Power Cut: ತುಮಕೂರು: ಫೆ. 24, ಫೆ. 27, ಫೆ. 28ರಂದು ವಿವಿಧ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ
ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿ ಬೆಸ್ಕಾಂ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಫೆ. 24, ಫೆ. 27 ಹಾಗೂ ಫೆ. 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.

ಸಾಂದರ್ಭಿಕ ಚಿತ್ರ.

ತುಮಕೂರು: ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿ ಬೆಸ್ಕಾಂ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆ. 24, ಫೆ. 27 ಹಾಗೂ ಫೆ. 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ.
ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ತುಮಕೂರು ಹೊರ ವಲಯದಲ್ಲಿ ಬರುವ ಕೆಲವು ಹಳ್ಳಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಈ ಕೆಳಗಿನ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ ಆಗಲಿದೆ.
ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್ ಕುಂಟಮ್ಮನತೋಟ, ದಿಬ್ಬೂರು, ಬಿ.ಎಚ್. ಪಾಳ್ಯ, ಹಾರೋನಹಳ್ಳಿ ಹಾಗೂ ಹೊನ್ನೆನಹಳ್ಳಿಯಲ್ಲಿ ಫೆ. 24 ಹಾಗೂ ಫೆ. 27ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಫೆ. 28ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆಣೆತೋಟ, ಜಗನ್ನಾಥ ನಗರ, ಶಾರದಾದೇವಿ ನಗರ, ಗಣೇಶನಗರ ಹಾಗೂ ನಿರ್ವಾಣಿ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ: Property Registration: ಫೆ.27ರಿಂದ ರಾಜ್ಯದಲ್ಲಿ ಅಸ್ತಿ ನೋಂದಣಿ ಬಂದ್! ಕಾರಣ ಇಲ್ಲಿದೆ
ವಿದ್ಯುತ್ ನಿರ್ಹವಣೆ ಕಾಮಗಾರಿ ಕೆಲವೇ ಪ್ರದೇಶಗಳಿಗೆ ಸೀಮಿತಗೊಂಡಿರುವುದರಿಂದ ತುಮಕೂರು ನಗರ ಹಾಗೂ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.