ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drowned: ಯಾದಗಿರಿಯಲ್ಲಿ ಈಜಲು ಹೋದ ಯುವಕರಿಬ್ಬರು ನೀರುಪಾಲು

ಈಜಲು ನೀರಿಗೆ ಇಳಿದ ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಈಜಲಾಗದೆ (Drowned) ಮುಳುಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯ (Yadagiri news) ಸುರಪುರ ತಾಲೂಕಿನ ಏವೂರ ಗ್ರಾಮದ ಬಳಿಯ ಬಸವಸಾಗರ ಜಲಾಶಯದ ಜೆಬಿಸಿ ಕಾಲುವೆಯಲ್ಲಿ (JB Channel) ಈಜಲು (Swim) ಹೋಗಿದ್ದ ಇಬ್ಬರು ಕುರಿಗಾಹಿಗಳು ನೀರುಪಾಲು (Drowned) ಆಗಿದ್ದಾರೆ. ವಿಜಯಪುರ ಮೂಲದ ಜಟ್ಟೆಪ್ಪ (19), ಕರಿಯಪ್ಪ (19) ಮೃತರು. ರವಿವಾರ (ಮೇ.18) ಒಟ್ಟು ಆರು ಮಂದಿ ಕುರಿಗಾಹಿಗಳು ಕುರಿ ಮೇಯಿಸಲು ತೆರಳಿದ್ದರು. ಆರೂ ಮಂದಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಆರು ಮಂದಿ ಕುರಿಗಾಹಿಗಳ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಈಜಲಾಗದೆ ಮುಳುಗಿದ್ದು, ನಾಲ್ವರು ಪಾರಾಗಿದ್ದಾರೆ. ನೀರುಪಾಲಾಗಿರುವ ಕುರಿಗಾಹಿಗಳಿಗಾಗಿ ಕಾಲುವೆಯಲ್ಲಿ ಶೋಧ ಕಾರ್ಯಾ ನಡೆಯುತ್ತಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಡದಿಯಲ್ಲಿ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ

ಮಂಡ್ಯ: ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ (Physical abuse) ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಕರಿಕ್ಯಾತನಹಳ್ಳಿಯಲ್ಲಿ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಗ್ರಾಮದ 19 ವರ್ಷದ ಬುದ್ಧಿಮಾಂದ್ಯ ಯುವತಿ ಮನೆಯವರು ಕಾರ್ಯನಿಮಿತ್ತ ಬೇರೊಂದು ಗ್ರಾಮಕ್ಕೆ ತೆರಳಿದ್ಧ ವೇಳೆ ಮೆಣಸಿನಕಾಯಿ ಕೇಳುವ ನೆಪದಲ್ಲಿ ಯುವತಿ ಮನೆಗೆ ಹೋಗಿದ್ದ ಅದೇ ಗ್ರಾಮದ 17 ವರ್ಷದ ಬಾಲಕ, ಯುವತಿ ಬಾಯಿಗೆ ಬಟ್ಟೆ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಯುವತಿಯ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

ದೌರ್ಜನ್ಯಕ್ಕೊಳಗಾದ ಯುವತಿಯ ಪೋಷಕರು ನೀಡಿದ ದೂರಿನನ್ವಯ ಶುಕ್ರವಾರ ರಾತ್ರಿ ಡಿವೈಎಸ್‌ಪಿ ಬಿ.ಚಲುವರಾಜು, ಸಿಪಿಐ ನಿರಂಜನ್ ಹಾಗೂ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರಾಜೇಂದ್ರ ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಜಡ್ಜ್ ಮುಂದೆ ಬಾಲಕನನ್ನು ಹಾಜರುಪಡಿಸಿ, ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: Bidadi Girl death case: ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ

ಹರೀಶ್‌ ಕೇರ

View all posts by this author