Sirsi News: ದಾಂಡೇಲಿ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಹೆಜ್ಜೇನು ದಾಳಿ, ಮೂವರಿಗೆ ಗಾಯ
ಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಬುಧವಾರ ಹೆಜ್ಜೇನು ದಾಳಿಯಿಂದ ಮೂವರಿಗೆ ಗಾಯ ವಾದ ಘಟನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ನಿವಾಸಿಗಳಾದ ಮಹಮ್ಮದ್ ಇಸಾಕ್, ಬಹದ್ದೂರ್ ಖಾನ್ ಮತ್ತು ಮನೋಜ್ ಕುಮಾರ್ ಇವರು ಹೆಜ್ಜೇನು ದಾಳಿಯಿಂದ ಗಾಯಗೊಂಡು ನಗರದ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ದ್ದಾರೆ.


ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಬುಧವಾರ ಹೆಜ್ಜೇನು ದಾಳಿಯಿಂದ ಮೂವರಿಗೆ ಗಾಯವಾದ ಘಟನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ನಿವಾಸಿಗಳಾದ ಮಹಮ್ಮದ್ ಇಸಾಕ್, ಬಹದ್ದೂರ್ ಖಾನ್ ಮತ್ತು ಮನೋಜ್ ಕುಮಾರ್ ಇವರು ಹೆಜ್ಜೇನು ದಾಳಿಯಿಂದ ಗಾಯಗೊಂಡು ನಗರದ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ: Sirsi News: ಮಂಗನ ದಾಳಿ: ಕಾರ್ಮಿಕನ ಕಾಲಿಗೆ ಕಚ್ಚಿ ಗಂಭೀರ ಗಾಯ
ಏಕಾಏಕಿ ಹೆಜ್ಜೇನು ದಾಳಿ ಮಾಡಿದ ಪರಿಣಾಮ ವಾಗಿ ಅಲ್ಲಿದ್ದ ಜನರು ದಿಕ್ಕಾಪಾಲಾಗಿ ಓಡಿಹೋಗಿ, ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.