ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ‌ಆರೆಂಜ್‌ ಅಲರ್ಟ್; ಇಂದು ಕೊಡಗು, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Karnataka Rains: ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಮೈಸೂರು ಸೇರಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇಂದು ಕೊಡಗು, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Profile Prabhakara R Jul 17, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ಇದೆ. ಜುಲೈ 17ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ವ್ಯಾಪಕ ಮಳೆಯಾಗುವ (Karnataka Rains) ಸಾಧ್ಯತೆ ಇದೆ.

ಇನ್ನು ಜುಲೈ 18ರಂದು ಕೂಡ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಜುಲೈ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಇನ್ನುಳಿದಂತೆ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಜುಲೈ 20ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ.