ಚಿಕ್ಕಮಗಳೂರು: ಮಹಿಳೆಯೊಬ್ಬಳು ತನ್ನ ಪ್ರಿಯಕರನಿಗಾಗಿ ಸ್ವಂತ ಅತ್ತೆಯನ್ನೇ ಮುದ್ದೆಯಲ್ಲಿ ವಿಷ ಹಾಕಿ ಕೊಂದಿರುವುದು (Murder Case) ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ ಎಂಬ ಮಹಿಳೆ ಅತ್ತೆ ದೇವೀರಮ್ಮ(75) ಅವರನ್ನು ಕೊಲೆ ಮಾಡಿದ್ದಾಳೆ.
ಅಶ್ವಿನಿ ಪ್ರಿಯಕರ ಆಂಜನೇಯ ಎಂಬುವನ ಜತೆ ಅನೈತಿಕ ಸಂಬಂಧ ಹೊಂದಿದ್ದಳು. ಇದಕ್ಕೆ ಅತ್ತೆ ದೇವೀರಮ್ಮ ಅಡ್ಡಿಯಾಗಿದ್ದಳು. ಪ್ರಿಯಕರನಿಗಾಗಿ ಅಶ್ವಿನಿ ಮನೆಯಲ್ಲಿ ಚಿನ್ನಾಭರಣ ಹಾಗೂ ಕಳವು ಮಾಡುತ್ತಿದ್ದಳು. ಕದ್ದ ಹಣ ಹಾಗೂ ಚಿನ್ನಾಭರಣವನ್ನು ಪ್ರಿಯಕರ ಆಂಜನೇಯನಿಗೆ ಕೊಡುತ್ತಿದ್ದಳು.
ಈ ವಿಷಯ ಗೊತ್ತಾದ ಬಳಿಕ ಅತ್ತೆಯನ್ನೇ ಸೊಸೆ ಅಶ್ವಿನಿ ವಿಷ ಹಾಕಿ ಕೊಂದಿದ್ದಾಳೆ ಎನ್ನಲಾಗಿದೆ. ಬಳಿಕ ಮನೆಯವರಿಗೆ ದೇವಿರಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಿದ್ದಳು. ಮನೆಯಲ್ಲಿ 100 ಗ್ರಾಂ ಚಿನ್ನ ಹಾಗೂ 50 ಸಾವಿರ ಹಣ ಕಳವಾಗಿದ್ದರಿಂದ ಅಶ್ವಿನಿ ನಾದಿನಿ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಕಳ್ಳತನದ ಪ್ರಕರಣದ ತನಿಖೆ ನಡೆಸಿದಾಗ ಹತ್ಯೆಯ ಹಿಂದಿನ ರಹಸ್ಯ ಬಯಲಾಗಿದೆ. ಪೊಲೀಸರು ವಿಚಾರಣೆ ನಡೆಸಿದಾಗ ತಾನೇ ಅತ್ತೆಯನ್ನು ಕೊಂದಿರುವುದಾಗಿ ಅಶ್ವಿನಿ ತಪ್ಪೊಪ್ಪಿಕೊಂಡಿದ್ದಾಳೆ.
Student Self Harming: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣಿಗೆ ಶರಣು
ಬೆಂಗಳೂರು : ಬೆಂಗಳೂರಿನಲ್ಲಿ (Bengaluru) 16 ವರ್ಷದ ಬಾಲಕಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ (SSLC Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನಿನ್ನೆ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಮು ಹಾಗೂ ಶೋಭಾ ದಂಪತಿಯ ಮಗಳು ಕುಸುಮಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಏನಾದರೂ ಸಮಸ್ಯೆ ಆಗಿತ್ತೇ, ಅಕಾಡೆಮಿಕ್ ವಿಷಯಗಳಿಗಾಗಿ ನೊಂದಿದ್ದಳೇ, ಅಥವಾ ಕುಟುಂಬದಲ್ಲಿ ಏನಾದರೂ ಸಮಸ್ಯೆ ಇತ್ತೇ, ಡೆತ್‌ನೋಟ್ ಬರೆದಿಟ್ಟಿದ್ದಾಳೆಯೇ ಇತ್ಯಾದಿ ವಿಚಾರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ; ಪತಿ ವಿರುದ್ಧ ಕೊಲೆ ಆರೋಪ
ಹುಬ್ಬಳ್ಳಿ: ಹುಬ್ಬಳ್ಳಿಯ ನಂದಗೋಕುಲ ಬಡಾವಣೆಯಲ್ಲಿ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ನವವಿವಾಹಿತೆಯ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕಳೆದ 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜಯಶ್ರೀ (31) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಯಶ್ರೀ ಮೇ. 21 ರಂದು ಶಿವಾನಂದ್ ಜೊತೆಗೆ ಮದುವೆಯಾಗಿತ್ತು. ಶಿವಾನಂದ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ಜಯಶ್ರೀ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮದುವೆ ಬಳಿಕ ಶಿವಾನಂದ ಪ್ರೀತಿಸಿದ್ದ ಯುವತಿ, ಜಯಶ್ರೀಗೆ ತಮ್ಮ ಪ್ರೇಮದ ವಿಚಾರ ಹೇಳಿದ್ದಳಂತೆ. ಅಲ್ಲದೇ 13 ವರ್ಷದ ಪ್ರೀತಿಯನ್ನು ಮುಚ್ಚಿಟ್ಟು ನಿನ್ನನ್ನು ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಳಂತೆ. ಇದರಿಂದ ಜಯಶ್ರೀ ಹಾಗೂ ಶಿವಾನಂದ ದಂಪತಿ ನಡುವೆ ಜೋರು ಜಗಳವಾಗಿದೆ. ನಿನ್ನೆ ರಾತ್ರಿ ಕೂಡ ಗಂಡ-ಹೆಂಡತಿ ನಡುವೆ ಗಲಾಟೆಯಾಗಿದೆ. ಈಗ ಜಯಶ್ರೀ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮದುವೆ ಬಳಿಕ ಶಿವಾನಂದ ಜಯಶ್ರಿಗೆ ಮಾನಸಿಕವಾಗಿ ಕಿರುಕುಳ, ಹಿಂಸೆ ನೀಡುತ್ತಿದ್ದ. ಈಗ ತಮ್ಮ ಮಗಳನ್ನು ಕೊಲೆಗೈದು ನೇಣು ಬಿಗಿದಿದ್ದಾಗಿ ಜಯಶ್ರೀ ಪೋಷಕರು ದೂರಿದ್ದಾರೆ. ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Dharmasthala Case: ಅನನ್ಯ ಭಟ್ ಎಂಬ ಮಗಳೇ ಇರಲಿಲ್ಲ, ನಾನು ಹೇಳಿದ್ದೆಲ್ಲಾ ಸುಳ್ಳು: ಸುಜಾತ ಭಟ್