Tumkur News: ತುಮಕೂರಲ್ಲಿ ಆಯಿಲ್‌ ಟ್ಯಾಂಕ್ ಸ್ಫೋಟವಾಗಿ ಇಬ್ಬರು ಕಾರ್ಮಿಕರ ದುರ್ಮರಣ, ಮೂವರಿಗೆ ಗಾಯ

Tumkur News: ತುಮಕೂರಿನ ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Fire accident (1)
Profile Prabhakara R Jan 28, 2025 6:32 PM

ತುಮಕೂರು: ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನ (Tumkur News) ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಫ್ಯಾಕ್ಟರಿ ಇದಾಗಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಆಗ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ | Muda case: ಇಡಿ ವಿಚಾರಣೆಯಿಂದ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ರಿಲೀಫ್‌; ಸಮನ್ಸ್‌ಗೆ ಮಧ್ಯಂತರ ತಡೆ

ಗ್ರಾಮಸ್ಥರ ಹೆಸರಿನಲ್ಲಿ ಲಕ್ಷ ಲಕ್ಷ ಸಾಲ ಪಡೆದು ದಂಪತಿ ಪರಾರಿ!

Madhugiri News


ಮಧುಗಿರಿ:
ಸುಮಾರು 10ಕ್ಕೂ ಅಧಿಕ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಗ್ರಾಮಸ್ಥರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು, ಮರು ಪಾವತಿಸದೇ ಹಣದ ಸಮೇತ ದಂಪತಿ ಪರಾರಿಯಾಗಿರುವ ಘಟನೆ ತಾಲೂಕಿನ ಪುರವರ ಹೋಬಳಿ ದೊಡ್ಡಹೊಸಹಳ್ಳಿಯಲ್ಲಿ ನಡೆದಿದೆ.

ತಾಲೂಕಿನ ಪುರವರ ಹೋಬಳಿ ದೊಡ್ಡಹೊಸಹಳ್ಳಿ ಗ್ರಾಮದ ಪ್ರತಾಪ ಮತ್ತು ರತ್ನಮ್ಮ ಎಂಬುವರು ಸುಮಾರು 35 ಮಂದಿಯ ಆಧಾರ್ ಕಾರ್ಡ್, ಇತರೆ ದಾಖಲೆ ಪಡೆದಿದ್ದರು. 10 ಮೈಕ್ರೋ ಫೈನಾನ್ಸ್ ಕಂಪನಿಗಳಿಂದ 45 ರಿಂದ 50 ಲಕ್ಷದವರೆಗೆ ಸಾಲ ಮಂಜೂರು ಮಾಡಿಸಿದ್ದರು. ಜನರಿಗೆ ಮಂಜೂರಾದ ಸಾಲದ ಹಣ ಪಡೆದು ನಾವೇ ಕಟ್ಟಿಕೊಂಡು ಹೋಗುತ್ತೇವೆ ಎಂದು ನಂಬಿಸಿ ಮೋಸ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿ ಜತೆಗೆ ದಂಪತಿ ಒಡನಾಟ ಇಟ್ಟುಕೊಂಡು ಪ್ರಾರಂಭದಲ್ಲಿ ಕೆಲವರಿಗೆ ಸಾಲ ಕೊಡಿಸಿದ್ದರು. ನಂತರ ಗ್ರಾಮದ 35 ಮಂದಿಗೆ ಸಾಲ ಕೊಡಿಸಿದ್ದಾರೆ. ಪ್ರತಿ ತಿಂಗಳು ನಾವೇ ಈ ಹಣವನ್ನು ಕಟ್ಟಿಕೊಂಡು ಹೋಗುತ್ತೇವೆ ಎಂದು ನಂಬಿಸಿ ಹಣದ ಸಮೇತ 2 ತಿಂಗಳ ಹಿಂದೆ ಪರಾರಿಯಾಗಿದ್ದಾರೆ.

ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಮರು ಪಾವತಿ ಮಾಡುವಂತೆ ಗ್ರಾಮಸ್ಥರಿಗೆ ನೋಟಿಸ್ ಜಾರಿ ಮಾಡಿವೆ. ಫೈನಾನ್ಸ್ ಸಿಬ್ಬಂದಿ ಪ್ರತಿ ದಿನ ಮನೆಗಳ ಮುಂದೆ ಬಂದು ಸಾಲ ಕಟ್ಟುವಂತೆ ಒತ್ತಡ ಹೇರುತ್ತಿದ್ದಾರೆ. ನಮ್ಮ ಹಣವನ್ನು ಪಡೆದು ದಂಪತಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮದ ರಂಗಮ್ಮ, ಸಾವಿತ್ರಮ್ಮ, ನರಸಮ್ಮ, ಕೋಟೆಮ್ಮ ಸಿದ್ದಗಂಗಮ್ಮ, ರತ್ನಮ್ಮ, ಎಸ್‌.ರಂಗಮ್ಮ, ಕೋಮಲಮ್ಮ, ಲಕ್ಷ್ಮೀದೇವಮ್ಮ, ಮಂಜುಳಾ, ವೀರನಾಗಮ್ಮ, ಹನುಮಕ್ಕ, ಮಂಜುಳಮ್ಮ, ಮೇಘಾ, ಪುಟ್ಟ ತಾಯಪ್ಪ ತಿಳಿಸಿದ್ದಾರೆ.

ನಾವು ಗ್ರಾಮಸ್ಥರ ಹೆಸರಿನಲ್ಲಿ ಯಾವುದೇ ರೀತಿಯ ಸಾಲ ಪಡೆದು ಪರಾರಿಯಾಗಿಲ್ಲ. ಯಾವುದೇ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಈ ಬಗ್ಗೆ ಸುಮ್ಮನೆ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ದಂಪತಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದಿಂದ ರೌಡಿಗಳಿಗೆ ಕೈ ತುಂಬಾ ಉದ್ಯೋಗ: ಆರ್‌.ಅಶೋಕ್‌

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?