Champions Trophy: ಭಾರತ ತಂಡಕ್ಕೆ ಎಕ್ಸ್ ಫ್ಯಾಕ್ಟರ್ ಆಟಗಾರನನ್ನು ಆರಿಸಿದ ಗೌತಮ್ ಗಂಭೀರ್!
Gautam Gambhir on India's X Factor: ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡ ಭಾರತ ತಂಡ, ಇದೀಗ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ತಯಾರಿ ನಡೆಸುತ್ತಿದೆ. ಈ ಮಹತ್ವದ ಟೂರ್ನಿಯಲ್ಲಿ ಭಾರತ ತಂಡ ಕ್ಕೆ ಸ್ಪಿನ್ನರ್ ವರುಣ್ ಚಕ್ರವರ್ತಿ ಎಕ್ಸ್‌ಫ್ಯಾಕ್ಟರ್ ಎಂದು ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದಾರೆ.
![ಟೀಮ್ ಇಂಡಿಯಾದ ಎಕ್ಸ್ ಫ್ಯಾಕ್ಟರ್ ಆಟಗಾರನನ್ನು ಹೆಸರಿಸಿದ ಗಂಭೀರ್!](https://cdn-vishwavani-prod.hindverse.com/media/original_images/Gautam_Gambhir_KVhH2Rr.jpg)
ವರುಣ್ ಚಕ್ರವರ್ತಿ ಭಾರತಕ್ಕೆ ಎಕ್ಸ್ ಫ್ಯಾಕ್ಟರ್ ಎಂದ ಗೌತಮ್ ಗಂಭೀರ್!
![Profile](https://vishwavani.news/static/img/user.png)
ನವದೆಹಲಿ: ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ, ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರವರಿ 19 ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಜ್ಜಾಗುತ್ತಿದೆ. ಫೆಬ್ರವರಿ 19 ರಂದು ಭಾರತದ ಆತಿಥ್ಯದಲ್ಲಿ 50 ಓವರ್‌ಗಳ ಟೂರ್ನಿ ಆರಂಭವಾಗಲಿದೆ. ಫೆಬ್ರವರಿ 20ರಂದು ಬಾಂಗ್ಲಾದೇಶ ವಿರುದ್ಧ ಭಾರತ ತಂಡ, ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ತನ್ನ ಮೊದಲನೇ ಪಂದ್ಯವನ್ನು ಆಡಲಿದೆ. ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡಕ್ಕೆ ವರುಣ್ ಚಕ್ರವರ್ತಿ ಎಕ್ಸ್ ಫ್ಯಾಕ್ಟರ್ ಆಟಗಾರ ಎಂದು ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಭವಿಷ್ಯ ನುಡಿದಿದ್ದಾರೆ.
ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಪರ ಶುಭಮನ್ ಗಿಲ್ ಶತಕವನ್ನು ಸಿಡಿಸಿದ್ದರು. ವಿರಾಟ್ ಕೊಹ್ಲಿ ತನ್ನ 73ನೇ ಒಡಿಐ ಶತಕವನ್ನು ಸಿಡಿಸಿ ಫಾರ್ಮ್‌ಗೆ ಮರಳುವ ಮುನ್ಸೂಚನೆಯನ್ನು ತೋರಿದ್ದಾರೆ. ಅಂದ ಹಾಗೆ ಶುಭಮನ್ ಗಿಲ್ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಶತಕ ಬಾರಿಸಿದ್ದರು. ಆದರೆ, ವರುಣ್ ಚಕ್ರವರ್ತಿ ಎರಡನೇ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರೂ ಒಂದೇ ಒಂದು ವಿಕೆಟ್ ಪಡೆದಿದ್ದರು. ಆದರೂ, ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ವರುಣ್ ಚಕ್ರವರ್ತಿ ಎಕ್ಸ್ ಫ್ಯಾಕ್ಟರ್ ಆಟಗಾರ ಎಂದು ಗೌತಮ್ ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವರುಣ್ ಚಕ್ರವರ್ತಿ ಇನ್, ಜಸ್‌ಪ್ರೀತ್ ಬುಮ್ರಾ ಔಟ್: ಚಾಂಪಿಯನ್ಸ್ ಟ್ರೋಫಿಗೆ ಭಾರತದ ಪರಿಷ್ಕೃತ ತಂಡ!
ಯಶಸ್ವಿ ಜೈಸ್ವಾಲ್ ಸ್ಥಾನಕ್ಕೆ ವರುಣ್ ಚಕ್ರವರ್ತಿ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ವರುಣ್ ಚಕ್ರವರ್ತಿ, ಆರಂಭಿಕ ಯಶಸ್ವಿ ಜೈಸ್ವಾಲ್ ಅವರ ಬದಲಿಗೆ ಸ್ಥಾನವನ್ನು ಪಡೆದಿದ್ದಾರೆ. ಮೂರನೇ ಏಕದಿನ ಪಂದ್ಯದ ಬಳಿಕ ಮಾತನಾಡಿದ್ದ ಗೌತಮ್ ಗಂಭೀರ್, ವರುಣ್ ಚಕ್ರವರ್ತಿಗೆ ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯುವ ಸಾಮರ್ಥ್ಯವಿದೆ. ಈ ಕಾರಣದಿಂದಲೇ ಅವರನ್ನು ಆಯ್ಕೆ ಮಾಡಿದ್ದೇವೆ. ಆದರೆ, ಭಾರತ ತಂಡದ ಪ್ಲೇಯಿಂಗ್ XIನಲ್ಲಿ ವರುಣ್ ಚಕ್ರವರ್ತಿಗೆ ಸ್ಥಾನ ಸಿಗುವ ಬಗ್ಗೆ ಯಾವುದೇ ಖಚಿತತೆ ಇಲ್ಲ.
Winners are grinners 😃😃#TeamIndia #INDvENG pic.twitter.com/xNa72K5WAh
— BCCI (@BCCI) February 12, 2025
"ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆಯಲಯ ಮತ್ತೊಂದು ಆಯ್ಕೆ ನಮಗೆ ಅಗತ್ಯವಿತ್ತು. ಈ ಕಾರಣದಿಂದಲೇ ನಾವು ವರುಣ್ ಚಕ್ರವರ್ತಿಯನ್ನು ಕರೆಸಿಕೊಳ್ಳಲಾಗಿದೆ. ವರುಣ್ ನಮಗಾಗಿ ಏನು ಮಾಡಬಲ್ಲರ ಎಂದು ನಮಗೆ ತಿಳಿದಿದೆ ಹಾಗೂ ಅವರು ಎದುರಾಳಿ ತಂಡಕ್ಕೆ ಭೀತಿಯನ್ನು ಹುಟ್ಟಿಸಬಲ್ಲರು. ಬಹುತೇಕ ತಂಡಗಳು ವರುಣ್ ಚಕ್ರವರ್ತಿಯನ್ನು ಎದುರಿಸಿಲ್ಲ, ಈ ಕಾರಣದಿಂದ ಅವರು ನಮಗೆ ಎಕ್ಸ್ ಫ್ಯಾಕ್ಟರ್ ಆಟಗಾರ. ಅವರು ಆರಂಭದಿಂದ ಆಡುತ್ತಾರೆಂದು ನಾನು ಹೇಳುವುದಿಲ್ಲ. ತಂಡದಲ್ಲಿ ಬಲವಾದ ಬೌಲಿಂಗ್ ಲೈನ್ ಅಪ್ ಇರುವುದು ಯಾವಾಗಲೂ ತುಂಬಾ ಒಳ್ಳೆಯದು. ಅವರು (ವರುಣ್ ಚಕ್ರವರ್ತಿ) ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಪಡೆದರೆ, ಅದು ತಂಡಕ್ಕೆ ಅನುಕೂಲವಾಗಲಿದೆ," ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ, ವರುಣ್ ಚಕ್ರವರ್ತಿ