Udit Narayan: ಗಾಯಕ ಉದಿತ್‌ ನಾರಾಯಣ್‌ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ; ಓರ್ವ ಬಲಿ

Udit Narayan: ಗಾಯಕ ಉದಿತ್‌ ನಾರಾಯಣ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

image-483c003b-f46c-4c88-93ad-279a6d2b137f.jpg
Profile Deekshith Nair Jan 8, 2025 12:51 PM
ಮುಂಬೈ: ಖ್ಯಾತ ಗಾಯಕ ಉದಿತ್ ನಾರಾಯಣ್(Udit Narayan) ವಾಸವಾಗಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ(ಜ.6) ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಭೀಕರ ದುರ್ಘಟನೆಯಲ್ಲಿ ಓರ್ವ ಬಲಿಯಾಗಿದ್ದಾನೆ.
Udit Narayan के बिल्डिंग में लगी आग, हादसे में झुलसने से पड़ोसी की मौत की खबर ... #uditnarayan #Building #fire #neighbors https://t.co/l56PDeCvZe— Lallu Ram (@lalluram_news) January 7, 2025
ಜನವರಿ 6 ರಂದು ರಾತ್ರಿ 9.15 ರ ಸರಿ ಸುಮಾರಿಗೆ ಅಂಧೇರಿಯ ಶಾಸ್ತ್ರಿನಗರದಲ್ಲಿರುವ ಪೆನ್ ಅಪಾರ್ಟ್‌ಮೆಂಟ್‌ನಲ್ಲಿ ಈ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ(Fire Caught)
ಸ್ಟೈಪೆನ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣದಲ್ಲಿ ಕಟ್ಟಡದ ಹಲವು ಮಹಡಿಗಳಿಗೆ ಬೆಂಕಿ ವೇಗವಾಗಿ ಹರಡಿದ್ದು, ನಿವಾಸಿಗಳು ಭಯದಲ್ಲಿ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ವಿಚಾರ ತಿಳಿಯುತ್ತಿದ್ದಂತೆ ತಕ್ಷಣ ಅಗ್ನಿಶಾಮಕ ತಂಡ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದೆ. ಬಳಿಕ ಪರಿಸ್ಥಿತಿ ತಿಳಿಗೊಂಡಿದೆ. ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಕಟ್ಟಡವನ್ನು ತೆರವುಗೊಳಿಸಿದ್ದಾರೆ.
ಓರ್ವ ವ್ಯಕ್ತಿ ಸಾವು
ವಿಕ್ಕಿ ಲಾಲ್ವಾನಿ ಎಂಬುವರು ತಮ್ಮ ಇನ್‌ಸ್ಟಾಗ್ರಾಮ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಗಾಯಕ ಉದಿತ್ ನಾರಾಯಣ್ ಅವರ ಪಕ್ಕದ ಮನೆಯವರಾದ ರಾಹುಲ್ ಮಿಶ್ರಾ ಎಂಬಾತ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಬೆಂಕಿ ಹೊತ್ತಿಕೊಂಡ ಬಳಿಕ ಮಿಶ್ರಾ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಚಿಕಿತ್ಸೆಗೆ ರಾಹುಲ್ ಮಿಶ್ರಾ ಸ್ಪಂದಿಸಿಲ್ಲ. ಚಿಕಿತ್ಸೆ ಫಲಿಸದೆ ಮಿಶ್ರಾ ಅವರು ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡ ಸಂಭವಿಸಿದ್ದ ಈ ಕಟ್ಟಡದಲ್ಲಿ ವಾಸಿಸುತ್ತಿದ್ದ ಗಾಯಕ ಉದಿತ್ ನಾರಾಯಣ್ ಸುರಕ್ಷಿತವಾಗಿದ್ದಾರೆ . ಪಕ್ಕದ ಮನೆಯ ರಾಹುಲ್ ಮಿಶ್ರಾ ಸಾವಿಗೆ ಗಾಯಕ ಸಂತಾಪ ಸೂಚಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದು ವಿದ್ಯುತ್ ದೋಷದಿಂದ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾನಸಿಕವಾಗಿ ನೊಂದಿದ್ದೇನೆ-ಉದಿತ್
ಅಪಾರ್ಟ್‌ಮೆಂಟ್‌ ಗೆ ಬೆಂಕಿ ತಗುಲಿದ ಸುಮಾರು ನಾಲ್ಕು ಗಂಟೆಗಳ ನಂತರ ಮಂಗಳವಾರ(ಜ.7) ಬೆಳಗಿನ ಜಾವ 1.49ಕ್ಕೆ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಉದಿತ್ ನಾರಾಯಣ್ ಹೇಳಿದ್ದಾರೆ. ''ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ನಾನು ಎ ವಿಂಗ್‌ನಲ್ಲಿ 11 ನೇ ಮಹಡಿಯಲ್ಲಿ ವಾಸವಿದ್ದೇನೆ. ಬಿ ವಿಂಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಾವೆಲ್ಲರೂ ಇಳಿದು ಮೂರ್ನಾಲ್ಕು ಗಂಟೆಗಳ ಕಾಲ ಕಟ್ಟಡದ ಹೊರಗಡೆ ನಿಂತುಕೊಂಡೆವು. ಇದು ತುಂಬಾ ಅಪಾಯಕಾರಿ, ಏನು ಬೇಕಾದರೂ ಆಗಬಹುದಿತ್ತು. ಈಗ ನಾವು ಸುರಕ್ಷಿತವಾಗಿದ್ದೇವೆ. ದೇವರಿಗೆ ಮತ್ತು ನಮ್ಮ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಉದಿತ್ ತಿಳಿಸಿದ್ದಾರೆ.‌
"ಈ ಘಟನೆಯು ನನ್ನ ಮೇಲೆ ಮಾನಸಿಕವಾಗಿ ಪರಿಣಾಮ ಬೀರಿದೆ. ನಾನು ನೊಂದಿದ್ದೇನೆ. ಇದರಿಂದ ಹೊರಬರಲು ಸ್ವಲ್ಪ ಸಮಯ ಬೇಕು. ಇಂಥ ಘಟನೆಯನ್ನು ಹತ್ತಿರದಿಂದ ನೋಡಿದಾಗ ಮಾತ್ರ ನಿಮಗೆ ಪರಿಸ್ಥಿತಿ ಅರ್ಥವಾಗುತ್ತದೆ" ಎಂದು ಗಾಯಕ ಉದಿತ್‌ ನಾರಾಯಣ್ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ:Shops caught fire: ಆಕಸ್ಮಿಕ ಬೆಂಕಿ: ಅಪಾರ ನಷ್ಟ
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?