Accid attack: ಮದುವೆಗೆ ನಿರಾಕರಿಸಿದ ಸೊಸೆ ಮೇಲೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ
Acid Attack: ಸೊಸೆ ವೈಶಾಲಿ ಮೇಲೆ ಆ್ಯಸಿಡ್ ದಾಳಿ ಮಾಡಿದ ಬಳಿಕ ಆನಂದ್ ಭಯಗೊಂಡು ತಾನೂ ಸಹ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಗಾಯಗೊಂಡಿರುವ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನಂದ್ ಮೇಲೆ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ತನ್ನನ್ನು ಮದುವೆಯಾಗಲು (Marriage) ನಿರಾಕರಿಸುತ್ತಿದ್ದಾಳೆಂದು ಕೋಪಗೊಂಡ ಸೋದರ ಮಾವ, ಸೊಸೆ ಮೇಲೆಯೇ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿರುವ (acid attack) ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಅನಂದ್ ಕುಮಾರ್ ಎನ್ನುವಾತ ಅತ್ತೆಯ ಮಗಳು ವೈಶಾಲಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಬಳಿಕ ಆನಂದ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (Self harming) ಯತ್ನಿಸಿದ್ದಾನೆ.
ಗಾಯಗೊಂಡಿರುವ ವೈಶಾಲಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಸೋದರ ಮಾವ ಆನಂದ್ ಸಹ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಅನಂದ್ ಕುಮಾರನಿಗೆ ವೈಶಾಲಿ ಅತ್ತೆ ಮಗಳು ಆಗಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ. ಮದುವೆ ಮಾಡಿಕೊಳ್ಳುವ ಕನಸು ಕಂಡಿದ್ದ. ಆದರೆ ಇದಕ್ಕೆ ವೈಶಾಲಿ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆನಂದ್, ಸೋಮವಾರ ಅತ್ತೆ ಮನೆ ಬಳಿ ಬಂದು ಸೊಸೆ ವೈಶಾಲಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಬಳಿಕ ಭಯಗೊಂಡು ತಾನೂ ಸಹ ಬೆಂಕಿ ಹಚ್ಚಿಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನಂದ್ ಮೇಲೆ ಪ್ರಕರಣ ದಾಖಲಾಗಿದೆ.
41 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಶಿರಸಿ: ಹಲವಾರು ವರ್ಷಗಳ ಹಿಂದೆ ಪ್ರಕರಣಗಳು ದಾಖಲಾಗಿ ನಂತರ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯಗಳಿಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಗಳ ಹೆಡೆಮುರಿಕಟ್ಟುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂರು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕಳೆದ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು (Sirsi News) ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಡೂರ ನಿವಾಸಿ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕಳೆದ 41 ವರ್ಷಗಳ ಹಿಂದೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಶಿರಸಿ ನಗರ ಪೊಲೀಸರು ಈತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಈತ ಬೇರೆ ಜಿಲ್ಲೆಯವನಾಗಿದ್ದರಿಂದ ಶಿಕ್ಷೆಯಿಂದ ಬಚಾವ್ ಆಗಲು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಶಿರಸಿ ನ್ಯಾಯಾಲಯವು ಇತನ ವಿರುದ್ದ ವಾರೆಂಟ್ ಹೊರಡಿಸಿತ್ತು. ಶಿರಸಿ ನಗರ ಪೊಲೀಸರು ಆರೋಪಿತನ ಪತ್ತೆಗಾಗಿ ಬೆಳ್ತಂಗಡಿ, ಮಂಗಳೂರು, ಉಡುಪಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮಾಹಿತಿ ಸಂಗ್ರಹಿಸಿದ್ದರು. ಆರೋಪಿತ ಫಾಸ್ಕಲ್ ಮಾರ್ಟಿನ್ ರೊಡ್ರಿಗಸ್ ನೀಡಿದ್ದ ವಿಳಾಸವನ್ನೇ ಬದಲಾಯಿಸಿ ಬೆಂಗಳೂರಿನ ಬಗಲಗುಂಟೆಯಲ್ಲಿ ತಲೆಮರೆಸಿಕೊಂಡಿದ್ದು, ನಂತರ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಆರೋಪಿತನ ಪತ್ತೆಗೆ ಕ್ರಮ ವಿಶೇಷ ಕ್ರಮ ತೆಗೆದುಕೊಂಡ ಶಿರಸಿ ನಗರ ಠಾಣೆ ಪೊಲೀಸರು ಕೊನೆಗೂ ಆತನನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ: NIA Raid: ಐದು ಕಡೆ ಎನ್‌ಐಎ ದಾಳಿ, ಮೂವರು ಶಂಕಿತ ಉಗ್ರರು ವಶಕ್ಕೆ