ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Bhadravathi News: ತಡರಾತ್ರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು; ಬೆಳಗ್ಗೆ ಪುನಃ ಬಂತು ಜೀವ!

Bhadravathi News: ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಗೃಹಿಣಿಯೊಬ್ಬರು ಮೃತಪಟ್ಟಿದ್ದರು. ಹೀಗಾಗಿ ಅಂತ್ಯ ಸಂಸ್ಕಾರಕ್ಕೆಂದು ಮೃತದೇಹವನ್ನು ಕುಟುಂವಸ್ಥರು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ಮಹಿಳೆ ಮತ್ತೆ ಕಣ್ತೆರೆದು, ಉಸಿರಾಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡರಾತ್ರಿ ಆಸ್ಪತ್ರೆಯಲ್ಲಿ ಮಹಿಳೆ ಸಾವು; ಬೆಳಗ್ಗೆ ಪುನಃ ಬಂತು ಜೀವ!

Profile Prabhakara R Feb 26, 2025 6:40 PM

ಭದ್ರಾವತಿ: ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಗೃಹಿಣಿಯೊಬ್ಬರು ಸೋಮವಾರ ರಾತ್ರಿ ನಿಧನರಾಗಿದ್ದಾರೆಂದು ವೈದ್ಯರು ದೃಢೀಕರಿಸಿದ್ದರು. ಮಂಗಳವಾರ ಬೆಳಗ್ಗೆ ಅವರ ನಿವಾಸಕ್ಕೆ ಮೃತ ದೇಹವನ್ನು ತೆಗೆದುಕೊಂಡು ಹೋದಾಗ ಕಣ್ತೆರೆದು ಉಸಿರಾಡಿದ ವಿಸ್ಮಯ ಘಟನೆ ನಡೆದಿದೆ. ಗಾಂಧಿನಗರ (Bhadravathi News) ನಿವಾಸಿ ಗುತ್ತಿಗೆದಾರ ಸುಬ್ರಮಣಿ ಅವರ ಪತ್ನಿ ಮೀನಾಕ್ಷಿ(52) ಅವರನ್ನು ಅನಾರೋಗ್ಯದ ಹಿನ್ನೆಲೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಮೀನಾಕ್ಷಿ ನಿಧನರಾದರೆಂದು ವೈದ್ಯರು ದೃಢಪಡಿಸಿದ್ದರು. ವಿಷಯ ತಿಳಿದ ಅವರ ಬಂಧು ಬಳಗ ಸೇರಿ ನೂರಾರು ಮಂದಿ ಅವರ ನಿವಾಸದ ಬಳಿ ನೆರೆದಿದ್ದರು. ಮಂಗಳವಾರ ಬೆಳಗ್ಗೆ ಮೃತ ದೇಹ ಅವರ ನಿವಾಸಕ್ಕೆ ತಲುಪಿದಾಗ ಮೃತರಾಗಿದ್ದವರು ಕಣ್ತೆರೆದು ನೋಡಿ ಉಸಿರಾಡಿದ್ದಾರೆ.

ಕುಟುಂಬಸ್ಥರು ಅಚ್ಚರಿಗೊಂಡು ನೀರು ಕುಡಿಸಿ, ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಯಾರಾದರೂ ಮಾತನಾಡಿದರೆ ಉತ್ತರಿಸುತ್ತಾರೆಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನೂ ಓದಿ | ಕೆರೂರ ರಸ್ತೆಗಳಲ್ಲ, ಮೃತ್ಯೂ ಕೂಪಗಳು, ಚರಂಡಿಗಳು, ತಿಪ್ಪೆಗಳು ರೋಗದ ಕಾರ್ಖಾನೆ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 'ಆದಿಯೋಗಿ' ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರ ದುರ್ಮರಣ!

ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದ್ದು, ಶಿವ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರ ಬಳಿಯ ಆದಿಯೋಗಿ ಪ್ರತಿಮೆ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಆದರೆ ಆದಿಯೋಗಿ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ (Road Accident) ನಡೆದಿದೆ. ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಮೃತ ಯುವಕರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ದುರಂತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಇದರಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ | Assault Case: ಟಿಕೆಟ್ ಬೆಲೆ ಏರಿಸಿದ್ದಕ್ಕೆ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಕುಡುಕ!

ಮೃತ ಯುವಕರು ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೈಕ್‌ನಲ್ಲಿದ್ದ ಸುನಿಲ್ ಬಿಡ್ತೀರಿ ಹಾಗೂ ಕುಜಲ್ ಭಂಡಾರಿ ದುರ್ಮರಣ ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.