ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Tahsildars Transfer: ರಾಜ್ಯ ಸರ್ಕಾರದಿಂದ 19 ಮಂದಿ ತಹಶೀಲ್ದಾರ್‌ಗಳ ವರ್ಗಾವಣೆ

ಈ ಕುರಿತಂತೆ ಕಂದಾಯ ಇಲಾಖೆಯ (revenue department) ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 19 ತಹಸೀಲ್ದಾರರನ್ನು ವರ್ಗಾವಣೆ ಮಾಡಲಾಗಿದೆ. ಆ ಮೂಲಕ ಆಡಳಿತ ಯಂತ್ರಕ್ಕೆ ಕೆಳಹಂತದಲ್ಲಿ ರಾಜ್ಯ ಸರ್ಕಾರ ಮೇಜರ್‌ ಸರ್ಜರಿ ನಡೆಸಿದೆ.

ರಾಜ್ಯ ಸರ್ಕಾರದಿಂದ 19 ಮಂದಿ ತಹಶೀಲ್ದಾರ್‌ಗಳ ವರ್ಗಾವಣೆ

ಹರೀಶ್‌ ಕೇರ ಹರೀಶ್‌ ಕೇರ Feb 25, 2025 7:07 AM

ಬೆಂಗಳೂರು: ರಾಜ್ಯ ಸರ್ಕಾರದಿಂದ (Karnataka Government) ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. 19 ತಹಶೀಲ್ದಾರ್‌ಗಳನ್ನು ವರ್ಗಾವಣೆಗೊಳಿಸಿ (Tahsildars Transfer) ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕಂದಾಯ ಇಲಾಖೆಯ (revenue department) ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಮುಲ್ಕಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ.

ಶಿರಸಿಯ ಸಹಾಯಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಕೃಷ್ಣಾ ಕಾಮಕರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಹಾಸನದ ಭೂಸ್ವಾಧೀನಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ಗೋವಿಂದರಾಜು ಬಿಎಂ ಅವರನ್ನು ಚಿತ್ರದುರ್ಗ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ.

tahsildar transfer

ಯಾದಗಿರಿಯ ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಬೆಳಗಾವಿಯ ಖಾನಾಪುರ ತಾಲ್ಲೂಕಿಗೆ, ಶಿರಸಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರನ್ನು ದಕ್ಷಿಣ ಕನ್ನಡದ ಮೂಡುಬಿದಿರೆ ತಾಲ್ಲೂಕಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಫೆ. 28ರಂದು ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ

ಹೊಸಪೇಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಹಂಪಿ ಉತ್ಸವ-2025ಕ್ಕೆ ದಿನಗಣನೆ ಆರಂಭವಾಗಿದೆ. ಫೆ.28 ಹಾಗೂ ಮಾರ್ಚ್ 1 ಮತ್ತು 2 ರಂದು ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ (Hampi Utsav 2025) ಜರುಗಲಿದೆ. ಫೆ.28 ರಂದು ಶುಕ್ರವಾರ ಸಂಜೆ 6 ಗಂಟೆಗೆ ಗಾಯತ್ರಿ ಪೀಠದ ಬಳಿ ನಿರ್ಮಿಸಲಾಗಿರುವ ಎಂ.ಪಿ. ಪ್ರಕಾಶ್ ಪ್ರಧಾನ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಹಂಪಿ ಉತ್ಸವ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘನ ಉಪಸ್ಥಿತರಿರುವರು. ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ್, ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್‌ ತಂಗಡಗಿ ಗೌರವ ಉಪಸ್ಥಿತರಿರುವರು.

ಇದನ್ನೂ ಓದಿ: Sam Pitroda: ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ವಿರುದ್ಧ ಬಿಜೆಪಿಯಿಂದ ಕರ್ನಾಟಕ ಲೋಕಾಯುಕ್ತ, ಇಡಿಗೆ ದೂರು