Chikkaballapur News: ಪ್ರದರ್ಶನಾತ್ಮಕ ಕಲೆಗಳನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ಪ.ಜಾತಿ/ವರ್ಗದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ನೆಲೆ ಕಲ್ಪಿಸಲಾಗುವುದು : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಸಾಮಾಜಿಕ ಸ್ಥಾನಮಾನ ಮತ್ತು ಗೌರವಗಳನ್ನು ಹೊಂದಿರದ, ನಿರ್ದಿಷ್ಟ ವಾಸದ ನೆಲೆ ಗಳಿಲ್ಲ ದೇ ಬಿಕ್ಷಾಟನೆ, ಮೋಡಿ ಆಟ, ದೊಂಬರಾಟ, ಇನ್ನಿತರ ಕಲೆಗಳನ್ನು ಪ್ರದರ್ಶಿಸಿ ಕೊಂಡು ಜೀವನ ನಡೆಸುತ್ತಿರುವವರನ್ನು ಜಿಲ್ಲೆಯಲ್ಲಿ ಗುರ್ತಿಸಿ ನಿವೇಶನ ನೀಡುವುದು, ನಿವೇಶನ ಇದ್ದವರಿಗೆ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಒಂದು ನೆಲೆ ಕಲ್ಪಿಸಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ

ಪ್ರದರ್ಶನಾತ್ಮಕ ಕಲೆಗಳನ್ನು ಅವಲಂಭಿಸಿ ಈಗಲೂ ಜೀವನ ಸಾಗಿಸುತ್ತಿರುವ ಪ.ಜಾತಿ/ವರ್ಗದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ನೆಲೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರ: ಸಾಮಾಜಿಕವಾಗಿ ತುಂಬಾ ಹಿಂದುಳಿದಿರುವ ಹಾಗೂ ಈಗಲೂ ಕೂಡ ಪ್ರದರ್ಶನಾತ್ಮಕ ಕಲೆಗಳನ್ನು ಅವಲಂಬಿಸಿ, ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ, ಪರಿ ಶಿಷ್ಟ ವರ್ಗದ ಅಲೆಮಾರಿ ಸಮುದಾಯಗಳಿಗೆ ಒಂದು ನಿರ್ದಿಷ್ಟವಾದ ನೆಲೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು. ಜಿಲ್ಲಾ ಪಂಚಾಯತ್ ನ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಕುಂದು ಕೊರತೆಗಳ ಹಾಗೂ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: Chikkaballapur News: ರೈತರಿಗೆ ಸದಸ್ಯತ್ವ ನೀಡದೆ ಏಕಪಕ್ಷ ಧೋರಣೆ
ಸಾಮಾಜಿಕ ಸ್ಥಾನಮಾನ ಮತ್ತು ಗೌರವಗಳನ್ನು ಹೊಂದಿರದ, ನಿರ್ದಿಷ್ಟ ವಾಸದ ನೆಲೆ ಗಳಿಲ್ಲದೇ ಬಿಕ್ಷಾಟನೆ, ಮೋಡಿ ಆಟ, ದೊಂಬರಾಟ, ಇನ್ನಿತರ ಕಲೆಗಳನ್ನು ಪ್ರದರ್ಶಿಸಿ ಕೊಂಡು ಜೀವನ ನಡೆಸುತ್ತಿರುವವರನ್ನು ಜಿಲ್ಲೆಯಲ್ಲಿ ಗುರ್ತಿಸಿ ನಿವೇಶನ ನೀಡುವುದು, ನಿವೇಶನ ಇದ್ದವರಿಗೆ ವಸತಿ ಸೌಲಭ್ಯ ಕಲ್ಪಿಸುವ ಮೂಲಕ ಒಂದು ನೆಲೆ ಕಲ್ಪಿಸಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಆ ನಿಟ್ಟಿನಲ್ಲಿ ಇಂದು ಕುಂದು ಕೊರತೆಗಳ ಸಭೆಯನ್ನು ಕರೆಯಲಾಗಿದೆ. ನಿವೇಶನ ಹಾಗೂ ಜಮೀನು ಮಂಜೂರು ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟು ಒಟ್ಟು 20 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ಒಟ್ಟು 2 ಅರ್ಜಿಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲೇ ಇತ್ಯರ್ಥ ಪಡಿಸಲಾಗಿದ್ದು, ಉಳಿದ ಅರ್ಜಿಗಳನ್ನು ಸಹ ಕಾಲಮಿತಿಯಲ್ಲಿ ಇತ್ಯರ್ಥ ಪಡಿಸಲು ಸೂಚನೆ ನೀಡಲಾಗಿದೆ. ವಸತಿ ಸಮಸ್ಯೆ, ಭೂಮಿ ಸಮಸ್ಯೆ, ವಿದ್ಯುತ್ ಸಮಸ್ಯೆ, ರುದ್ರ ಭೂಮಿ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದು ಶೀಘ್ರ ದಲ್ಲಿಯೇ ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇರವಾಗಿ ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಪ್ರವೇಶ ಕಲ್ಪಿಸ ಲು ಕ್ರಮವಹಿಸಲಾಗುವುದು ಎಂದರು.
ಎಲ್ಲ ತಹಸೀಲ್ದಾರ್ ಗಳು ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಗಳು ಅಲೆಮಾರಿ ಸಮುದಾಯದ ಅಹವಾಲುಗಳನ್ನು ಇತ್ಯರ್ಥ ಪಡಿಸಲು ಆದ್ಯತೆ ನೀಡ ಬೇಕು. ತಮ್ಮ ವ್ಯಾಪ್ತಿಯಲ್ಲಿ ಈ ಸಮುದಾಯವರು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿ, ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಲೆಮಾರಿ ಸಮುದಾಯಗಳಾದ ದೊಂಬರು, ಬುಡ್ಗಜಂಗಮ, ಹಂದಿ ಜೋಗಿ, ಚನ್ನದಾಸರ್, ಸುಡುಗಾಡು, ಸಿದ್ದರು, ಮಾಲಸನ್ಯಾಸಿ, ಶಿಳ್ಯೆಕ್ಯಾತ, ದಕ್ಕಲಿಗರು, ಮಾಂಗ್ ಗಾರುಡಿ, ಸಿಂದೋಳ್ಳು, ಕೊರಚ-ಕೊರಮ, ಹಕ್ಕಿ-ಪಿಕ್ಕಿ, ಮೇದಾರ ಸಮುದಾಯ ಗಳು ಸೇರಿದಂತೆ ಇನ್ನಿತರ ಸಮುದಾಯದ ಜನರು ತಮ್ಮ ಸಮಸ್ಯೆಗಳ ಇತ್ಯರ್ಥಕ್ಕೆ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಬಾಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ, ಚಿಕ್ಕಬಳ್ಳಾಪುರ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ವಿ. ಗಂಗಾಧರಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸ ಸೇರಿದಂತೆ ಸಮುದಾ ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ವಿವಿಧ ಸರ್ಕಾರೇತ ಸಂಸ್ಥೆಗಳ ಸದಸ್ಯರು, ಪದಾಧಿ ಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಸಮುದಾ ಯಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು