Tilak Varma: ಅಜೇಯ ಇನಿಂಗ್ಸ್ ಮೂಲಕ ದಾಖಲೆ ಬರೆದ ತಿಲಕ್ ವರ್ಮ
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 166 ರನ್ ಬಾರಿಸಿದರೆ, ಭಾರತ 19.2 ಓವರ್‌ಗಳಲ್ಲಿ 167 ರನ್ ಗಳಿಸಿ ಗೆಲುವು ದಾಖಲಿಸಿತು.

Tilak Varma

ಚೆನ್ನೈ: ಇಂಗ್ಲೆಂಡ್(India vs England) ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಅಜೇಯ 72 ರನ್ ಬಾರಿಸಿ ಭಾರತದ ಗೆಲುವಿನ ಹೀರೊ ಎನಿಸಿದ್ದ ಎಡಗೈ ಬ್ಯಾಟರ್ ತಿಲಕ್ ವರ್ಮ(Tilak Varma), ಈ ಅಮೋಘ ಇನಿಂಗ್ಸ್ ಮೂಲಕ
ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ತಿಲಕ್ ಅಜೇಯ 72 ರನ್ ಬಾರಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಔಟಾಗದೆ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆಗೆ ಪಾತ್ರರಾದರು. ತಿಲಕ್ ವರ್ಮಾ ಆಡಿರುವ ಈ ಹಿಂದಿನ ಮೂರು ಟಿ20 ಪಂದ್ಯಗಳಲ್ಲಿ ಅಜೇಯ ಇನಿಂಗ್ಸ್ ಆಡಿದ್ದರು. 19, 120 ಮತ್ತು 107 ರನ್ ಗಳಿಸಿದ್ದರು. ಇದೀಗ ತಮ್ಮ ನಾಲ್ಕನೇ ಇನಿಂಗ್ಸ್‌ನಲ್ಲಿಯೂ ಅಜೇಯ ಆಟವಾಡುವ ಮೂಲಕ ದಾಖಲೆ ನಿರ್ಮಿಸಿದರು.
ಇದುವರೆಗೂ ಅಜೇಯವಾಗಿ ಅತೀ ಹೆಚ್ಚು ರನ್ ಗಳಿಸಿದರವ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಮಾರ್ಕ್ ಚಾಪ್‌ಮನ್(271) ಅಗ್ರಸ್ಥಾನದಲ್ಲಿದ್ದರು. ತಿಲಕ್ 318 ರನ್ ಬಾರಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ (240) ಮತ್ತು ನಾಲ್ಕನೇ ಸ್ಥಾನದಲ್ಲಿ ಆರೋನ್ ಫಿಂಚ್ (240) ಇದ್ದಾರೆ.
ಇದನ್ನೂ ಓದಿ Jos Buttler: ಪಂದ್ಯ ಸೋತರೂ 2 ದಾಖಲೆ ಬರೆದ ಜಾಸ್ ಬಟ್ಲರ್
ಸ್ಪರ್ಧಾತ್ಮಕ ಗುರಿಯನ್ನು ಹಿಂಬಾಲಿಸಿದ ಭಾರತ ತಂಡದ ಪರ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಧ್ರುವ್ ಜುರೆಲ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ವಾಷಿಂಗ್ಟನ್ ಸುಂದರ್ 26 ರನ್‌ಗಳ ನಿರ್ಣಾಯಕ ಕೊಡುಗೆ ನೀಡಿ ವಿಕೆಟ್ ಒಪ್ಪಿಸಿದರು. ಆದರೆ, ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಬ್ಯಾಟ್ ಮಾಡಿದ ತಿಲಕ್ ವರ್ಮಾ, ಅತ್ಯಂತ ಜವಾಬ್ದಾರಿಯುತವಾಗಿ ಆಟವಾಡಿದರು.
2️⃣-0️⃣ 🙌
— BCCI (@BCCI) January 25, 2025
Tilak Varma finishes in style and #TeamIndia register a 2-wicket win in Chennai! 👌
Scorecard ▶️ https://t.co/6RwYIFWg7i #INDvENG | @IDFCFIRSTBank pic.twitter.com/d9jg3O02IB
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ 166 ರನ್ ಬಾರಿಸಿದರೆ, ಭಾರತ 19.2 ಓವರ್‌ಗಳಲ್ಲಿ 167 ರನ್ ಗಳಿಸಿ ಗೆಲುವು ದಾಖಲಿಸಿತು. ಇಂಗ್ಲೆಂಡ್ ಪರ ಬಿರುಸಿನ ಬ್ಯಾಟಿಂಗ್ ನಡೆಸಿದ ಬಟ್ಲರ್ 3 ಸಿಕ್ಸರ್ ಮತ್ತು 2 ಬೌಂಡರಿ ನೆರವಿನಿಂದ 45 ರನ್ ಬಾರಿಸಿದರು. ಇದೇ ವೇಳೆ ಭಾರತ ವಿರುದ್ಧ ಟಿ20ಯಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್(592) ಹೆಸರಿನಲ್ಲಿತ್ತು. ಇದೀಗ ಬಟ್ಲರ್(611) ರನ್ ಬಾರಿಸಿದ್ದಾರೆ.