ಚಾಂಪಿಯನ್ಸ್ ಟ್ರೋಫಿಗೆ ಐವರು ಸ್ಪಿನ್ನರ್‌ಗಳೇಕೆ? ಟೀಕಾಕಾರರಿಗೆ ರೋಹಿತ್ ಶರ್ಮಾ ತಿರುಗೇಟು!
Rohit sharma on 5 Spinners in CT 2025: ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಐವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿರುವ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಗುರುವಾರ ಬಾಂಗ್ಲಾದೇಶ ವಿರುದ್ಧ ಭಾರತ ತಂಡ ತನ್ನ ಮೊದಲನೇ ಪಂದ್ಯವನ್ನು ಆಡಲಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರೋಹಿತ್ ಶರ್ಮಾ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

Rohit sharma press meet

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಭಾರತ ತಂಡದಲ್ಲಿ ಮೂವರು ಸ್ಪಿನ್ ಆಲ್‌ರೌಂಡರ್‌ಗಳು ಸೇರಿದಂತೆ ಐವರು ಸ್ಪಿನ್ನರ್‌ಗಳಿಗೆ ಸ್ಥಾನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಆಯ್ಕೆದಾರರು ಮತ್ತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹಲವು ಮಾಜಿ ಕ್ರಿಕೆಟಿಗರು ಟೀಕಿಸಿದ್ದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಐವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬಾಂಗ್ಲಾದೇಶ ವಿರುದ್ದ ಫೆಬ್ರವರಿ 20 ರಂದು ಭಾರತ ತಂಡ ತನ್ನ ಮೊದಲನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದ ಟೀಮ್ ಇಂಡಿಯಾ ನಾಯಕನ ಮೇಲೆ ಪತ್ರಕರ್ತರಿಂದ ಪ್ರಶ್ನೆಗಳು ಸುರಿಮಳೆ ಸುರಿಸಲಾಯಿತು. ಈ ಎಲ್ಲಾ ಪ್ರಶ್ನೆಗಳಿಗೂ ಹಿಟ್‌ಮ್ಯಾನ್ ಉತ್ತರ ನೀಡಿದ್ದಾರೆ. ನಮ್ಮಲ್ಲಿ ಮೂವರು ಸ್ಪಿನ್ ಆಲ್‌ರೌಂಡರ್‌ಗಳಿದ್ದಾರೆ. ಇಬ್ಬರು ಪೂರ್ಣ ಪ್ರಮಾಣದ ಸ್ಪಿನ್ನರ್‌ಗಳಿದ್ದಾರೆಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ ಎದುರಾಳಿ ತಂಡಗಳಲ್ಲಿ ಮೂವರು ಫಾಸ್ಟ್ ಬೌಲಿಂಗ್ ಆಲ್‌ರೌಂಡರ್‌ಗಳು ಸೇರಿದಂತೆ ಒಟ್ಟು ಆರು ಮಂದಿ ವೇಗಿಗಳಿದ್ದಾರೆ. ಇದನ್ನು ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ರೋಹಿತ್ ಶರ್ಮಾ ಸುದ್ದಿಗೋಷ್ಠಿಯಲ್ಲಿ ಗರಂ ಆದರು.
Rishabh Pant: ಚಾಂಪಿಯನ್ಸ್ ಟ್ರೋಫಿಯಿಂದ ಪಂತ್ ಹೊರಬೀಳುವ ಸಾಧ್ಯತೆ
"ನಮ್ಮ ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳು ಹಾಗೂ ಮೂವರು ಆಲ್‌ರೌಂಡರ್‌ಗಳಿದ್ದಾರೆ. ನಾನು ಅವರನ್ನು ಐವರು ಸ್ಪಿನ್ನರ್‌ಗಳ ರೀತಿ ನೋಡುತ್ತಿಲ್ಲ. ಇದರಲ್ಲಿ ಮೂವರು ಆಟಗಾರರು ಬೌಲಿಂಗ್ ಜೊತೆ ಬ್ಯಾಟ್ ಕೂಡ ಮಾಡಬಲ್ಲರು. ಬೇರೆ ತಂಡಗಳಲ್ಲಿ ಫಾಸ್ಟ್ ಬೌಲಿಂಗ್ ಆಲ್‌ರೌಂಡರ್‌ಗಳಿದ್ದಾರೆ. ನಿಮ್ಮಲ್ಲಿ ಆರು ಮಂದಿ ಫಾಸ್ಟ್ ಬೌಲರ್‌ಗಳಿದ್ದಾರೆಂದು ನೀವು ಏಕೆ ಪ್ರಶ್ನೆ ಮಾಡುವುದಿಲ್ಲ," ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಚಾಂಪಿಯನ್ಸ್ ತಂಡವನ್ನು ಸಮರ್ಥಿಸಿಕೊಂಡ ರೋಹಿತ್ ಶರ್ಮಾ
ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದ ಆಯ್ಕೆಯನ್ನು ಸಮರ್ಥಿಸಿಕೊಂಡ ರೋಹಿತ್ ಶರ್ಮಾ, ಎರಡು ಬಗೆಯ ಕೌಶಲವುಳ್ಳ ಆಟಗಾರರನ್ನು ಆಯ್ಕೆ ಮಾಡಲು ಸೆಲೆಕ್ಟರ್‌ಗಳು ಹಾಗೂ ಟೀಮ್ ಮ್ಯಾನೇಜ್‌ಮೆಂಟ್ ಬಯಸಿತ್ತು. ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಡೆಪ್ತ್ ತಂದುಕೊಡಲಿದ್ದಾರೆ ಎಂದು ಟೀಮ್ ಇಂಡಿಯಾ ಕ್ಯಾಪ್ಟನ್ ತಿಳಿಸಿದ್ದಾರೆ.
Reporter : "Hamne 5 spinners ka jo combination select Kiya uske piche kya reason hai"?
— 𝐑𝐮𝐬𝐡𝐢𝐢𝐢⁴⁵ (@rushiii_12) February 19, 2025
Rohit Sharma reply : " 2 spinner hai baki 3 all-rounder hai"😂😂
The Shana always be a Shana 🙇
pic.twitter.com/9SyMhB8aJH
"ನಮ್ಮ ಸಾಮರ್ಥ್ಯದ ಮೇಲೆ ನಾವು ಕೆಲಸ ಮಾಡುತ್ತಿದ್ದೇವೆ ಹಾಗೂ ಇದರ ಆಧಾರದ ಮೇಲೆ ತಂಡವನ್ನು ಕಟ್ಟುತ್ತಿದ್ದೇವೆ. ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನಮ್ಮ ತಂಡದಲ್ಲಿ ವಿಭಿನ್ನ ಆಯಾಮವನ್ನು ತಂದುಕೊಡುತ್ತಾರೆ. ಅವರು ತಂಡದಲ್ಲಿ ಸಾಕಷ್ಟು ಡೆಪ್ತ್ ತಂದುಕೊಡುತ್ತಾರೆ. ಈ ಕಾರಣದಿಂದಲೇ ಒಂದು ಕೌಶಲದ ಬದಲು ಎರಡು ಕೌಶಲ ಹೊಂದಿರುವವರನ್ನು ನಾವು ಪ್ರಯತ್ನಿಸುತ್ತಿದ್ದೇವೆ," ಎಂದು ರೋಹಿತ್ ಶರ್ಮಾ ಸಮರ್ಥಿಸಿಕೊಂಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ರೋಹಿತ್ ಶರ್ಮಾಗೆ ಕಹಿ ಸುದ್ದಿ ನೀಡಿದ ಬಿಸಿಸಿಐ!
ಐವರು ಸ್ಪಿನ್ನರ್‌ಗಳ ಆಯ್ಕೆಯನ್ನು ಪ್ರಶ್ನಿಸಿದ್ದ ಪಾರ್ಥಿವ್ ಪಟೇಲ್
ಇದಕ್ಕೂ ಮುನ್ನ ಭಾರತ ತಂಡದಲ್ಲಿ ಐವರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಿದ್ದನ್ನು ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಟೀಕಿಸಿದ್ದರು. ಅಲ್ಲದೆ ಐವರು ಸ್ಪಿನ್ನರ್‌ಗಳಲ್ಲಿ ಒಬ್ಬರನ್ನು ಕೈ ಬಿಟ್ಟು ಕನಿಷ್ಠ ಒಬ್ಬರು ಫಾಸ್ಟ್ ಬೌಲರ್ ಅನ್ನು ಆಯ್ಕೆ ಮಾಡಬೇಕಾಗಿತ್ತೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
"ಭಾರತ ತಂಡದಲ್ಲಿ ಜಾಸ್ತಿ ಸ್ಪಿನ್ನರ್‌ಗಳಿದ್ದಾರೆ. ಟೀಮ್ ಇಂಡಿಯಾದಲ್ಲಿ ಇನ್ನೊಬ್ಬ ಫಾಸ್ಟ್ ಬೌಲರ್‌ಗೆ ಅವಕಾಶ ನೀಡಬೇಕಾಗಿತ್ತು," ಎಂದು ಪಾರ್ಥಿವ್ ಪಟೇಲ್ ತಿಳಿಸಿದ್ದಾರೆ.