ್ನು ಆರಂಭಿಸಲಿದೆ. ಭಾರತ ತಂಡವನ್ನು ಸೂರ್ಯಕುಮಾರ್ ಮುನ್ನಡೆಸಲಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು ಯುಎಇ ಮತ್ತು ಒಮಾನ್ ಜತೆಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತ ಸೆಪ್ಟೆಂಬರ್ 14 ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಇದಾದ ಬಳಿಕ ಸೂಪರ್ ಫೋರ್‌ನಲ್ಲೂ ಎದುರಾಗುವ ಸಾಧ್ಯತೆಯಿದೆ. ಗ್ರೂಪ್ ಬಿಯಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳು ಸೇರಿವೆ. ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್‌ಗೆ ಅರ್ಹತೆ ಪಡೆಯುತ್ತವೆ.
ಇದನ್ನೂ ಓದಿ Asia Cup 2025: ಭಾರತ-ಪಾಕ್ ಏಷ್ಯಾಕಪ್ ಪಂದ್ಯ ರದ್ದು ಸಾಧ್ಯತೆ!